ಬ್ರೇಕಿಂಗ್ ನ್ಯೂಸ್
19-03-25 11:39 am Bangalore Correspondent ಕರ್ನಾಟಕ
ಬೆಂಗಳೂರು, ಮಾ.19 : ಸೌಜನ್ಯ ಕೊಲೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಹಾಗೂ ತಪ್ಪಿತಸ್ಥರ ಶಿಕ್ಷೆಗೆ ಆಗ್ರಹಿಸಿ ಧರ್ಮಸ್ಥಳ ಚಲೋ ನಡೆಸಬೇಕು ಎಂಬ ಬಗ್ಗೆ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಸಮಾನ ಮನಸ್ಕರು ನಿರ್ಣಯ ಕೈಗೊಂಡಿದ್ದಾರೆ.
ಸೌಜನ್ಯಾ ಪ್ರಕರಣದಲ್ಲಿ ಮುಂದಿನ ಹೋರಾಟದ ಬಗ್ಗೆ ಚರ್ಚಿಸಲು ನಗರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಮಾಲೋಚನಾ ಸಭೆಯಲ್ಲಿ ಚಿಂತಕರು, ರಂಗಕರ್ಮಿಗಳು ಹಾಗೂ ವಿವಿಧ ಭಾಗದ ಎಡಪಂಥೀಯ ಹೋರಾಟಗಾರರು ಭಾಗವಹಿಸಿದ್ದರು. ಸಭೆಯಲ್ಲಿ ಪ್ರಕರಣದ ಬಗ್ಗೆ ಚರ್ಚೆ ನಡೆಸಿದ್ದು ಘಟನೆ ಬಗ್ಗೆ ಸಾರ್ವಜನಿಕರ ಗಮನಸೆಳೆಯಲು ಪಾದಯಾತ್ರೆ ಅಥವಾ ಬೈಕ್ ರ್‍ಯಾಲಿ ನಡೆಸಬೇಕು. ಧರ್ಮಸ್ಥಳದಲ್ಲಿ ಬೃಹತ್ ಸಮಾವೇಶವನ್ನೂ ಆಯೋಜಿಸಬೇಕು. ಅದಕ್ಕೂ ಮೊದಲು ಜಿಲ್ಲಾ ಮಟ್ಟದಲ್ಲಿ ಪೂರ್ವಭಾವಿ ಸಭೆಗಳನ್ನು ನಡೆಸಬೇಕು ಎಂಬ ಅಭಿಪ್ರಾಯ ಕೇಳಿಬಂತು.
‘ಧರ್ಮಸ್ಥಳ ಚಲೋ ಹೆಸರಿನಲ್ಲಿ ಒಂದು ಜಾಥಾವನ್ನು ನಡೆಸಬೇಕು. ಅದರ ಸ್ವರೂಪ ಯಾವ ರೀತಿ ಇರಬೇಕು? ಎಲ್ಲಿಂದ ಪ್ರಾರಂಭಿಸಬೇಕು? ಜಿಲ್ಲೆಗಳಲ್ಲಿ ಯಾವ ರೀತಿಯ ಸಭೆ ನಡೆಸಬೇಕು ? ಸಮಾವೇಶವನ್ನು ಎಲ್ಲಿ ಮಾಡಬೇಕು ಇತ್ಯಾದಿ ಸಂಗತಿಗಳ ಬಗ್ಗೆ ರೂಪುರೇಷೆ ಸಿದ್ಧಪಡಿಸಲು ವಿವಿಧ ಸಂಘಟನೆಗಳ ಮುಖ್ಯಸ್ಥರ ಜೊತೆಗೆ ಇನ್ನೊಮ್ಮೆ ಸಭೆ ನಡೆಸಬೇಕು’ ಎಂಬ ಬಗ್ಗೆಯೂ ಅಭಿಪ್ರಾಯಕ್ಕೆ ಬರಲಾಯಿತು.
ಸಿದ್ದನಗೌಡ ಪಾಟೀಲ ಮಾತನಾಡಿ, ‘ಧರ್ಮ, ದೇವರು ಹಾಗೂ ಜನರ ನಂಬಿಕೆಯನ್ನು ದುರುಪಯೋಗ ಪಡಿಸಿ ನಡೆಸುತ್ತಿರುವ ಅಪರಾಧದ ಬಗ್ಗೆ ಜಾಗೃತಿ ಮೂಡಿಸಬೇಕು. ಪ್ರಕರಣ ಹಾಗೂ ನಡೆದು ಬಂದ ಹಾದಿಯ ಬಗ್ಗೆ ಕಿರು ಹೊತ್ತಿಗೆಯನ್ನು ಹೊರ ತರಬೇಕು. ಇದನ್ನು ಎಲ್ಲೆಡೆ ವಿತರಿಸುವ ಮೂಲಕ ಜನಾಂದೋಲನ ರೂಪಿಸಬೇಕು ಎಂದು ಅಭಿಪ್ರಾಯಪಟ್ಟರು. ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ದೇವಿ, ‘ಸರ್ಕಾರವು ಅತ್ಯಾಚಾರಿಗಳು, ಕೊಲೆಗಡುಕರನ್ನು ಬೆಂಬಲಿಸುತ್ತಿದೆ. ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಕ್ಕಾಗಿ ಮೊದಲು ಜಿಲ್ಲಾ ಮಟ್ಟದಲ್ಲಿ ಸಭೆಗಳನ್ನು ನಡೆಸಬೇಕು. ಬಳಿಕ ರಾಜ್ಯ ಮಟ್ಟದಲ್ಲಿ ಸಮಾವೇಶಗಳನ್ನು ನಡೆಸಬೇಕು ಎಂದರು.
ರಂಗಕರ್ಮಿ ರಘುನಂದನ್, ಪ್ರಕರಣಕ್ಕೆ ಸಂಬಂಧಿಸಿದ ಹೋರಾಟಕ್ಕೆ ಬೆಂಬಲ ನೀಡುವಂತೆ ವಿವಿಧ ಸಂಘ–ಸಂಸ್ಥೆಗಳ ಮುಖ್ಯಸ್ಥರಿಗೆ ಪತ್ರ ಬರೆಯಬೇಕು. ವಿವಿಧ ಕಾರ್ಯಕ್ರಮಗಳಲ್ಲಿಯೂ ಭಿತ್ತಿಪತ್ರ ವಿತರಣೆಯಂತಹ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಕೆಎಸ್‌ಆರ್‌ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಫೆಡರೇಶನ್- ಎಐಟಿಯುಸಿ ಅಧ್ಯಕ್ಷ ಅನಂತ ಸುಬ್ಬರಾವ್, ಶಿವಸುಂದರ್, ನರಸಿಂಹಮೂರ್ತಿ, ಸಂಘಟಕರಾದ ಹರೀಶ್ ಬೈರಪ್ಪ, ವಕೀಲರಾದ ವಿನಯ್ ಶ್ರೀನಿವಾಸ್, ಮೈತ್ರೇಯಿ ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.
ಸಭೆ, ಪ್ರತಿಭಟನೆ ಹತ್ತಿಕ್ಕಲಾಗದು ; ಕೋರ್ಟ್
ಇದೇ ವೇಳೆ, ಸೌಜನ್ಯಾ ಪ್ರಕರಣದಲ್ಲಿ ನ್ಯಾಯಕ್ಕಾಗಿ ಶಾಂತಿಯುತ ಪ್ರತಿಭಟನೆ, ಸಭೆಗಳನ್ನು ನಡೆಸಬಹುದು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಮಂಗಳವಾರ (ಮಾ.18) ಸಂಜೆ 5.30 ಕ್ಕೆ ಎಐಟಿಯುಸಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆ ನಡೆಸಕೂಡದು ಎಂದು ಶೇಷಾದ್ರಿಪುರ ಪೊಲೀಸರು ನೋಟಿಸ್ ನೀಡಿದ್ದನ್ನು ಪ್ರಶ್ನಿಸಿ ಆಯೋಜಕರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಕುರಿತು ವಿಚಾರಣೆ ನಡೆಸಿದ ಎಂ.ನಾಗಪ್ರಸನ್ನ ಅವರಿದ್ದ ಪೀಠವು ಹೋರಾಟ, ಸಭೆಗಳನ್ನು ಹತ್ತಿಕ್ಕಲಾಗದು. ಕಾನೂನು ಉಲ್ಲಂಘನೆಯಾದಲ್ಲಿ ಮಾತ್ರ ಪೊಲೀಸರು ಕ್ರಮ ಕೈಗೊಳ್ಳಬಹುದು ಎಂದು ತೀರ್ಪು ನೀಡಿದ್ದಾರೆ. ಸಭೆಯ ಸಂಚಾಲಕ ವಿನಯ್ ಶ್ರೀನಿವಾಸ್ ಪರವಾಗಿ ಹಿರಿಯ ವಕೀಲ ಶ್ರುತಿ ಚಗಂತಿಮಠ ಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದರು.
Several activists who met on Tuesday resolved to hold “Dharmasthala Chalo”, a march to the temple town to seek justice for Sowjanya, a 17-year-old who was raped and murdered in 2012. The culprits in the case remain untraced to this day, despite investigations by both the Criminal Investigation Department (CID) and the Central Bureau of Investigation (CBI).
18-10-25 09:11 pm
HK News Desk
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
18-10-25 11:01 pm
Mangalore Correspondent
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
Ullal, Someshwara, Pillar: ಸೋಮೇಶ್ವರ ಪಿಲಾರಿನಲ್...
17-10-25 09:36 pm
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
18-10-25 10:49 pm
Mangalore Correspondent
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm
Illegal Arms Case, Mahesh Shetty Timarodi: ಅಕ...
18-10-25 01:52 pm
ಪ್ರೀತಿ ನಿರಾಕರಿಸಿದ ಕಾಲೇಜು ಯುವತಿಯನ್ನು ನಡುರಸ್ತೆಯ...
17-10-25 03:27 pm