ಬ್ರೇಕಿಂಗ್ ನ್ಯೂಸ್
20-03-25 12:18 pm HK News Desk ಕರ್ನಾಟಕ
ಕಲಬುರಗಿ, ಮಾ 20: ಜಿಲ್ಲೆಯ ಚಿತ್ತಾಪೂರ ತಾಲೂಕಿನ ವಾಡಿ ಪೊಲೀಸ್ ಠಾಣೆಯಲ್ಲೇ ಪೊಲೀಸರು ಇಸ್ಪೀಟ್ ಆಡಿರುವ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದ್ದು, ಐವರು ಪೊಲೀಸ್ ಕಾನ್ಸ್‌ಟೇಬಲ್‌ಗಳನ್ನ ಸೇವೆಯಿಂದ ಅಮಾನತುಗೊಳಿಸಿ ಎಸ್ಪಿ ಆಡೂರು ಶ್ರೀನಿವಾಸಲು ಆದೇಶಿಸಿದ್ದಾರೆ.
ಇಬ್ಬರು ಸಮವಸ್ತ್ರದಲ್ಲಿ, ಮೂವರು ಬಣ್ಣದ ಡ್ರೆಸ್ನಲ್ಲಿ ಠಾಣೆಯ ಮೊದಲ ಮಹಡಿಯಲ್ಲಿ ಇಸ್ಪೀಟ್ ಆಡಿದ್ದಾರೆ. ಆದರೆ ಇದರ ವಿಡಿಯೋ ಹಳೆಯದು ಎನ್ನಲಾಗುತ್ತಿದೆ. ಕಳೆದ ದಸರಾ ಆಯುಧ ಪೂಜೆ ಸಂದರ್ಭದಲ್ಲಿ ಠಾಣೆಯಲ್ಲಿ ಇಸ್ಪೀಟ್ ಆಡುವಾಗ ಮಹಿಳಾ ಕಾನ್ಸ್‌ಟೇಬಲ್‌ವೊಬ್ಬರು ವಿಡಿಯೋ ಮಾಡಿದ್ದರಂತೆ. ನಂತರ ಇದೇ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಸಹ ಮಾಡಿದ್ದು, ಮಹಿಳಾ ಕಾನ್ಸ್‌ಟೇಬನ್ ಅನ್ನು ಬೇರೆಡೆ ವರ್ಗಾವಣೆ ಮಾಡಲಾಗಿತ್ತು. ಇದೇ ಕಾರಣಕ್ಕೆ ವಿಡಿಯೋ ವೈರಲ್ ಮಾಡಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ವಿಡಿಯೋ ಹೊಸದೋ ಅಥವಾ ಹಳೆಯದೋ ಎಂಬುದು ತನಿಖೆಯಿಂದ ಗೊತ್ತಾಗುತ್ತದೆ. ಆದರೆ ಠಾಣೆಯಲ್ಲಿ ಇಸ್ಪೀಟ್ ಆಡಿದ್ಧು ಅಕ್ಷಮ್ಯ ಅಪರಾಧ ಎಂದು ಹೇಳಿರುವ ಎಸ್ಪಿ ಆಡೂರು ಶ್ರೀನಿವಾಸಲು, ತಕ್ಷಣ ಅಧಿಕಾರಿಗಳಿಂದ ವರದಿ ತರಿಸಿ ಎಎಸ್ಐ ಸೇರಿ ಐವರನ್ನು ಅಮಾನತು ಮಾಡಿದ್ದಾರೆ.
ಎಎಸ್ಐ ಮೆಹಮೂದ್ ಮಿಯಾ, ಹೆಡ್ ಕಾನ್‌ಸ್ಟೆಬಲ್‌ಗಳಾದ ನಾಗರಾಜ್, ಸಾಯಬಣ್ಣ, ಇಮಾಮ್ ಹಾಗೂ ಕಾನ್‌ಸ್ಟೆಬಲ್ ನಾಗಭೂಷಣ ಅಮಾನತುಗೊಂಡವರು. ಈ ಐವರಿಗೂ ಎಸ್ಪಿ ನೋಟಿಸ್ ಕಳುಹಿಸಿದ್ದಾರೆ. ಪಿಎಸ್‌ಐ ತಿರುಮಲೇಶ್ ಅವರಿಗೂ ನೋಟಿಸ್ ಜಾರಿ ಮಾಡಿದ್ದು, ನಿಗದಿತ ಸಮಯದಲ್ಲಿ ಉತ್ತರಿಸುವಂತೆ ಲಿಖಿತವಾಗಿ ತಾಕೀತು ಮಾಡಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ:
"ವಾಡಿ ಪೊಲೀಸ್ ಠಾಣೆಯಲ್ಲಿ ಪೊಲೀಸರು ಇಸ್ಪೀಟ್ ಆಡುತ್ತಿರುವ ವಿಡಿಯೋ ಗಮನಕ್ಕೆ ಬಂದ ತಕ್ಷಣವೇ ಈ ಕುರಿತು ವಿಚಾರಣೆ ನಡೆಸಿ ಅಗತ್ಯ ಕ್ರಮ ಜರುಗಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ ನೀಡಿದ್ದೆ. ವಿಚಾರಣೆ ನಡೆಸಿದಾಗ ಇದು ಹಲವು ತಿಂಗಳ ಹಿಂದಿನ ಘಟನೆ ಎನ್ನುವುದು ತಿಳಿದು ಬಂದಿದೆ" ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಇಸ್ಪೀಟ್ ಆಟದಲ್ಲಿ ತೊಡಗಿದ್ದ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಸಬ್ಇನ್ಸ್ಪೆಕ್ಟರ್ಗೆ ನೋಟಿಸ್ ಜಾರಿಗೊಳಿಸಲಾಗಿದೆ. ಯಾವುದೇ ಇಲಾಖೆಯ ಯಾವುದೇ ಸಿಬ್ಬಂದಿ, ಅಧಿಕಾರಿಗಳ ಶಿಸ್ತು ಉಲ್ಲಂಘನೆಯ ಬಗ್ಗೆ ನಮ್ಮ ಸರ್ಕಾರ ಶೂನ್ಯ ಸಹನೆ ಹೊಂದಿದೆ. ಸಾರ್ವಜನಿಕ ಸೇವೆಯಲ್ಲಿ, ಕಾನೂನು ಪಾಲನೆಯಲ್ಲಿ ಯಾವುದೇ ಲೋಪವನ್ನು ಸಹಿಸಲು ಸಾಧ್ಯವಿಲ್ಲ" ಎಂದು ಅವರು ತಿಳಿಸಿದ್ದಾರೆ.
After a video footage showing a group of police personnel playing card games inside the Wadi Police Station in Chittapur taluk of Kalaburagi district went viral on social media platform on Tuesday, Superintendent of Police Adduru Srinivasulu issued suspension order to five police officers here on Wednesday.
06-07-25 08:48 pm
Bangalore Correspondent
ತುರ್ತು ಪರಿಸ್ಥಿತಿ ಕೆಟ್ಟ ಘಟನೆಯಾಗಿದ್ದು, ಅದನ್ನು ಯ...
06-07-25 06:25 pm
Vandalism in Shivamogga Raghigudda: ಶಿವಮೊಗ್ಗ...
06-07-25 04:50 pm
Women's Commission Chairperson Nagalakshmi; ಥ...
04-07-25 10:44 pm
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
06-07-25 03:53 pm
HK News Desk
ಹಿಜಾಬ್ ; ಪರೀಕ್ಷಾ ಕೊಠಡಿಗೆ ನುಗ್ಗಿ ಆವಾಜ್, ಪಿಇಎಸ್...
02-07-25 11:05 pm
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
06-07-25 10:52 pm
HK News Desk
Mangalore Foreign Job Scam, Hireglow Elegant,...
06-07-25 04:14 pm
Pregnant Woman Murder, Chamarajanagar: ಗರ್ಭಿಣ...
06-07-25 01:23 pm
6 ವರ್ಷಗಳ ಹಿಂದೆ ಮಗನ ಹತ್ಯೆ ; ಇಂದು ಅಪ್ಪನ ಗುಂಡಿಕ್...
05-07-25 11:04 pm
Puttur News, Girl Pregnant, Father Arrest: ಸಹ...
05-07-25 09:06 pm