ಬ್ರೇಕಿಂಗ್ ನ್ಯೂಸ್
26-03-25 07:58 pm HK News Desk ಕರ್ನಾಟಕ
ಶಿವಮೊಗ್ಗ, ಮಾ.26 : ಇಲಾಖೆಯ ಪೊಲೀಸ್ ಸಿಬ್ಬಂದಿಯಿಂದಲೇ ಲಂಚ ಪಡೆಯುತ್ತಿದ್ದ ಶಿವಮೊಗ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ (ಡಿಎಆರ್) ವಿಭಾಗದ ಡಿವೈಎಸ್ಪಿ ಕೃಷ್ಣಮೂರ್ತಿ ಟಿ.ಪಿ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ತನ್ನ ಅಧೀನದಲ್ಲಿ ಕೆಲಸ ಮಾಡುವ ಸಹಾಯಕ ಹೆಡ್ ಕಾನ್ ಸ್ಟೇಬಲ್ ಒಬ್ಬರಿಂದ 5,000 ರೂ. ಲಂಚ ಪಡೆಯುತ್ತಿದ್ದಾಗ ಕೃಷ್ಣಮೂರ್ತಿ ಅವರು ಸಿಕ್ಕಿಬಿದ್ದಿದ್ದಾರೆ ಎಂದು ಲೋಕಾಯುಕ್ತ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದೂರಿನ ಪ್ರಕಾರ, ಪ್ರಸನ್ನ ಕುಮಾರ್ ಟಿ.ಎಸ್(35) ಕಳೆದ ಒಂದೂವರೆ ವರ್ಷಗಳಿಂದ ಭದ್ರಾವತಿ ತಾಲ್ಲೂಕು ಖಜಾನೆಯಲ್ಲಿ ಖಜಾನೆ ಸಿಬ್ಬಂದಿಯಾಗಿ ಸೇವೆ ಸಲ್ಲಿಸುತ್ತಿದ್ದರು. ತಮ್ಮ ಹುದ್ದೆಯಲ್ಲಿ ಮುಂದುವರಿಯಲು ಮತ್ತು ರಜೆ ಸಂಬಂಧಿತ ಅನುಮೋದನೆಗಾಗಿ ಕೃಷ್ಣಮೂರ್ತಿ 5,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಲಂಚವನ್ನು ಶಿವಮೊಗ್ಗ ಡಿಎಆರ್ ವಿಭಾಗದ ಸಹಾಯಕ ಮೀಸಲು ಸಬ್ ಇನ್ಸ್ಪೆಕ್ಟರ್(ಎಆರ್ಎಸ್ಐ) ರವಿ ಎಂ.ಕೆ ಅವರಿಗೆ ಹಸ್ತಾಂತರ ಮಾಡಬೇಕಾಗಿತ್ತು. ಲಂಚ ನೀಡಲು ಇಷ್ಟವಿಲ್ಲದ ಕುಮಾರ್, ಹಣ ಕೇಳುತ್ತಿರುವ ಸಂಭಾಷಣೆಯನ್ನು ರೆಕಾರ್ಡ್ ಮಾಡಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಆಧಾರದಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಶಿವಮೊಗ್ಗ ಡಿಎಆರ್ ಪೊಲೀಸ್ ಕ್ವಾರ್ಟರ್ಸ್ನಲ್ಲಿರುವ ನಿವಾಸದಲ್ಲಿ ಕೃಷ್ಣಮೂರ್ತಿ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದರು. ಲೋಕಾಯುಕ್ತ ಅಧಿಕಾರಿಗಳು ಲಂಚದ ಹಣವನ್ನು ವಶಪಡಿಸಿ ಡಿವೈಎಸ್ಪಿ ಕೃಷ್ಣಮೂರ್ತಿ ಮತ್ತು ಎಸ್ಐ ರವಿಯನ್ನು ಬಂಧಿಸಿದ್ದಾರೆ.
ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ ಚೌಧರಿ ಎಂ.ಎಚ್ ಮತ್ತು ಉಪ ಪೊಲೀಸ್ ವರಿಷ್ಠಾಧಿಕಾರಿ ಬಿ.ಪಿ ಚಂದ್ರಶೇಖರ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿತ್ತು.
Deputy Superintendent of Police (DYSP) Krishnamurthy from the Shivamogga district police department was arrested in a Lokayukta sting operation for allegedly soliciting a bribe for favorable posting requests.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm