ಬ್ರೇಕಿಂಗ್ ನ್ಯೂಸ್
09-04-25 09:31 pm HK News Desk ಕರ್ನಾಟಕ
ಶಿವಮೊಗ್ಗ, ಎ.9 : ಶಿವಮೊಗ್ಗ ಸ್ಮಾರ್ಟ್ ಸಿಟಿ ಚೀಫ್ ಇಂಜಿನಿಯರ್ ಒಬ್ಬರು ಗುತ್ತಿಗೆ ಕಾಮಗಾರಿಯ ಬಿಲ್ ಪಾಸ್ ಮಾಡಲು ಒಂದು ಲಕ್ಷ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗ ಸ್ಮಾರ್ಟ್ ಸಿಟಿಯ ಪ್ರಭಾರ ಚೀಫ್ ಇಂಜಿನಿಯರ್ ಕೃಷ್ಣಪ್ಪ ಸಿಕ್ಕಿಬಿದ್ದವರು.
ಶಿವಮೊಗ್ಗ ಸ್ಮಾರ್ಟ್ ಸಿಟಿಯಲ್ಲಿ ಎಲ್ಇಡಿ ಪರದೆಯ ಅಳವಡಿಕೆ ಹಾಗೂ ನಿರ್ವಹಣೆ ಮಾಡುತ್ತಿದ್ದ ಖಾಸಗಿ ಕಂಪನಿಯಿಂದ ಬಿಲ್ ಪಾಸ್ ಮಾಡಲು ಇಂಜಿನಿಯರ್ 1 ಲಕ್ಷ ರೂ. ಲಂಚ ಕೇಳಿದ್ದರು ಎಂದು ದೂರು ಬಂದಿತ್ತು. ಲಂಚದ ಹಣವನ್ನು ಸ್ಮಾರ್ಟ್ ಸಿಟಿ ಕಚೇರಿ ಆವರಣದಲ್ಲಿ ಪಡೆಯುವಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಖಾಸಗಿ ಕಂಪನಿಯು ಶಿವಮೊಗ್ಗ ಸ್ಮಾರ್ಟ್ ಸಿಟಿಯ ವ್ಯಾಪ್ತಿಯಲ್ಲಿ 7 ಕಡೆ ಡಿಸ್ಪ್ಲೇ ಬೋರ್ಡ್ ಅಳವಡಿಸಿ, ಅದರ ನಿರ್ವಹಣೆಯನ್ನು 5 ವರ್ಷ ಕಾಲ ಮಾಡಿತ್ತು. ಇವರಿಗೆ ಸ್ಮಾರ್ಟ್ ಸಿಟಿಯಿಂದ 11,16,100 ರೂ. ಬಿಲ್ ಪಾವತಿ ಮಾಡಬೇಕಾಗಿತ್ತು. ಇದಕ್ಕಾಗಿ ಕೃಷ್ಣಪ್ಪ ರೂ. 1 ಲಕ್ಷ ಹಣ ಲಂಚ ನೀಡುವಂತೆ ಕೇಳಿದ್ದರು. ಅದನ್ನು ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಬುಧವಾರ (ಏಪ್ರಿಲ್ 9) ಕೃಷ್ಣಪ್ಪ ಅವರ ವೃತ್ತಿಯ ಕೊನೆ ದಿನವಾಗಿತ್ತು. ಕೃಷ್ಣಪ್ಪ ಅವರು ತಮ್ಮ ಹುದ್ದೆಯಿಂದ ಬಿಡುಗಡೆ ಹೊಂದಿ ಪಾಲಿಕೆ ಆಯುಕ್ತರಿಗೆ ಚಾರ್ಜ್ ವಹಿಸಬೇಕಿತ್ತು. ಇದೇ ವೇಳೆಯಲ್ಲಿ ಲಂಚದ ಹಣಕ್ಕೆ ಕೈಯೊಡ್ಡಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
Karnataka Lokayukta Police on Wednesday trapped and arrested M. Krishnappa, in-charge Chief Engineer of Shivamogga Smart City project, while accepting a bribe of ₹1 lakh from a representative of a private firm.
18-10-25 09:11 pm
HK News Desk
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
18-10-25 11:01 pm
Mangalore Correspondent
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
Ullal, Someshwara, Pillar: ಸೋಮೇಶ್ವರ ಪಿಲಾರಿನಲ್...
17-10-25 09:36 pm
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
18-10-25 10:49 pm
Mangalore Correspondent
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm
Illegal Arms Case, Mahesh Shetty Timarodi: ಅಕ...
18-10-25 01:52 pm
ಪ್ರೀತಿ ನಿರಾಕರಿಸಿದ ಕಾಲೇಜು ಯುವತಿಯನ್ನು ನಡುರಸ್ತೆಯ...
17-10-25 03:27 pm