ಬ್ರೇಕಿಂಗ್ ನ್ಯೂಸ್
12-04-25 11:09 pm Bangalore Correspondent ಕರ್ನಾಟಕ
ಬೆಂಗಳೂರು, ಎ.12 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎ.17ರಂದು ವಿಶೇಷ ಸಚಿವ ಸಂಪುಟ ಸಭೆ ಕರೆದು ವಿವಾದಿತ ಜಾತಿ ಗಣತಿ ವರದಿ ಬಗ್ಗೆ ಚರ್ಚೆ ನಡೆಸಲು ಮುಂದಾಗಿದ್ದಾರೆ. ಆದರೆ ಸಿಎಂ ಅವರ ಈ ನಡೆಗೆ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಗಳು ವಿರೋಧಿಸಿದ್ದು, ಹೊಸದಾಗಿ ವರದಿ ರೂಪಿಸುವಂತೆ ಒತ್ತಾಯ ಮಾಡಿವೆ.
ಜಾತಿ ಗಣತಿ ವರದಿ ದೋಷಪೂರಿತವಾಗಿದೆ ಎಂದು ಕರ್ನಾಟಕ ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಬಿ.ಕೆಂಚಪ್ಪ ಗೌಡ ಹೇಳಿದ್ದು ಈ ಸಮೀಕ್ಷಾ ವರದಿಗೆ ಯಾವುದೇ ಆಧಾರವಿಲ್ಲ. ಇದು ಸಂಪೂರ್ಣ ದೋಷಪೂರಿತ. 2011ರ ಜನಗಣತಿ ಆಧರಿಸಿ ಈ ವರದಿಯನ್ನು ತಯಾರಿಸಲಾಗಿದೆ. ಇದು ಇಂದಿನ ಸಂದರ್ಭದಲ್ಲಿ ಅರ್ಥಹೀನವಾಗಿದೆ. ನಮ್ಮ ಸಮುದಾಯದ ಯಾರೂ ಗಣತಿದಾರರನ್ನು ನೋಡಿಲ್ಲ. ಹೀಗಾಗಿ ಜಾತಿ ಗಣತಿ ನಡೆಸಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ ಎಂದು ಹೇಳಿದರು.
ನಿವೃತ್ತ ಐಎಎಸ್ ಅಧಿಕಾರಿ, ಜಾಗತಿಕ ಲಿಂಗಾಯತ ಮಹಾಸಭಾ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಜಾಮದಾರ್ ಹೇಳಿಕೆ ನೀಡಿದ್ದು, ಜಾತಿ ಗಣತಿ ಅಕ್ರಮ ಮತ್ತು ದೋಷಪೂರಿತವಾಗಿದೆ. ಭಾರತೀಯ ಜನಗಣತಿ ಕಾಯ್ದೆಯಡಿ ರಾಜ್ಯ ಸರ್ಕಾರಕ್ಕೆ ಜನಗಣತಿ ನಡೆಸುವ ಅಧಿಕಾರವಿಲ್ಲ. ಭಾರತ ಸರ್ಕಾರ ಮಾತ್ರ ಇದನ್ನು ಮಾಡಬಹುದು. 1931ರ ನಂತರ ಇದನ್ನು ಇಲ್ಲಿಯ ವರೆಗೆ ಮಾಡಿಲ್ಲ. ಕೇಂದ್ರ ಸರ್ಕಾರ ಹೊರತುಪಡಿಸಿ ಯಾವುದೇ ಪ್ರಾಧಿಕಾರ ಮಾಡುವ ಜಾತಿ ಗಣತಿ ಕಾನೂನು ಬಾಹಿರವಾಗುತ್ತದೆ ಎಂದು ಹೇಳಿದರು.
ಸಮೀಕ್ಷೆ ಸಮಯದಲ್ಲಿ ತಮ್ಮ ಮಕ್ಕಳ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಮೀಸಲಾತಿ ಪಡೆಯುವ ಉದ್ದೇಶದಿಂದ ವಂಚಿಸಲಾಗಿದೆ. ಮೀಸಲಾತಿ ಸೌಲಭ್ಯ ಪಡೆಯಲು ಜನರು ತಮ್ಮ ಜಾತಿಗಳನ್ನು ಹಿಂದುಳಿದ ಸಮುದಾಯಗಳಿಗೆ ಸೇರಿಸಿದ್ದಾರೆ ಎಂದು ಹೇಳಿದ್ದಾರೆ.
ಚಿತ್ರದುರ್ಗದ ಮುರುಘಾ ಮಠದ ಪ್ರಭಾರಿ ಬಸವಪ್ರಭು ಸ್ವಾಮೀಜಿ ಮಾತನಾಡಿ, ಜಾತಿ ಗಣತಿ ವರದಿ ಶಿಫಾರಸ್ಸುಗಳು ಬಹಿರಂಗವಾಗುವವರೆಗೂ ಕಾಯುತ್ತೇವೆ, ಪರವಾಗಿದೆಯೋ ಅಥವಾ ವಿರೋಧವಾಗಿದೆಯೋ ಕಾದು ನೋಡಬೇಕು, ಅಖಿಲ ಭಾರತ ವೀರಶೈವ ಮಹಾಸಭಾ ಅಂತಿಮ ನಿರ್ಣಯ ಕೈಗೊಳ್ಳಲಿದೆ ಎಂದು ತಿಳಿಸಿದರು.
ಜಾತಿ ಸಮೀಕ್ಷೆಗೆ ರಾಜ್ಯ ಸರ್ಕಾರ 165 ಕೋಟಿ ರೂ. ವೆಚ್ಚ ಮಾಡಿರುವುದಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ. ಯಾವುದೇ ಸಚಿವರು ವರದಿಗೆ ವಿರುದ್ಧವಾಗಿಲ್ಲ. ಈ ಬಗ್ಗೆ ಸೂಕ್ತ ಸಮಾಲೋಚನೆಯ ನಂತರ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
Vokkaliga and Lingayat Leaders Challenge Legitimacy of Caste Survey, Claims of Flawed Methodology and State Overreach.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 05:10 pm
HK News Staffer
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm