ಬ್ರೇಕಿಂಗ್ ನ್ಯೂಸ್
16-04-25 06:42 pm Bangalore Correspondent ಕರ್ನಾಟಕ
ಬೆಂಗಳೂರು, ಏ 16: ಷರತ್ತು ಉಲ್ಲಂಘಿಸಿದ ಆರೋಪದಡಿ ಕಿರುತೆರೆ ಕಾರ್ಯಕ್ರಮಗಳ ಮೂಲಕ ಜನಪ್ರಿಯರಾಗಿರುವ ರಜತ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 24ನೇ ಎಸಿಜೆಎಂ ನ್ಯಾಯಾಲಯ ಆದೇಶಿಸಿದೆ.
ಮತ್ತೋರ್ವ ಆರೋಪಿ, ನಟ ವಿನಯ್ ಗೌಡಗೆ ನ್ಯಾಯಾಲಯ 500 ರೂ. ದಂಡ ವಿಧಿಸಿದೆ. ಇದೇ ವೇಳೆ, ಜಾಮೀನು ಕೋರಿ ರಜತ್ ಪರ ವಕೀಲರು ಅರ್ಜಿ ಸಲ್ಲಿಸಿದ್ದು, ತೀರ್ಪು ಆದೇಶವನ್ನು ನ್ಯಾಯಾಧೀಶರು ನಾಳೆಗೆ ಕಾಯ್ದಿರಿಸಿದ್ದಾರೆ.
ಮಾರಕಾಸ್ತ್ರ ಹಿಡಿದು ವಿಡಿಯೋ ಮಾಡಿದ್ದ ಆರೋಪದಡಿ ರಜತ್ ಹಾಗೂ ವಿನಯ್ ಗೌಡಗೆ ಮಾರ್ಚ್ 25ರಂದು ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿದ್ದರು. ಬಳಿಕ ಪ್ರಕರಣದಲ್ಲಿ ಇಬ್ಬರೂ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದ್ದ ನ್ಯಾಯಾಲಯ, ವಿಚಾರಣೆಯ ಸಂದರ್ಭದಲ್ಲಿ ಖುದ್ದು ಹಾಜರಿರುವಂತೆ ಷರತ್ತು ವಿಧಿಸಿತ್ತು. ಆದರೆ ನ್ಯಾಯಾಲಯದ ವಿಚಾರಣೆಗೆ ರಜತ್ ಹಾಜರಾಗಿರಲಿಲ್ಲ. ಹಾಜರಾಗದಿರಲು ಸೂಕ್ತ ಕಾರಣ ನೀಡಿ ವಿನಾಯಿತಿ ಅರ್ಜಿಯನ್ನೂ ಸಲ್ಲಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ, ರಜತ್ ಕಿಶನ್ ವಿರುದ್ಧ ನ್ಯಾಯಾಲಯ ವಾರೆಂಟ್ ಜಾರಿಗೊಳಿಸಿತ್ತು.
ವಾರೆಂಟ್‌ನ ಅನ್ವಯ ರಜತ್ ಇಂದು ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿ, 24ನೇ ಎಸಿಜೆಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ರಜತ್ ಕಿಶನ್ ಬಂಧನವಾಗುತ್ತಿದ್ದಂತೆ ಇತ್ತ ವಿನಯ್ ಗೌಡ ನ್ಯಾಯಾಲಯದ ಮುಂದೆ ಹಾಜರಾಗಿದ್ದರು.
Former Bigg Boss Kannadacontestant Rajath Kishen is reportedly arrested once again today (April 16) by the Basaveshwaranagar police for allegedly violating bail conditions in the controversial "machete reels" case.
18-04-25 05:38 pm
HK News Desk
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
Chennaiyya Swamiji, Caste census: ಪರಿಶಿಷ್ಟ ಜಾ...
17-04-25 11:41 am
Shamanur, CM Siddaramaiah: ರಾಜ್ಯದಲ್ಲಿ ಲಿಂಗಾಯತ...
16-04-25 11:03 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
18-04-25 10:17 pm
Mangalore Correspondent
Mangalore Waqf Protest, Adyar, Police, Live:...
18-04-25 12:54 pm
Waqf Protest, Mangalore, Traffic: ಎಪ್ರಿಲ್ 18...
17-04-25 11:06 pm
Karnataka High Court, Waqf protest Mangalore...
17-04-25 10:27 pm
ಸುರತ್ಕಲ್ ಎನ್ಐಟಿಕೆ ಸಂಸ್ಥೆಯಲ್ಲಿ ಮಹತ್ತರ ಫೈಲ್ ಡಿಲ...
17-04-25 04:39 pm
18-04-25 10:59 pm
Mangalore Correspondent
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm
Ullal Gang rape, Mangalore, Arrest: ಪಶ್ಚಿಮ ಬಂ...
17-04-25 09:56 pm
Gang Rape, Mangalore, Ullal, Crime: ಪಶ್ಚಿಮ ಬಂ...
17-04-25 03:19 pm