ಬ್ರೇಕಿಂಗ್ ನ್ಯೂಸ್
21-04-25 07:27 pm Bangalore Correspondent ಕರ್ನಾಟಕ
ಬೆಂಗಳೂರು, ಎ.21: ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರೇ ಜಾತಿಗಣತಿ ವರದಿಯ ಮೂಲಪ್ರತಿ ಇಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಸರ್ಕಾರ ಈಗ ಮಂಡಿಸುತ್ತಿರುವ ಜಾತಿ ಗಣತಿ ವರದಿಯೇ ನಕಲಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾದ ದತ್ತಾಂಶಗಳ ವರದಿ ನಕಲಿ ಎಂಬುದಕ್ಕೆ ಪುರಾವೆಯಿದೆ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆಯವರು 5-10-2021ರಂದು ಸರ್ಕಾರಕ್ಕೆ ಬರದಿದ್ದ ಪತ್ರದ ಪ್ರಕಾರ ಮೂಲ ಅಥವಾ ಹಸ್ತಪ್ರತಿಯೇ ಇಲ್ಲ. ಸೀಲ್ಡ್ ಪೆಟ್ಟಿಗೆಯನ್ನು ಮಹಜರು ಮಾಡಿ ಅಧ್ಯಕ್ಷ, ಸದಸ್ಯರ ಸಮಕ್ಷಮ ತೆರೆದಾಗ ಸೀಲ್ಡ್ ಪೆಟ್ಟಿಗೆಯಲ್ಲಿಟ್ಟಿದ್ದ ಪ್ರತಿಯ ಮೇಲೆ ಸದಸ್ಯ ಕಾರ್ಯದರ್ಶಿ ಸಹಿಯೇ ಇರಲಿಲ್ಲವೆಂಬುದನ್ನು ತಿಳಿಸಿದ್ದಾರೆಂದು ಹೇಳಿದರು.
ಸರ್ಕಾರ ಈಗ ಹೇಳಲಿ. ಈ ಜಾತಿಗಣತಿ ವರದಿ ಅಸಲಿಯೇ? ಮೂಲ ವರದಿಯ ಹಸ್ತಪ್ರತಿಯೇ ಸೀಲ್ಡ್ ಪೆಟ್ಟಿಗೆಯಲ್ಲಿ ಇಲ್ಲ ಎಂದ ಮೇಲೆ ವರದಿ ಹೇಗೆ ವರ್ಜಿನಲ್ ಆಗುತ್ತದೆ? ಇದು ರಕ್ತ ಕಣ್ಣೀರು ಸಿನಿಮಾ ಎಂದು ವ್ಯಂಗ್ಯವಾಡಿದರು. ಮುಖ್ಯಮಂತ್ರಿ ತಮ್ಮ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಜಾತಿಗಣತಿ ವಿಚಾರವನ್ನು ಹೊರಗೆ ತಂದಿದ್ದಾರೆ. ಅವರು ಯಾವಾಗ ಬೇಕೋ ಆಗ ವರದಿ ನೀಡುತ್ತಾರೆ. ಇದಕ್ಕೆ ತಮ್ಮೊಂದಿಗೆ ನಾಟಕ ಕಂಪನಿಯನ್ನು ಇಟ್ಟುಕೊಂಡಿದ್ದಾರೆ ಎಂದು ಟೀಕಿಸಿದರು.
ಆಯೋಗದ ಅಧ್ಯಕ್ಷರೇ ವರದಿಯ ಮೂಲಪ್ರತಿ ಇಲ್ಲ ಎಂದಿದ್ದಾರೆ. ಅವರು ಸಮೀಕ್ಷೆ ಮಾಡಿದ್ದು 6 ಕೋಟಿ ಜನರನ್ನು. ಉಳಿದ ಒಂದು ಕೋಟಿ ಜನರಿಗೆ ನಾಮವೇ? ಎಂದು ಪ್ರಶ್ನಿಸಿದ ಅವರು, ಜಾತಿಗಣತಿಯ ವರ್ಜಿನಲ್ ಪ್ರತಿ ಸಿದ್ದರಾಮಯ್ಯನವರ ಮನೆಯಲ್ಲಿದೆ. ಈಗ ಮಂಡಿಸಿರುವ ವರದಿ ನಕಲಿ ಎಂದು ಆರೋಪಿಸಿದರು.
ಸಮೀಕ್ಷೆ ನಡೆಸಿದ ಮೂಲ ವರದಿ ಪ್ರತಿ ಕಾಣೆಯಾಗಿದ್ದರ ಬಗ್ಗೆ ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಗೆ ಒಳಪಡಿಸಬೇಕು. ಸಮೀಕ್ಷೆಯ ದಾಖಲೆಗಳು, 165 ಕೋಟಿ ರೂ. ಖರ್ಚು ಮಾಡಿದ್ದು ಹೇಗೆಂಬುದು? ಈ ತನಿಖೆಯ ವ್ಯಾಪ್ತಿಗೆ ತರಬೇಕು. ನಕಲಿ ವರದಿಯನ್ನೇ ಹಲವು ಸಚಿವರು ವೈಜ್ಞಾನಿಕ, ನಿಖರವೆಂದು ಹೇಳಿರುವುದು ಹಾಸ್ಯಾಸ್ಪದವೆಂದು ವ್ಯಂಗ್ಯವಾಡಿದರು.
Terming the present caste census report as “fake” since the original copy is reportedly missing, Leader of Opposition in the Assembly R. Ashok on Sunday demanded a judicial probe into the episode of the original copy missing from the Karnataka State Commission for Backward Classes.
26-08-25 06:06 pm
Bangalore Correspondent
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
SIT Issues Notice, Sujatha Bhat: ಸುಳ್ಳಜ್ಜಿ ಸು...
25-08-25 10:55 pm
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
26-08-25 10:36 am
Mangalore Correspondent
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
26-08-25 05:24 pm
HK News Desk
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm