Harish Poonja, Speaker U T Khader: ಸ್ಪೀಕರ್ ಧರ್ಮದ ಬಗ್ಗೆ ಆಕ್ಷೇಪದ ಮಾತು ; ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ಅನರ್ಹತೆಯ ತೂಗುಗತ್ತಿ, ಹಕ್ಕುಚ್ಯುತಿ ಮಂಡಿಸಲು ದೂರಿತ್ತ ಕಾಂಗ್ರೆಸ್ ಶಾಸಕರು 

23-04-25 01:06 pm       Bangalore Correspondent   ಕರ್ನಾಟಕ

ಸ್ಪೀಕರ್ ಯು.ಟಿ ಖಾದರ್ ಅವರ ಧರ್ಮದ ಹೆಸರೆತ್ತಿ ಆಕ್ಷೇಪ ಸೂಚಿಸಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಸಂಕಷ್ಟ ಎದುರಾಗಿದೆ.‌ ಕಾಂಗ್ರೆಸ್ ಶಾಸಕರು ಹಕ್ಕುಚ್ಯುತಿ ಮಂಡಿಸಲು ದೂರು ನೀಡಿದ್ದು, ಶಾಸಕ ಸ್ಥಾನದಿಂದ ಅನರ್ಹಗೊಳ್ಳುವ ಭೀತಿ ಕಾಡುವಂತಾಗಿದೆ. 

ಬೆಂಗಳೂರು, ಎ.23 : ಸ್ಪೀಕರ್ ಯು.ಟಿ ಖಾದರ್ ಅವರ ಧರ್ಮದ ಹೆಸರೆತ್ತಿ ಆಕ್ಷೇಪ ಸೂಚಿಸಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಸಂಕಷ್ಟ ಎದುರಾಗಿದೆ.‌ ಕಾಂಗ್ರೆಸ್ ಶಾಸಕರು ಹಕ್ಕುಚ್ಯುತಿ ಮಂಡಿಸಲು ದೂರು ನೀಡಿದ್ದು, ಶಾಸಕ ಸ್ಥಾನದಿಂದ ಅನರ್ಹಗೊಳ್ಳುವ ಭೀತಿ ಕಾಡುವಂತಾಗಿದೆ. 

ಸ್ಪೀಕರ್ ಖಾದರ್ ಇತ್ತೀಚೆಗೆ 18 ಬಿಜೆಪಿ ಶಾಸಕರನ್ನು ಅಮಾನತು ಮಾಡಿದ್ದರು. ಈ ಅಮಾನತು ಆವೇಶವನ್ನು ಪ್ರಶ್ನಿಸಿ ಖಾಸಗಿ ಚಾನೆಲ್ ಒಂದಕ್ಕೆ ಪ್ರತಿಕ್ರಿಯೆ ನೀಡಿದ ಸಂದರ್ಭದಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಸ್ಪೀಕರ್ ಯುಟಿ ಖಾದರ್ ಅವರ ಧರ್ಮದ ಬಗ್ಗೆ ಆಕ್ಷೇಪ ಎತ್ತಿದ್ದರು. ಹೀಗಾಗಿ ಹರೀಶ್ ಪೂಂಜಾ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ಶಾಸಕರು ಹಕ್ಕುಚ್ಯುತಿ ಮಂಡಿಸಲು ಹಕ್ಕು ಬಾಧ್ಯತಾ ಸಮಿತಿ ಅಧ್ಯಕ್ಷರಿಗೆ ದೂರು ನೀಡಿದ್ದಾರೆ. 

ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ್ಣ ಸೇರಿ ಕೆಲ ಶಾಸಕರು ಹರೀಶ್ ಪೂಂಜಾ ವಿರುದ್ಧ ಹಕ್ಕುಚ್ಯುತಿ ಮಂಡಿಸಲು ದೂರು ನೀಡಿದ್ದಾರೆ. ಶಾಸಕ ಹರೀಶ್ ಪೂಂಜಾ ಅವರು ಸ್ಪೀಕರ್ ಧರ್ಮದ ವಿಚಾರ ಪ್ರಸ್ತಾಪಿಸಿದ್ದಾರೆ. ಆದ್ದರಿಂದ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಮನವಿ ಮಾಡಲಾಗಿದೆ. ಹಕ್ಕು ಭಾಧ್ಯತಾ ಸಮಿತಿ ಅಧ್ಯಕ್ಷ ಮಹಾಂತೇಶ ಕೌಜಲಗಿ ಅವರು ಈ ದೂರನ್ನು ಪರಿಶೀಲನೆ ನಡೆಸಲಿದ್ದಾರೆ. 

ಸ್ಪೀಕರ್ ಯು.ಟಿ ಖಾದರ್ ವಿರುದ್ಧದ ವಿಚಾರ ಆಗಿರೋದ್ರಿಂದ ಈ ದೂರನ್ನು ಹಕ್ಕು ಭಾದ್ಯತೆ ಸಮಿತಿ ಸಭಾಧ್ಯಕ್ಷ ಯು.ಟಿ ಖಾದರ್‌ಗೆ ರವಾನೆ ಮಾಡುವ ಸಾಧ್ಯತೆ ಇದೆ. ಶಾಸಕ ಹರೀಶ್ ಪೂಂಜಾ ಪ್ರಕರಣದಲ್ಲಿ ಸ್ಪೀಕರ್‌ ಏನು ಕ್ರಮ ಕೈಗೊಳ್ಳುತ್ತಾರೆ ಅನ್ನೋದು ಕುತೂಹಲ ಕೆರಳಿಸಿದೆ.

Congress lawmakers, led by Government Chief Whip Ashok Pattan, on Tuesday lodged a breach-of-privilege complaint against BJP’s Belthangady MLA Harish Poonja for allegedly disrespecting Speaker U T Khader.