ಧರ್ಮದ ಹೆಸರು ಕೇಳಿ ಯಾರನ್ನೂ ಅಲ್ಲಿ ಕೊಂದಿಲ್ಲ, ಕಾಶ್ಮೀರ ದಾಳಿ ಬಗ್ಗೆ ಬಿಜೆಪಿಗರೇ ಅಪಪ್ರಚಾರ ಮಾಡುತ್ತಿದ್ದಾರೆ ; ಸಂತ್ರಸ್ತರ ಹೇಳಿಕೆಯನ್ನೇ ಅಲ್ಲಗಳೆದ ಕಾಂಗ್ರೆಸ್ ವಕ್ತಾರ ಲಕ್ಷ್ಮಣ್ ! 

25-04-25 07:30 pm       HK News Desk   ಕರ್ನಾಟಕ

ಪಹಲ್ಗಾಮ್‌ನಲ್ಲಿ ಮುಸ್ಲಿಮರೇ ಬಹಳಷ್ಟು ಜನರನ್ನು ಕಾಪಾಡಿದ್ದಾರೆ. ಧರ್ಮದ ಹೆಸರು ಕೇಳಿ ಯಾರನ್ನೂ ಅಲ್ಲಿ ಕೊಂದಿಲ್ಲ. ಸುಮ್ಮನೆ ಮುಸ್ಲಿಮರು, ಮುಸ್ಲಿಮರು ಎಂದು ಬಿಜೆಪಿಗರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್‌ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮೈಸೂರು, ಎ.25 : ಪಹಲ್ಗಾಮ್‌ನಲ್ಲಿ ಮುಸ್ಲಿಮರೇ ಬಹಳಷ್ಟು ಜನರನ್ನು ಕಾಪಾಡಿದ್ದಾರೆ. ಧರ್ಮದ ಹೆಸರು ಕೇಳಿ ಯಾರನ್ನೂ ಅಲ್ಲಿ ಕೊಂದಿಲ್ಲ. ಸುಮ್ಮನೆ ಮುಸ್ಲಿಮರು, ಮುಸ್ಲಿಮರು ಎಂದು ಬಿಜೆಪಿಗರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್‌ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ದೇಶದ ಜನರ ರಕ್ತದ ಮೇಲೆ ಅಧಿಕಾರ ಹಿಡಿಯುವುದು ಬಿಜೆಪಿಯ ಚಟವಾಗಿದೆ. ಘಟನೆ ನಡೆದ ದಿನ ಅಲ್ಲಿ ಸೇನೆ ಮತ್ತು ಪೊಲೀಸ್ ಯಾಕೆ ಇರಲಿಲ್ಲ. ಇದರ ಹಿಂದೆ ಬೇರೆ ಏನೋ ಉದ್ದೇಶವಿದೆ.

ಈ ಬಗ್ಗೆ ಅಂತಾರಾಷ್ಟ್ರೀಯ ಏಜೆನ್ಸಿ ಮೂಲಕ ತನಿಖೆ ಆಗಬೇಕು. ಹಿಂದೂ, ಮುಸ್ಲಿಮರ ನಡುವೆ ಕಂದಕ ಉಂಟು ಮಾಡಿ ಚುನಾವಣೆ ಗೆಲ್ಲುವುದೇ ಬಿಜೆಪಿಯ ಉದ್ದೇಶ. ಮುಸ್ಲಿಮರೆಲ್ಲಾ ಭಯೋತ್ಪಾದಕರು ಎಂದು ಬಿಂಬಿಸುವ ಕೆಲಸ ಶುರುವಾಗಿದೆ ಎಂದು ಕಿಡಿಕಾರಿದರು.

ನಾಲ್ಕು ಮರಗಳಿಗೆ ಗುಂಡು ಹಾರಿಸಿ, ಅದನ್ನೇ ಸರ್ಜಿಕಲ್ ಸ್ಟ್ರೈಕ್‌ ಎಂದು ಬಿಜೆಪಿ ಬಿಂಬಿಸಿತ್ತು, ಈ ರೀತಿ ಮಾಡಿ ಜನರನ್ನು ಮೂರ್ಖರನ್ನಾಗಿಸುವುದು ಬಿಜೆಪಿಯವರ ಕೆಲಸ ಎಂದು ಲಕ್ಷ್ಮಣ್ ಹರಿಹಾಯ್ದಿದ್ದಾರೆ. 

ಪಹಲ್ಗಾಮ್ ಸ್ಫೋಟದ ಬಳಿಕ ಅಲ್ಲಿ ಕೊಲ್ಲಲ್ಪಟ್ಟ ಪುರುಷರ ಪತ್ನಿಯರೇ ಈ ರೀತಿಯ ಹೇಳಿಕೆ ನೀಡಿದ್ದರು. ನಮ್ಮನ್ನು ಹಿಂದುವಾ ಎಂದು ಐಡಿ ಕೇಳಿ ತಲೆಗೆ ಗುಂಡಿಟ್ಟು ಕೊಂದಿದ್ದರು ಎಂದು ಘಟನೆ ಬಳಿಕ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದರು. ಆದರೆ ಕಾಂಗ್ರೆಸ್ ನಾಯಕ ಲಕ್ಷ್ಮಣ್ ಅದನ್ನು ಲೆಕ್ಕಿಸದೆ ಬಿಜೆಪಿ ಸೃಷ್ಟಿ ಎಂದು ಹೇಳಿ ಉಗ್ರರ ಪರ ವಹಿಸಿದ್ದಾರೆ.

Congress Spokesperson Laxman Denies Victims Claims, Accuses BJP of Misinformation Over Kashmir Attack.