ಬ್ರೇಕಿಂಗ್ ನ್ಯೂಸ್
06-05-25 01:35 pm HK News Desk ಕರ್ನಾಟಕ
ಹುಬ್ಬಳ್ಳಿ , ಮೇ 06 : ಇಂಗಳಹಳ್ಳಿ ಕ್ರಾಸ್ ಬಳಿ ಕಾರು ಮತ್ತು ಲಾರಿಯ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಮೃತರೆಲ್ಲರೂ ಶಿವಮೊಗ್ಗ ಜಿಲ್ಲೆಯ ಸಾಗರದವರಾಗಿದ್ದು, ಸಾವಿಗೀಡಾದವರನ್ನ ಶ್ವೇತ (29), ಅಂಜಲಿ(26), ಸಂದೀಪ್ (26), ವಿಠ್ಠಲ (55) ಮತ್ತು ಶಶಿಕಲಾ (40) ಎಂದು ಗುರುತಿಸಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೇ ಸ್ಥಳಕ್ಕೆ ದೌಡಾಯಿಸಿರುವ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು, ಶವಗಳನ್ನ ಹುಬ್ಬಳ್ಳಿಯ ಕಿಮ್ಸಗೆ ರವಾನೆ ಮಾಡಿದ್ದಾರೆ. ಸಾಗರ ತಾಲೂಕು ಮೂರ್ಕೈ ಗ್ರಾಮದ ಕುಟುಂಬ ಎಂದು ತಿಳಿದು ಬಂದಿದೆ. ಸಾಗರದ ಅಜ್ಜಿ ಮನೆಯಲ್ಲಿ ನಿಶ್ಚಿತಾರ್ಥ ಮುಗಿಸಿ ಹುಬ್ಬಳ್ಳಿಗೆ ಹಿಂದಿರುಗುತ್ತಿದ್ದರು. ಇವರೆಲ್ಲರೂ ಹುಬ್ಬಳ್ಳಿಯಲ್ಲೇ ನೆಲೆಸಿದ್ದರು. ಮೃತಪಟ್ಟವರಲ್ಲಿ ನಿಶ್ಚಿತಾರ್ಥ ಮಾಡಿಕೊಂಡ ಹುಡುಗಿಯೂ ಇದ್ದಳು ಎಂದು ತಿಳಿದುಬಂದಿದೆ.
ಘಟನೆ ನಡೆಯುತ್ತಿದ್ದಂತೆ ಲಾರಿ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ.
ಸ್ಥಳಕ್ಕೆ ಧಾರವಾಡ ಜಿಲ್ಲಾ ಎಸ್‌ಪಿ ಗೋಪಾಲ ಬ್ಯಾಕೋಡ, ಗ್ರಾಮೀಣ ಠಾಣೆ ಇನ್ಸಪೆಕ್ಟರ್ ಮುರುಗೇಶ ಚನ್ನಣ್ಣವರ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
In a devastating road accident near Kusugal Cross on the outskirts of Hubballi, five members of the same family tragically lost their lives on the spot. The victims were returning from an engagement ceremony in Sagara when the accident occurred. The family, filled with joy just hours earlier, had been travelling back home with the newly engaged young woman when their vehicle met with the fatal mishap.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 03:30 pm
HK News Staffer
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm