ಬ್ರೇಕಿಂಗ್ ನ್ಯೂಸ್
08-05-25 07:50 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 09 : ಅಶ್ರಫ್ ಹಾಗೂ ಸುಹಾಸ್ ಶೆಟ್ಟಿ ಹತ್ಯೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಈ ನಿಟ್ಟಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ. ವಿಧಾನ ಸೌಧದಲ್ಲಿ ಗುರುವಾರ ನಡೆದ ಸಭೆಯಲ್ಲಿ ಸ್ಪೀಕರ್ ಯು.ಟಿ ಖಾದರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಪಹಲ್ಗಾಮ್ ದಾಳಿಯ ಸಂದರ್ಭದಲ್ಲಿ ಮಂಗಳೂರಿನಲ್ಲಿ ಕೇರಳ ಮೂಲದ ಅಶ್ರಫ್ ಎಂಬ ವ್ಯಕ್ತಿಯನ್ನು ಗುಂಪು ಹಲ್ಲೆಯ ಮೂಲಕ ಕೊಲೆ ಮಾಡಲಾಗಿತ್ತು. ಪರಿಣಾಮವಾಗಿ ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗಿದೆ. ಸುಹಾಸ್ ಶೆಟ್ಟಿ ಕೊಲೆಯ ಬೆನ್ನಲ್ಲೇ ಅಲ್ಲಲ್ಲಿ ಅಹಿತಕರ ಘಟನೆಗಳು ನಡೆದಿವೆ. ಐವರ ಮೇಲೆ ತಲವಾರು, ಚೂರಿಯಿಂದ ದಾಳಿ ಮಾಡಲಾಗಿದೆ.
ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಲಾಗಿತ್ತು. ಈಗಲೇ ರಾತ್ರಿ ಹೊತ್ತು ಅಂಗಡಿ- ಮುಗ್ಗಟ್ಟುಗಳನ್ನು ಬೇಗ ಬಂದ್ ಮಾಡಿಸಲಾಗುತ್ತಿದೆ. ಈ ನಡುವೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ಸ್ಪೀಕರ್ ಯು.ಟಿ ಖಾದರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಯಿತು.
ಜಿಲ್ಲಾಧಿಕಾರಿ ಸೇರಿದಂತೆ ಪೊಲೀಸ್ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆಯನ್ನು ನಡೆಸಿದರು. ಜಿಲ್ಲೆಯಲ್ಲಿ ಇತ್ತಿಚೆಗೆ ನಡೆದ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಚರಣೆ ಬಗ್ಗೆ ಚರ್ಚೆ ನಡೆಸಿದ ಸಚಿವರು, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕಾಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಯಾವುದೇ ಒತ್ತಡಕ್ಕೆ ಮಣಿಯಬೇಡಿ ;
ಮಂಗಳೂರಿಲ್ಲಿ ಪೊಲೀಸ್ ಇಲಾಖೆ ಯಾವುದೇ ಒತ್ತಡಕ್ಕೆ ಮಣಿಯುವ ಅವಶ್ಯಕತೆ ಇಲ್ಲ. ಸರ್ಕಾರ ನಿಮ್ಮ ಜೊತೆ ಇದೆ. ಕಾನೂನು ಬಾಹಿರ ಚಟುವಟಿಕೆ ನಡೆಸುವವರು ಹಾಗೂ ಅದಕ್ಕೆ ಉತ್ತೇಜನ ನೀಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಸ್ಪೀಕರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮೇ 16ರಕ್ಕೆ ನೂತನ ಜಿಲ್ಲಾಧಿಕಾರಿಗಳ ಕಟ್ಟಡ ಉದ್ಘಾಟನೆ ;
ಮಂಗಳೂರಿನಲ್ಲಿ ನೂತನ ಜಿಲ್ಲಾಧಿಕಾರಿಗಳ ಕಟ್ಟಡ ಉದ್ಘಾಟನೆ ಕುರಿತಂತೆ ಇದೇ ವೇಳೆ ಚರ್ಚೆ ನಡೆಸಲಾಯಿತು. ಇದೇ ತಿಂಗಳ 16 ರಂದು ನೂತನ ಜಿಲ್ಲಾಧಿಕಾರಿ ಕಚೇರಿಯನ್ನ ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದು, ಅಗತ್ಯ ತಯಾರಿಗಳನ್ನ ನಡೆಸುವಂತೆ ಜಿಲ್ಲಾಡಳಿತಕ್ಕೆ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಸೂಚನೆ ನೀಡಿದರು. ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಮಂಗಳೂರು ಪೊಲೀಸ್ ಕಮಿಷನರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಾಗವಹಿಸಿದ್ದರು.
Suhas Shetty Murder, U.T. Khader and Minister Dinesh Gundu Rao Give Free Hand for Action, also the inauguration of the new dc office at padil will be inaugurated on 16th of May by CM Siddaramaiah they added.
26-08-25 02:04 pm
Bangalore Correspondent
SIT Issues Notice, Sujatha Bhat: ಸುಳ್ಳಜ್ಜಿ ಸು...
25-08-25 10:55 pm
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
26-08-25 10:36 am
Mangalore Correspondent
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am