ಬ್ರೇಕಿಂಗ್ ನ್ಯೂಸ್
13-05-25 09:50 pm HK News Desk ಕರ್ನಾಟಕ
ಹಾಸನ, ಮೇ 13 : ಅಪ್ಪನ ಎದುರೇ ಮಗಳನ್ನು ಯುವಕರ ಗುಂಪೊಂದು ಕಿಡ್ನಾಪ್ ಮಾಡಿದ್ದು ಮಗಳನ್ನು ಉಳಿಸಿಕೊಳ್ಳಲು ತಂದೆ ಪರದಾಟ ನಡೆಸಿದ ಘಟನೆ ಬೇಲೂರು ತಾಲ್ಲೂಕಿನ, ಅರೇಹಳ್ಳಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ನಡೆದಿದೆ.
ತಂದೆ, ಮಗಳು ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದಾಗ ಆಕೆಯ ಪ್ರಿಯಕರ ಸೇರಿದಂತೆ ನಾಲ್ವರು ಯುವಕರು ಬಂದು ಕಾರಿನಲ್ಲಿ ಕಿಡ್ನಾಪ್ ಮಾಡಿಕೊಂಡು ಎಸ್ಕೇಪ್ ಆಗಿದ್ದಾರೆ. ಈ ವೇಳೆ, ಹುಡುಗಿ ತಂದೆ ಕಾರನ್ನು ತಡೆದು ನಿಲ್ಲಿಸಲು ಹೋಗಿ ಡೋರ್‌ನಲ್ಲಿ ನೇತಾಡುತ್ತಿದ್ದರೂ ಬಿಡದ ದುರುಳರು ರಸ್ತೆಯುದ್ದಕ್ಕೂ ಎಳೆದೊಯ್ದಿದ್ದಾರೆ.
ಅರೇಹಳ್ಳಿ ಪಟ್ಟಣದ ಹೈಸ್ಕೂಲ್ ಮುಂಭಾಗ ತಂದೆ, ಮಗಳು ನಡೆದುಕೊಂಡು ಹೋಗುತ್ತಿದ್ದಾಗ ಅಡ್ಡಹಾಕಿದ ಯುವಕರು ಕೃತ್ಯ ಎಸಗಿದ್ದು 200 ಮೀಟರ್ ದೂರದ ವರೆಗೂ ತಂದೆಯನ್ನು ಎಳೆದೊಯ್ದಿದ್ದಾರೆ. ಕೊನೆಗೆ ಕಾರಿನಿಂದ ನೇತಾಡುತ್ತಲೇ ಬಿದ್ದು ಗಾಯಗೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ತಂದೆ ಮಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ.
ಮೂಲಗಳ ಪ್ರಕಾರ, ಬೇಲೂರು ತಾಲ್ಲೂಕಿನ ಮಲಸಾವರ ಗ್ರಾಮದ ಪ್ರಸ್ಟಲ್ ಡಿಯೀಲಾ ಫರ್ನಾಂಡೀಸ್ (19) ಕಿಡ್ನಾಪ್ ಆದ ಯುವತಿ ಎನ್ನಲಾಗಿದೆ. ಈಕೆಯನ್ನು ಚನ್ನರಾಯಪಟ್ಟಣ ಮೂಲದ ಪ್ರಜ್ವಲ್ (25) ಎಂಬ ಯುವಕ ಪ್ರೀತಿಸಿ ಎರಡು ತಿಂಗಳ ಹಿಂದೆ ಪ್ರೇಮ ವಿವಾಹವಾಗಿದ್ದ. ಆದರೆ ಅದ್ಯಾವುದೋ ಗಲಾಟೆಯಲ್ಲಿ ಯುವತಿ ಗಂಡನನ್ನು ಬಿಟ್ಟು ಬಂದಿದ್ದು ಮಂಗಳವಾರ ಸಂಜೆ ತಂದೆ ಜೊತೆ ಅರೇಹಳ್ಳಿಗೆ ಬಂದಿದ್ದಳು. ಈ ವೇಳೆ, ಪ್ರಜ್ವಲ್ ಹಾಗೂ ಆತನ ಸ್ನೇಹಿತರು ಅಡ್ಡಹಾಕಿ ಯುವತಿಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿದ್ದಾರೆ.
Daughter Abducted in Front of Father, Shocking Incident in Belur at Hassan as Goons Drag Father into Car While He Fights to Save He
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm