ಬ್ರೇಕಿಂಗ್ ನ್ಯೂಸ್
14-05-25 05:16 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 14 : ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ್ದ ಆರೋಪಿಯನ್ನು ವೈಟ್ಫೀಲ್ಡ್ ಠಾಣೆ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಛತ್ತೀಸ್ಗಢ ಮೂಲದ ಶುಭಾಂಶು ಶುಕ್ಲಾ (26) ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೇ. 9ರಂದು ವೈಟ್ಫೀಲ್ಡ್ನ ಪ್ರಶಾಂತ್ ಲೇಔಟ್ನಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಆರೋಪ ಕೇಳಿಬಂದಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರು ನಡೆಸಿದ ದಾಳಿಗೆ ಪ್ರತಿಯಾಗಿ ಮೇ 7ರಂದು ಭಾರತೀಯ ರಕ್ಷಣಾ ಪಡೆಗಳು 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯ ಮೂಲಕ ಪಾಕಿಸ್ತಾನದಲ್ಲಿನ ಭಯೋತ್ಪಾದಕರ ನೆಲೆಗಳನ್ನು ನಾಶಪಡಿಸಿದ್ದವು.
ಭಾರತೀಯ ಕಾರ್ಯಾಚರಣೆಯ ಯಶಸ್ಸನ್ನು ಮೇ 9ರಂದು ಪ್ರಶಾಂತ್ ಲೇಔಟ್ನಲ್ಲಿ ಯುವಕರು ಸಂಭ್ರಮಿಸುತ್ತಿದ್ದರು. ಈ ವೇಳೆ ಪಿ.ಜಿಯ ಬಾಲ್ಕನಿಯಲ್ಲಿ ನಿಂತಿದ್ದ ಶುಭಾಂಶು ಶುಕ್ಲಾ, ಪಾಕ್ ಪರ ಘೋಷಣೆ ಕೂಗಿದ್ದಾರೆ. ಪಾಕ್ ಪರ ಘೋಷಣೆ ಕೇಳಿ ಗಾಬರಿಗೊಂಡ ಯುವಕರು ಗಮನಿಸಿದಾಗ ಇಬ್ಬರು ಯುವಕರು ಕಟ್ಟಡವೊಂದರ ಬಾಲ್ಕನಿಯಲ್ಲಿ ನಿಂತು ಕೃತ್ಯ ಎಸಗಿದ್ದಾರೆ ಎಂದು ಪೊಲೀಸ್ ಸಹಾಯವಾಣಿಗೆ ಸ್ಥಳೀಯ ಯುವಕರು ಮಾಹಿತಿ ನೀಡಿದ್ದರು.
ಸ್ಥಳಕ್ಕೆ ಧಾವಿಸಿದ ವೈಟ್ಫೀಲ್ಡ್ ಠಾಣೆ ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಿಸಿದಾಗ ಶುಭಾಂಶು ಶುಕ್ಲಾ ಪಾಕ್ ಪರ ಘೋಷಣೆ ಕೂಗಿರುವುದು ಖಚಿತವಾಗಿದೆ. ಆರೋಪಿ ಶುಭಾಂಶು ಶುಕ್ಲಾ ಬೆಂಗಳೂರಿನ ಖಾಸಗಿ ಕಂಪನಿಯೊಂದರ ಉದ್ಯೋಗಿಯಾಗಿದ್ದ, ಸದ್ಯ ಪ್ರಕರಣ ದಾಖಲಿಸಿಕೊಂಡು ಆತನನ್ನು ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಪರೇಷನ್ ಸಿಂಧೂರ ಬಗ್ಗೆ ಸ್ಟೇಟಸ್ ಹಾಕಿದಾತನ ವಿರುದ್ಧ ಪ್ರಕರಣ:
ಮತ್ತೊಂದೆಡೆ, ಆಪರೇಷನ್ ಸಿಂಧೂರ ವಿರೋಧಿಸಿ ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ದ ಆರೋಪದ ಮೇಲೆ ಶಿವಮೊಗ್ಗದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದರು. ಈತನ ವಿರುದ್ಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 26-year-old techie from Chhattisgarh has been arrested by Whitefield police for allegedly shouting pro-Pakistan slogans in the city. The accused, identified as Shubhamshu Shukla, was taken into custody following complaints from the public.
26-08-25 02:04 pm
Bangalore Correspondent
SIT Issues Notice, Sujatha Bhat: ಸುಳ್ಳಜ್ಜಿ ಸು...
25-08-25 10:55 pm
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
26-08-25 10:36 am
Mangalore Correspondent
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am