Santosh Lad, Modi, Pak, War: ಮೋದಿ ತಾವೇ ಸುಪ್ರೀಂ ಎಂಬಂತೆ ವರ್ತಿಸುತ್ತಿದ್ದಾರೆ ; ಪಾಕ್ ಗೆ ನುಗ್ಗಿ ಹೊಡೆಯಬೇಕು ಎಂಬ ನಿರೀಕ್ಷೆ ಇತ್ತು, ಬಿಜೆಪಿಯವರು ತಿರಂಗಾ ಯಾತ್ರೆ ಬದಲು ಟ್ರಂಪ್ ಯಾತ್ರೆ ಮಾಡಲಿ, ಲಾಡ್ ಕಿಡಿ 

16-05-25 10:04 am       Bangalore Correspondent   ಕರ್ನಾಟಕ

ಪಾಕಿಸ್ತಾನ ಗೋಗರೆದ ಕಾರಣ ಕದನ ವಿರಾಮಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ತಮ್ಮ ಭಾಷಣದಲ್ಲಿ ಮೋದಿ ಹೇಳಿದ್ದಾರೆ. ಆದರೆ, ಅದಕ್ಕೂ ಮೊದಲು ಅಮೆರಿಕದ ಅಧ್ಯಕ್ಷ ಟ್ರಂಪ್ ಕದನ‌ ವಿರಾಮ ಪ್ರಸ್ತಾಪಿಸಿದ್ದರು. ಅಮೆರಿಕ ಅಧ್ಯಕ್ಷರ ಮೂಲಕ ಕದನ ವಿರಾಮ ತಿಳಿದುಕೊಳ್ಳಬೇಕಾಯಿತು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.

ಬೆಂಗಳೂರು, ಮೇ 16 : ಪಾಕಿಸ್ತಾನ ಗೋಗರೆದ ಕಾರಣ ಕದನ ವಿರಾಮಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ತಮ್ಮ ಭಾಷಣದಲ್ಲಿ ಮೋದಿ ಹೇಳಿದ್ದಾರೆ. ಆದರೆ, ಅದಕ್ಕೂ ಮೊದಲು ಅಮೆರಿಕದ ಅಧ್ಯಕ್ಷ ಟ್ರಂಪ್ ಕದನ‌ ವಿರಾಮ ಪ್ರಸ್ತಾಪಿಸಿದ್ದರು. ಅಮೆರಿಕ ಅಧ್ಯಕ್ಷರ ಮೂಲಕ ಕದನ ವಿರಾಮ ತಿಳಿದುಕೊಳ್ಳಬೇಕಾಯಿತು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟ್ರಂಪ್ ಹೇಳಿದ ಮಾದರಿಯಲ್ಲಿ ವ್ಯಾಪಾರಕ್ಕಾಗಿ ಯುದ್ಧ ನಿಲ್ಲಿಸಲಾಯಿತೇ ಎಂದು ಪ್ರಶ್ನಿಸಿದರು. ‘ಬಿಜೆಪಿಯವರು ತಿರಂಗಾ ಯಾತ್ರೆ ಮಾಡುತ್ತಿದ್ದಾರೆ. ಅವರು ತಿರಂಗಾ ಯಾತ್ರೆ ಬದಲು ಟ್ರಂಪ್ ಯಾತ್ರೆ ಮಾಡಲಿ’ ಎಂದರು.

ಭಾರತ ಮತ್ತು ಪಾಕಿಸ್ತಾನದ ನಡುವೆ ಯಾವ ಆಧಾರದಲ್ಲಿ ಕದನ ವಿರಾಮ ಘೋಷಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ತಾವೇ ಸುಪ್ರೀಂ ಎಂಬಂತೆ ವರ್ತಿಸುತ್ತಿದ್ದಾರೆ. ಕದನ ವಿರಾಮದ ಬಳಿಕವೂ ಪಾಕಿಸ್ತಾನ ದಾಳಿ ನಡೆಸಿದೆ. ಸರ್ಕಾರಕ್ಕೆ ದೇಶದ ಜನತೆಯ ಬೆಂಬಲ ಇತ್ತು. ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯಬೇಕು ಎಂಬ ನಿರೀಕ್ಷೆ ಇತ್ತು.

ಆದರೆ, ಯಾವ ಆಧಾರದಲ್ಲಿ ಕದನ ವಿರಾಮ ಘೋಷಿಸಿದ್ದಾರೆ. ಎಲ್ಲವೂ ನಿಮ್ಮದೇ ನಿರ್ಧಾರವೇ ಎಂದು ಪ್ರಧಾನಿಯನ್ನು ಪ್ರಶ್ನಿಸಿದರು. ದೇಶದಲ್ಲಿ ಯಾರೂ ಅಂತಿಮ ಅಲ್ಲ. ಬರುತ್ತಾರೆ, ಹೋಗುತ್ತಾರೆ. ಆದರೆ, ಅಂತಿಮವಲ್ಲ. ದೇಶವೇ ಅಂತಿಮ ಹೊರತು ವ್ಯಕ್ತಿಯಲ್ಲ ಎಂದರು.

Tell us clearly, reason for ceasefire, Karnataka Minister Santosh Lad criticises PM Modi.