ಬ್ರೇಕಿಂಗ್ ನ್ಯೂಸ್
22-05-25 11:09 pm HK News Desk ಕರ್ನಾಟಕ
ಮಡಿಕೇರಿ, ಮೇ 22 : 2018 ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪ ಕೊಡಗು ಜನರಲ್ಲಿ ಅಕ್ಷರಶಃ ಭೀತಿ ಹುಟ್ಟಿಸಿತ್ತು. ಆನಂತರವೂ ಅಲ್ಲೊಂದು ಇಲ್ಲೊಂದು ಎನ್ನುವಂತೆ ಎಡವಟ್ಟು ಆಗಿತ್ತು. ಈ ಬಾರಿ ಎಂದಿಗಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಮತ್ತೆ ಪ್ರಾಕೃತಿಕ ವಿಕೋಪ ಮರುಕಳಿಸುತ್ತಾ ಎನ್ನುವ ಭೀತಿ ಉಂಟಾಗಿದೆ.
ಭಾರತೀಯ ಭೂಗರ್ಭ ಶಾಸ್ತ್ರಜ್ಞರು ಸರ್ಕಾರಕ್ಕೆ ಈ ಬಗ್ಗೆ ವರದಿ ಸಲ್ಲಿಸಿದ್ದು, ಈ ಹಿಂದೆ ಪ್ರಾಕೃತಿಕ ವಿಕೋಪ ಸಂಭವಿಸಿದ್ದ ಸ್ಥಳದಲ್ಲೇ ಮತ್ತೆ ಅಪಾಯ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.
ಕೊಡಗಿನ 43 ಪ್ರದೇಶಗಳು ಅಪಾಯಕಾರಿ
ಕೊಡಗಿನಲ್ಲಿ ಈ ಹಿಂದೆ ಅನಾಹುತ ಸಂಭವಿಸಿದ ಜಾಗ ಸೇರಿ 43 ಪ್ರದೇಶಗಳು ಅಪಾಯಕಾರಿ ಎಂದು ಎಚ್ಚರಿಕೆ ನೀಡಲಾಗಿದೆ. ಜೊತೆಗೆ, ಹಟ್ಟಿಹೊಳೆ ಕಾವೇರಿ ನದಿ ಹಾಗೂ ಲಕ್ಷ್ಮಣ ತೀರ್ಥ ನದಿಯ ತಟದಲ್ಲಿ ಇರುವವರು ಎಚ್ಚರ ವಹಿಸಬೇಕು ಎಂದು ತಜ್ಞರು ಎಚ್ಚರಿಕೆ ನೀಡಿರುವುದಾಗಿ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ ತಿಳಿಸಿದ್ದಾರೆ.
ವರದಿಯ ಬೆನ್ನಲ್ಲೇ ಕೊಡಗು ಜಿಲ್ಲಾಡಳಿತ ಈ ಬಾರಿಯ ಮಳೆಗಾಲವನ್ನು ಎದುರಿಸಲು ಸಿದ್ಧತೆ ಮಾಡಿದೆ. ತಜ್ಞರು ಸೂಚಿಸಿದ ಪ್ರದೇಶಗಳಲ್ಲಿ ನಿಗಾ ಇಡಲು ಅಧಿಕಾರಿಗಳಿಗೆ ಸೂಚಿಸಿದೆ. ಜನರಿಗೆ ಅಗತ್ಯ ಸೇವೆ ಲಭ್ಯವಿರುವಂತೆ ನೋಡಿಕೊಳ್ಳಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಪೊಲೀಸ್ ಇಲಾಖೆ, ಅಗ್ನಿಶಾಮಕ ಸಿಬ್ಬಂದಿ, ನೋಡಲ್ ಅಧಿಕಾರಿಗಳು ಹಾಗೂ ಸ್ವಯಂಸೇವಕರನ್ನು ನೇಮಿಸಿಕೊಳ್ಳಲಾಗಿದೆ. ಪ್ರವಾಹ ಎದುರಾಗುವ ಏರಿಯಾದ ಸುತ್ತ 100 ಕ್ಕೂ ಹೆಚ್ಚು ಆಶ್ರಯ ಕೇಂದ್ರಗಳನ್ನು ಆರಂಭಿಸಲು ಚಿಂತನೆ ನಡೆಸಿದ್ದು, ಎಲ್ಲಾ ಮೂಲಭೂತ ಸೌಕರ್ಯ ಸಿದ್ಧಪಡಿಸಿಕೊಳ್ಳಲಾಗಿದೆ. ಜನತೆ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ.
Heavy Rainfall in Kodagu This Year; Experts Warn of Potential Natural Disasters.
28-08-25 02:41 pm
HK News Desk
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 02:51 pm
Mangalore Correspondent
SIT, Sujata Bhat, Dharmasthala Case: ಕೇಸ್ ಹಿಂ...
28-08-25 11:27 am
Pastor John Shamine, Madan Bugadi, IHRACSJC:...
27-08-25 11:02 pm
FIR, Chinnayya, Dharmasthala, Mahesh Thimarod...
27-08-25 09:19 pm
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm