ಬ್ರೇಕಿಂಗ್ ನ್ಯೂಸ್
23-05-25 11:54 am HK News Desk ಕರ್ನಾಟಕ
ಹಾಸನ, ಮೇ 23 : ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮತ್ತೊಬ್ಬ ಕೂಲಿಯಾಳು ಮಹಿಳೆಯನ್ನು ಕಾಡಾನೆ ತುಳಿದು ಸಾಯಿಸಿದ ಘಟನೆ ನಡೆದಿದೆ. ಕಾಡಾನೆ ದಾಳಿಗೆ ಬಲಿಯಾದ ಮಹಿಳೆಯನ್ನು ಚಂದ್ರಮ್ಮ (45) ಎಂದು ಗುರುತಿಸಲಾಗಿದೆ.
ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಅಂಕಿಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಗಜೇಂದ್ರಪುರ ಗ್ರಾಮದ ಮಹಿಳೆ ಚಂದ್ರಮ್ಮ ಅವರು, ಡಾ.ಕರುಣ್ ಎಂಬವರಿಗೆ ಸೇರಿದ ಕಾಫಿ ತೋಟದಲ್ಲಿ ಇಂದು ಬೆಳಗ್ಗೆ ಕೆಲಸಕ್ಕೆ ತೆರಳಿದ್ದಾಗ ಕಾಡಾನೆ ದಾಳಿ ನಡೆಸಿದೆ.
ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ದಾಳಿ ಮಾಡಿದ್ದು ಸೊಂಡಿಲಿನಿಂದ ಎತ್ತಿ ಬಿಸಾಡಿ, ಕಾಲಿನಿಂದ ತುಳಿದು ಬರ್ಬರವಾಗಿ ಸಾಯಿಸಿ ಹಾಕಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ದೌಡಾಯಿಸಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಘಟ್ಟಕ್ಕೆ ಹೊಂದಿಕೊಂಡಿರುವ ಹಾಸನ ಜಿಲ್ಲೆಯ ಬೇಲೂರು, ಸಕಲೇಶಪುರ, ಅರಕಲಗೂಡು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಮಿತಿ ಮೀರಿದ್ದು ಜನರು ಭೀತಿಗೊಳಗಾಗಿದ್ದಾರೆ. ಇತ್ತೀಚೆಗೆ ಮೈಸೂರಿನಿಂದ ಸಾಕಾನೆಗಳನ್ನು ತಂದು ಕಾರ್ಯಾಚರಣೆ ನಡೆಸಿದರೂ, ಫಲಕಾರಿಯಾಗಲಿಲ್ಲ.
A wild elephant trampled a woman to death at Ankihalli in Belur taluk on May 23, intensifying the human-elephant conflict in Hassan district of Karnataka. Chandramma, 45, of Gajendrapura encountered the elephant while working in an estate in the village.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 03:30 pm
HK News Staffer
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm