ಬ್ರೇಕಿಂಗ್ ನ್ಯೂಸ್
26-05-25 12:42 pm HK News Desk ಕರ್ನಾಟಕ
ಸಕಲೇಶಪುರ, ಮೇ 26 : ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಿಂದಾಗಿ ಮಂಗಳೂರು- ಬೆಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್ ಹೆದ್ದಾರಿಯಲ್ಲಿ ಈ ಬಾರಿಯೂ ಭೂಕುಸಿತವಾಗಿದ್ದು ವಾಹನ ಪ್ರಯಾಣಿಕರು ಸಂಕಷ್ಟಕ್ಕೀಡಾಗಿದ್ದಾರೆ. ಸಕಲೇಶಪುರ ತಾಲ್ಲೂಕಿನ ದೋಣಿಗಲ್ ಮತ್ತು ದೊಡ್ಡತಪ್ಪಲು ಎಂಬಲ್ಲಿ ರಸ್ತೆ ಕುಸಿದಿದ್ದು ಒಂದು ಬದಿಯಲ್ಲಿ ಏಕಮುಖದ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ.
ಚತುಷ್ಪಥ ರಸ್ತೆ ನಿರ್ಮಾಣಕ್ಕಾಗಿ ರಸ್ತೆಯ ಎರಡು ಬದಿಗಳಲ್ಲಿ 90 ಡಿಗ್ರಿ ಮಾದರಿಯಲ್ಲಿ ನೂರು ಅಡಿಗಳಷ್ಟು ಗುಡ್ಡವನ್ನು ಅಗೆದಿದ್ದು ಅದೇ ಜಾಗದಲ್ಲಿ ಈಗ ರಸ್ತೆ ಕುಸಿತವಾಗಿದೆ. ಕಳೆದ ಎರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಅಗೆದು ಬಿಟ್ಟಿರುವ ಗುಡ್ಡಗಳಲ್ಲಿ ಮಣ್ಣು ಕುಸಿಯುತ್ತಿದೆ. ಕೆಲವೊಂದು ಕಡೆ ತಡೆಗೋಡೆ ನಿರ್ಮಿಸಿದ್ದರು ಅದರ ಮೇಲಿನಿಂದಲೇ ರಸ್ತೆಗೆ ಮಣ್ಣು ಬಿದ್ದಿದೆ.




ಇದೇ ವೇಳೆ, ಈ ಭಾಗದ ಬೆಟ್ಟಗಳಿಂದ ಮಣ್ಣಿನ ಸಮೇತ ಮರಗಳು ಕೂಡ ನೆಲಕ್ಕೆ ಉರುಳುತ್ತಿದ್ದು ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ. ಈ ಬಾರಿ ಮಳೆಗಾಲ ಆರಂಭದಲ್ಲಿಯೇ ಭೂಕುಸಿತ ಉಂಟಾಗಿದ್ದು ಸಕಲೇಶಪುರ ದೊಡ್ಡತಪ್ಲೆ ಬಳಿ ರಸ್ತೆ ಕುಸಿದು ಕೊಚ್ಚಿ ಹೋಗ ತೊಡಗಿದೆ. ಇಲ್ಲಿ ಏಕಮುಖ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಕಳೆದ ವರ್ಷವೂ ಇದೇ ಜಾಗದಲ್ಲಿ ಗುಡ್ಡ ಕುಸಿದು ಭಾರೀ ತೊಂದರೆಯಾಗಿತ್ತು. ಸ್ಥಳದಲ್ಲೇ ಜೆಸಿಬಿ, ಹಿಟ್ಯಾಚಿ ಯಂತ್ರಗಳನ್ನು ಇರಿಸಿದ್ದು ಮಳೆಯ ಮಧ್ಯೆ ವಾಹನ ಸಂಚಾರ ಸುಗಮಗೊಳಿಸಲು ಪೊಲೀಸರು ಹರದಾಹಸ ಮಾಡುತ್ತಿದ್ದಾರೆ. ಸದ್ಯಕ್ಕೆ ವಾಹನ ಸಂಚಾರಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸಕಲೇಶಪುರದ ಆನೆಮಹಲ್ ಬಳಿ ರಸ್ತೆ ಮೇಲೆ ಮಣ್ಣು ಕುಸಿದಿರುವುದನ್ನು ಶಾಸಕ ಸಿಮೆಂಟ್ ಮಂಜು ಸೋಮವಾರ ಬೆಳಗ್ಗೆ ನೋಡಲು ಬಂದಿದ್ದು ಅವರ ಕಣ್ಣೆದುರೇ ಗುಡ್ಡ ಕುಸಿದು ಬಿದ್ದಿದೆ. ರಾಷ್ಟ್ರೀಯ ಹೆದ್ದಾರಿ ರಸ್ತೆಗೆ ಮಣ್ಣು ಕುಸಿದು ಬಿದ್ದಿದ್ದು ರಾಷ್ಟ್ರೀಯ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿಯಿಂದ ಭೂ ಕುಸಿ
Heavy rainfall across the coastal and Malnad regions has once again caused a landslide along the Shiradi Ghat highway, which connects Mangaluru and Bengaluru. Commuters are facing severe inconvenience due to the disruption. The landslide has occurred in Sakleshpur taluk, particularly near Donigal and Doddathappalu areas, leading to partial road collapse. As a result, traffic is being allowed in only one direction, causing significant delays and congestion.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 03:30 pm
HK News Staffer
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm