ಬ್ರೇಕಿಂಗ್ ನ್ಯೂಸ್
30-05-25 11:13 am Bangalore Correspondent ಕರ್ನಾಟಕ
ಬೆಂಗಳೂರು, ಮೇ 30 : ಕನ್ನಡದ ಪ್ರಖ್ಯಾತ ಕವಿ ಎಚ್.ಎಸ್ ವೆಂಕಟೇಶಮೂರ್ತಿ ಅಲ್ಪಕಾಲದ ಅಸೌಖ್ಯದ ಬಳಿಕ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಎಚ್ಎಸ್ವಿ ಎಂದೇ ಚಿರಪರಿಚಿತರಾಗಿದ್ದ ವೆಂಕಟೇಶ ಮೂರ್ತಿ ಅವರು ಕನ್ನಡ ಸಾಹಿತ್ಯ ಲೋಕದಲ್ಲಿ ಅನೇಕ ಕವಿತೆ, ನಾಟಕ, ಸಾಹಿತ್ಯಗಳನ್ನು ಕೊಡುಗೆ ನೀಡಿದ್ದಾರೆ.
ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ, ಶುಕ್ರವಾರ ಮುಂಜಾನೆ ಮೃತಪಟ್ಟಿದ್ದಾರೆ. ಮೃತರಿಗೆ ನಾಲ್ವರು ಪುತ್ರರಿದ್ದಾರೆ. ಎಚ್.ಎಸ್ ವೆಂಕಟೇಶಮೂರ್ತಿ ಅವರ ಅಂತಿಮ ದರ್ಶನಕ್ಕೆ ಇಂದು ಮಧ್ಯಾಹ್ನ 11ರಿಂದ 2 ಗಂಟೆಯ ತನಕ ನಗರದ ರವೀಂದ್ರ ಕಲಾಕ್ಷೇತ್ರ ಹಿಂಭಾಗದ ಬಯಲು ರಂಗಮಂದಿರದಲ್ಲಿ ವ್ಯವಸ್ಥೆ ಮಾಡಲಾಗಿದೆ.
ವೆಂಕಟೇಶಮೂರ್ತಿ ಕನ್ನಡ ಸಾಹಿತ್ಯ ಲೋಕದಲ್ಲಿ ಪ್ರಮುಖ ಕವಿ, ನಾಟಕಕಾರ, ವಿಮರ್ಶಕ ಮತ್ತು ಪ್ರಾಧ್ಯಾಪಕರಾಗಿ ದುಡಿದಿದ್ದಾರೆ. 1944ರ ಜೂನ್ 23ರಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಗ್ರಾಮದಲ್ಲಿ ಜನಿಸಿದರು. ಅವರ ತಂದೆ ನಾರಾಯಣ ಭಟ್ಟ ಮತ್ತು ತಾಯಿ ನಾಗರತ್ನಮ್ಮ. ಎಚ್ಎಸ್ವಿ ಅವರು ತಮ್ಮ ಬಾಲ್ಯವನ್ನು ಗ್ರಾಮೀಣ ಪರಿಸರದಲ್ಲಿ ಕಳೆದಿದ್ದರು. ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಎಂಎ ಪದವಿ ಪಡೆದಿದ್ದು 30 ವರ್ಷಗಳ ಕಾಲ ಬೆಂಗಳೂರಿನ ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. "ಕನ್ನಡದಲ್ಲಿ ಕಥನ ಕವನಗಳು" ಎಂಬ ಮಹಾಪ್ರಬಂಧಕ್ಕೆ ಪಿಎಚ್ ಡಿ ಪದವಿ ಪಡೆದಿದ್ದಾರೆ. 100ಕ್ಕೂ ಹೆಚ್ಚು ಕನ್ನಡ ಕೃತಿಗಳನ್ನು ರಚಿಸಿದ್ದಾರೆ.
'ಲೋಕದ ಕಣ್ಣಿಗೆ ರಾಧೆಯು ಕೂಡಾ..' ಇವರ ಪ್ರಸಿದ್ಧಿ ಪಡೆದ ಭಾವಗೀತೆಗಳಲ್ಲಿ ಒಂದು. ಇವರು ಬರೆದ ಅಮ್ಮಾ ನಾನು ದೇವರಾಣೆ ಭಾವಗೀತೆ, ಐದು ಬೆರಳು ಕೂಡಿ ಮುಷ್ಟಿಯೂ.. ದೇಶಭಕ್ತಿ ಗೀತೆ ಪದ್ಯಗಳು ಬಹಳ ಪ್ರಸಿದ್ಧಿ ಪಡೆದಿ
Kannada poet H.S. Venkatesha Murthy (HSV), 81, passed away in Bengaluru on May 30. He was suffering from age-related ailments.
25-08-25 10:55 pm
Bangalore Correspondent
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
26-08-25 10:36 am
Mangalore Correspondent
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am