ಬ್ರೇಕಿಂಗ್ ನ್ಯೂಸ್
01-06-25 11:50 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್.1: ಮಂಡ್ಯ ಪೊಲೀಸರ ಕರ್ತವ್ಯ ಲೋಪದಿಂದ ಮಗುವೊಂದು ಮೃತಪಟ್ಟ ಬೆನ್ನಲ್ಲೇ ಎಚ್ಚತ್ತಿರುವ ಪೊಲೀಸ್ ಇಲಾಖೆ ತಪಾಸಣೆ ನೆಪದಲ್ಲಿ ಸಕಾರಣವಿಲ್ಲದೆ ವಾಹನಗಳನ್ನು ಏಕಾಏಕಿ ಅಡ್ಡಗಟ್ಟಿ ನಿಲ್ಲಿಸಬಾರದು ಎಂದು ಆದೇಶ ಹೊರಡಿಸಿದೆ.
ಈ ಕುರಿತು ಶನಿವಾರ ರಾಜ್ಯದ ಎಲ್ಲ ಜಿಲ್ಲೆಗಳ ಪೊಲೀಸರಿಗೆ ಸುತ್ತೋಲೆ ಹೊರಡಿಸಿರುವ ಡಿಜಿಪಿ ಡಾ.ಎಂ.ಎ ಸಲೀಂ, ವಾಹನಗಳ ತಪಾಸಣೆ ಸಂಬಂಧ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಆದೇಶಿಸಿದ್ದಾರೆ.
ಹೆದ್ದಾರಿಗಳಲ್ಲಿ ಜಿಗ್ ಜಾಗ್ ಬ್ಯಾರಿಕೇಡ್ ಅಳವಡಿಸಿ ವಾಹನಗಳನ್ನು ತಡೆಯಬಾರದು. ರಸ್ತೆಯಲ್ಲಿ ಏಕಾಏಕಿ ಅಡ್ಡಬಂದು ವಾಹನಗಳನ್ನು ನಿಲ್ಲಿಸಬಾರದು. ವಾಹನಗಳನ್ನು ನಿಲ್ಲಿಸಿ ಕೀ ಕಸಿದು ಅಡ್ಡಿ ಪಡಿಸಬಾರದು. ಬೈಕ್ ಹಿಂಬದಿ ಕುಳಿತಿರುವ ಸವಾರನನ್ನು ಹಿಡಿದೆಳೆಯುವುದು ಮಾಡುವಂತಿಲ್ಲ. ಪ್ರಮುಖವಾಗಿ ಇಂಟಲಿಜೆನ್ಸ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಮ್ ಜಾರಿಯಿರುವ ಬೆಂಗಳೂರು ಸೇರಿದಂತೆ ಇತರ ನಗರಗಳಲ್ಲಿ ತಂತ್ರಜ್ಞಾನ ಆಧರಿತ ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸಲು ಆದ್ಯತೆ ನೀಡಬೇಕು ಎಂದು ಸೂಚಿಸಿದ್ದಾರೆ.
ರಸ್ತೆಗಳಲ್ಲಿ ಅತಿ ವೇಗವಾಗಿ ಚಲಾಯಿಸುವ ವಾಹನಗಳನ್ನು ಬೆನ್ನಟ್ಟುವ ಬದಲಿಗೆ ವಾಹನಗಳ ಸಂಖ್ಯೆ ಗುರುತು ಮಾಡಿಕೊಂಡು ಜಿಲ್ಲಾ ಸರಹದ್ದುಗಳ ನಿಯಂತ್ರಣ ಕೊಠಡಿಗಳಿಗೆ ಮಾಹಿತಿ ರವಾನಿಸಿ ಪ್ರಕರಣ ದಾಖಲಿಸಬೇಕು. ಸಂಚಾರ ನಿಯಮ ಉಲ್ಲಂಘನೆ ಸಲುವಾಗಿ ವಾಹನಗಳನ್ನು ತಪಾಸಣೆ ಮಾಡುವಾಗ ಪ್ರತಿಫಲನ ಜಾಕೆಟ್ ಗಳನ್ನು ಧರಿಸಬೇಕು. ಸಂಜೆ ವೇಳೆ ಎಲ್ ಇಡಿ ಬಟನ್ ಗಳನ್ನು ಉಪಯೋಗಿಸಬೇಕು. ಕರ್ತವ್ಯ ನಿರ್ವಹಣೆ ವೇಳೆ ಕಡ್ಡಾಯವಾಗಿ ಬಾಡಿ ವೋರ್ನ್ ಕ್ಯಾಮೆರಾ ಧರಿಸಿರಬೇಕು ಎಂದು ನಿರ್ದೇಶನ ನೀಡಲಾಗಿದೆ.
Director General and Inspector General of Police (DG&IGP) M A Saleem on Saturday issued new guidelines to the traffic policemen in the state.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 03:30 pm
HK News Staffer
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm