ಬ್ರೇಕಿಂಗ್ ನ್ಯೂಸ್
02-06-25 10:43 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 2 : ಕರಾವಳಿ ಪ್ರದೇಶದಲ್ಲಿ ಮತಾಂಧ ದುಷ್ಟ ಶಕ್ತಿಗಳ ನಿರಂತರ ಅಟ್ಟಹಾಸ ಹಾಗೂ ಹಿಂದೂ ಕಾರ್ಯಕರ್ತರ ಮೇಲಿನ ಹಲ್ಲೆ, ಕೊಲೆ ಪ್ರಕರಣಗಳು ಸರಣಿ ರೂಪದಲ್ಲಿ ಘಟಿಸುತ್ತಲೇ ಇವೆ, ಈ ಸಂಬಂಧ ಹಿಂದೂ ಸಮಾಜಕ್ಕೆ ರಕ್ಷಣೆ ನೀಡಬೇಕಿದ್ದ ಪೊಲೀಸ್ ವ್ಯವಸ್ಥೆ ವಿಪರ್ಯಾಸ ಎನ್ನುವಂತೆ ಹಿಂದೂ ಸಂಘಟಕರಿಗೆ ನಿರಂತರ ಕಿರುಕುಳ ನೀಡುತ್ತಾ, ಸುಳ್ಳು ಕೇಸುಗಳನ್ನು ದಾಖಲಿಸುತ್ತಿದೆ. ಇದನ್ನು ಸಹಿಸುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕಿಸಿದ್ದಾರೆ.
ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಮುಸ್ಲಿಂ ಸಮುದಾಯದ ಟ್ರಕ್ ಚಾಲಕನೊಬ್ಬನ ಕೊಲೆ ಪ್ರಕರಣವನ್ನು ಮುಂದಿಟ್ಟು ಸಂಘಟಿತವಾಗಿ ಸರ್ಕಾರಕ್ಕೆ ಬೆದರಿಕೆ ಒಡ್ಡಿದ ಮುಸ್ಲಿಂ ಸಮುದಾಯದ ಒತ್ತಾಯಕ್ಕೆ ಬೆದರಿ ದಿಢೀರನೇ ಮಂಗಳೂರು ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾ ವರಿಷ್ಠಾಧಿಕಾರಿಯನ್ನು 24 ಗಂಟೆಯೊಳಗೆ ವರ್ಗಾವಣೆ ಮಾಡಿತ್ತು. ಇದರ ಬೆನ್ನಲ್ಲೇ ಹಿಂದೂ ಸಮಾಜದ ಮುಖ್ಯಸ್ಥರ ವಿರುದ್ಧ ಸುಳ್ಳು ಕೇಸುಗಳನ್ನು ದಾಖಲಿಸಿ ಜೈಲಿಗೆ ದೂಡುವ ಪಿತೂರಿ ನಡೆಯುತ್ತಿದೆ.
ಹಿರಿಯರಾದ ಕಲ್ಲಡ್ಕ ಪ್ರಭಾಕರ ಭಟ್ ಸೇರಿದಂತೆ 15ಕ್ಕೂ ಹೆಚ್ಚು ಕಾರ್ಯಕರ್ತರ ಮೇಲೆ ಎಫ್ಐಆರ್ ದಾಖಲಿಸಿದ್ದು, ಹಿಂದೂ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರ ಮನೆ, ಮನೆಗಳನ್ನು ಶೋಧಿಸಿ ಆತಂಕದ ವಾತಾವರಣ ಸೃಷ್ಟಿಸುತ್ತಿರುವುದು ಅತ್ಯಂತ ಖಂಡನೀಯ ಕ್ರಮವಾಗಿದೆ.
ಅದೇ ರೀತಿ ನಮ್ಮ ಪಕ್ಷದ ಮುಖಂಡರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಹೊರ ಜಿಲ್ಲೆಗಳಿಗೆ ಗಡಿಪಾರು ಮಾಡುತ್ತಿರುವ ಕ್ರಮ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ನಾಚಿಕೆಗೇಡಿನ ಕ್ರಮವಾಗಿದೆ. ಒಂದು ಸಮುದಾಯದ ಪರವಾಗಿ ಪೊಲೀಸ್ ವ್ಯವಸ್ಥೆ ಹಾಗೂ ಸರ್ಕಾರ ನಿಲ್ಲುವ ಮೂಲಕ ಕರಾವಳಿ ಪ್ರದೇಶದ ಸಾಮಾಜಿಕ ಸ್ವಾಸ್ಥ್ಯವನ್ನು ಹಾಳು ಮಾಡಿ ದಕ್ಷಿಣ ಕನ್ನಡ ಹಾಗೂ ಉಡುಪಿಯನ್ನು ಭಯಪೀಡಿತ ಜಿಲ್ಲೆಗಳನ್ನಾಗಿಸಲು ರಾಜ್ಯ ಸರ್ಕಾರ ಹೊರಟಂತಿದೆ.
ಕಾಂಗ್ರೆಸ್ ಸರ್ಕಾರದ ನಡೆ, ಪೊಲೀಸರ ವರ್ತನೆ ಏಕಪಕ್ಷೀಯವಾಗಿ ಇದೇ ರೀತಿ ಮುಂದುವರೆದರೆ ರಾಜ್ಯ ಬಿಜೆಪಿ ಸುಮ್ಮನೆ ಕೂರದು ಎಂದು ಎಚ್ಚರಿಸ ಬಯಸುತ್ತೇನೆ. ಈ ಕೂಡಲೇ ಕಲ್ಲಡ್ಕ ಪ್ರಭಾಕರ ಭಟ್ ಸೇರಿದಂತೆ 15ಕ್ಕೂ ಹೆಚ್ಚು ಹಿಂದೂ ಸಂಘಟನೆಗಳ ಪ್ರಮುಖರ ಮೇಲೆ ದಾಖಲಿಸಿರುವ ಎಫ್ಐಆರ್ ರದ್ದುಪಡಿಸಿ ಗಡಿಪಾರು ಆದೇಶ ಹಿಂಪಡೆಯಲಿ, ಇಲ್ಲವಾದರೆ ಮುಂದಿನ ಪರಿಣಾಮಗಳಿಗೆ ಸರ್ಕಾರವೇ ಜವಾಬ್ದಾರಿ ಆಗಬೇಕಾದೀತು ಎಂದು ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ.
BJP state president B.Y. Vijayendra has strongly criticized the Karnataka government and police over their handling of recent communal tensions in the coastal region. He alleged that the administration is favoring one community and targeting Hindu activists with false cases.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 03:30 pm
HK News Staffer
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm