ಬ್ರೇಕಿಂಗ್ ನ್ಯೂಸ್
05-06-25 11:06 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 5 : ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಎಸಿಎಸ್) ಆಗಿ ಐಎಎಸ್ ಅಧಿಕಾರಿ ಅಂಜುಂ ಪರ್ವೇಜ್ ಅವರನ್ನು ನೇಮಕ ಮಾಡಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು, ಇದರ ಜೊತೆಗೆ ಆರ್ ಡಿಪಿಆರ್ ಮತ್ತು ಅರಣ್ಯ ಇಲಾಖೆಯ ಎಸಿಎಸ್ ಹುದ್ದೆಯ ಹೆಚ್ಚುವರಿ ಹೊಣೆಯನ್ನೂ ಅಂಜುಂ ಪರ್ವೇಜ್ ನಿರ್ವಹಿಸಲಿದ್ದಾರೆ.
ಅಂಜುಮ್ ಪರ್ವೇಜ್ ಅವರು 1994ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಎಸ್ ಅಧಿಕಾರಿಯಾಗಿದ್ದು, ನಗರ ಮತ್ತು ಗ್ರಾಮೀಣಾಭಿವೃದ್ಧಿ, ನೀರು ಸರಬರಾಜು ಮತ್ತು ಸಾರಿಗೆ ಇಲಾಖೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಧಾನ ಕಾರ್ಯದರ್ಶಿ (ಸಾರಿಗೆ), ವ್ಯವಸ್ಥಾಪಕ ನಿರ್ದೇಶಕ (ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್) ಇತ್ಯಾದಿ ಹುದ್ದೆಯನ್ನೂ ನಿರ್ವಹಿಸಿದ್ದಾರೆ.
ಅಂಜುಮ್ ಪರ್ವೇಜ್ ಅವರು ಪ್ರತಿಷ್ಠಿತ ಐಐಟಿ, ದೆಹಲಿಯಿಂದ ಬಿ ಟೆಕ್ ಮತ್ತು ಐಐಎಂ ಬೆಂಗಳೂರಿನಿಂದ ಪಿಜಿಪಿಎಂ ಪದವಿ ಪಡೆದಿದ್ದಾರೆ. 2023ರ ಜುಲೈ 1ರಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದು ಇದರ ಜೊತೆಗೆ ಸಿಎಂಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಮತ್ತೊಂದು ಹೊಣೆ ವಹಿಸಿಕೊಂಡಿದ್ದಾರೆ. ಸಿಎಂ ಪರ್ಸನಲ್ ಸೆಕ್ರೆಟರಿಯಾಗಿ ಇತ್ತೀಚೆಗೆ ನಿವೃತ್ತಿಯಾಗಿರುವ ಅತೀಕ್ ಅಹ್ಮದ್ ಅವರನ್ನು ನೇಮಿಸಲಾಗಿದೆ.
Anjum Parwez Appointed Additional Chief Secretary to Karnataka CM Siddaramaiah.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 03:30 pm
HK News Staffer
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm