ಬ್ರೇಕಿಂಗ್ ನ್ಯೂಸ್
05-06-25 04:31 pm Bengaluru Staff ಕರ್ನಾಟಕ
ಬೆಂಗಳೂರು, ಜೂನ್ 5: ಚಿನ್ನಸ್ವಾಮಿ ಕಾಲ್ತುಳಿತ ದುರಂತ ರಾಜಕೀಯ ಸ್ವರೂಪ ಪಡೆದಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಇದೇ ವೇಳೆ, ಆರ್ ಸಿಬಿ ತಂಡದ ಸನ್ಮಾನ ಕಾರ್ಯಕ್ರಮದಲ್ಲಿ ಮುಂಚೂಣಿಯಲ್ಲಿದ್ದ ಡಿಸಿಎಂ ಡಿಕೆ ಶಿವಕುಮಾರ್, ದುರಂತದ ಹೊಣೆ ಹೊರಲು ಸರ್ಕಾರ ಸಿದ್ಧ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, "ಇದು ರಾಜಕೀಯ ಮಾಡುವ ಸಮಯವಲ್ಲ. ದುರಂತದಲ್ಲಿ ಮೃತಪಟ್ಟ ಕುಟುಂಬಸ್ಥರ ಜೊತೆಗೆ ಗಟ್ಟಿಯಾಗಿ ನಿಲ್ಲಬೇಕಾಗಿದೆ ಎಂದರು. ಬಿಜೆಪಿ ಅವಧಿಯಲ್ಲಿ ಏನೆಲ್ಲಾ ಆಯ್ತು ಎಂದು ಚರ್ಚೆ ಮಾಡೋಕೆ ಹೋಗಲ್ಲ. ಬಿಜೆಪಿ ಹಾಗೂ ಜೆಡಿಎಸ್ ಯಾವತ್ತೂ ಹೆಣದ ಮೇಲೆ ರಾಜಕೀಯ ನಡೆಸಿದೆ. ನಾನು ಹಾಗೆ ಮಾಡುವುದಿಲ್ಲ. ಇದು ನಮ್ಮ ರಾಜ್ಯ ಮತ್ತು ಬೆಂಗಳೂರು ನಗರದ ವರ್ಚಸ್ಸಿನ ಪ್ರಶ್ನೆ. ನಾವು ಇದಕ್ಕೆ ಹೊಣೆ ಹೊತ್ತುಕೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.
ನಾವು ಹೀಗಾಗಲಿದೆ ಎಂಬ ನಿರೀಕ್ಷೆ ಮಾಡಿರಲಿಲ್ಲ. ಜನರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಮೆಟ್ರೋ ಸಂಚಾರ ನಿಲ್ಲಿಸಿದ್ದೆವು. ಆದರೂ ಅಪಾರ ಜನಸ್ತೋಮವನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ. ಸರ್ಕಾರ ಈ ಕಾಲ್ತುಳಿತದ ದುರಂತ ಹೊರಲು ಸಿದ್ಧ ಎಂದು ಡಿಕೆ ಶಿವಕುಮಾರ್ ಹೇಳಿದರು. ಇದು ನಮ್ಮ ಕುಟುಂಬಕ್ಕೆ ಆದ ನೋವು. ಈ ನೋವನ್ನು ತಡೆದುಕೊಳ್ಳಲು ಯಾರಿಂದಲು ಸಾಧ್ಯವಿಲ್ಲ. ನಾನು ಯಾವುದೇ ಕಾರಣಕ್ಕೂ ಈ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ. ಮಕ್ಕಳ ಸ್ಥಿತಿ ನೋಡಿ ನನಗೆ ಬೇಸರ ಆಗಿದೆ ಎಂದು ಭಾವುಕರಾದರು.
ಪೊಲೀಸ್ ಕಮಿಷನರ್ ನನ್ನ ಬಳಿ ಬಂದು ಚಿನ್ನಸ್ವಾಮಿ ಬಳಿ ಕಾಲ್ತುಳಿತ ಸಂಭವಿಸಿದ್ದು ಕಾರ್ಯಕ್ರಮ ಬೇಗ ಮುಗಿಸುವಂತೆ ಹೇಳಿದರು. ನಾನು ಕೂಡಲೇ ಕೆಸಿಎ ಆಡಳಿತ ಮಂಡಳಿಗೆ ಸೂಚನೆ ನೀಡಿ, ಕಾರ್ಯಕ್ರಮ ನಿಲ್ಲಿಸಿದೆ. ಅವರೂ ತಡ ಮಾಡದೇ ವಿಜಯೋತ್ಸವ ಕಾರ್ಯಕ್ರಮ ನಿಲ್ಲಿಸಿದರು. ಕಾಲ್ತುಳಿತ ಬಗ್ಗೆ ಪೊಲೀಸ್ ಕಮಿಷನರ್ ಮಾಹಿತಿ ನೀಡುತ್ತಿದ್ದಂತೆ, ಕ್ರೀಡಾಂಗಣದಲ್ಲಿ ಯಾರಿಗೂ ಮಾತನಾಡಲು ಅವಕಾಶ ಕೊಡಲಿಲ್ಲ. ಇಲ್ಲಿ ಯಾವುದೇ ಆರೋಪ, ಪ್ರತ್ಯಾರೋಪ ಮಾಡುವುದು ಬೇಡ. ಇದಕ್ಕೆಲ್ಲ ಸಂದರ್ಭ ಇದಲ್ಲ ಎಂದರು.
Bengaluru's Prestige at Stake, We Took Responsibility, Stopped Event as Commissioner Advised, DCM DK Shivakumar
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 02:02 pm
HK News Staffer
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm