ಬ್ರೇಕಿಂಗ್ ನ್ಯೂಸ್
07-06-25 06:57 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 7 : ಆರ್ ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಗೃಹ ಸಚಿವ ಜಿ. ಪರಮೇಶ್ವರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿರುವುದಾಗಿ ಕರ್ನಾಟಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ತಿಳಿಸಿದ್ದಾರೆ.
"ಕಾಲ್ತುಳಿತ ಪ್ರಕರಣದಲ್ಲಿ ಮೊದಲ ಆರೋಪಿ ಸಿದ್ದರಾಮಯ್ಯ ಮತ್ತು ಎರಡನೇ ಆರೋಪಿ ಡಿ.ಕೆ. ಶಿವಕುಮಾರ್ ಆಗಿದ್ದು, ಇಬ್ಬರೂ ಆರ್ ಸಿಬಿ ಗೆಲುವಿನಿಂದ ರಾಜಕೀಯ ಲಾಭ ಪಡೆಯುವ ಉದ್ದೇಶವನ್ನು ಹೊಂದಿದ್ದರು. ಇದಕ್ಕಾಗಿ ಅಧಿಕಾರ ದುರುಪಯೋಗ ಮಾಡಿದ್ದು, ಅವರಿಂದಲೇ ಸಾವುಗಳು ಸಂಭವಿಸಿವೆ. ಗೃಹ ಸಚಿವ ಪರಮೇಶ್ವರ ಅವರನ್ನು ಮೂರನೇ ಆರೋಪಿ ಎಂದು ಉಲ್ಲೇಖಿಸಿದ್ದೇನೆ. ನನ್ನ ಪ್ರಕಾರ, ಅವರಿಗೆ ಯಾವುದೇ ಉದ್ದೇಶವಿಲ್ಲ. ಆದರೆ ಅವರು ನಿರ್ಲಕ್ಷ್ಯ ವಹಿಸಿದ್ದರು ಮತ್ತು ಗೃಹ ಸಚಿವರಾಗಿ ವಿಫಲರಾಗಿದ್ದಾರೆ ಎಂದು ರಾಜೀವ್ ಆರೋಪಿಸಿದ್ದಾರೆ.
ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ದು, ದುರಂತಕ್ಕೆ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನೈತಿಕ ಹೊಣೆ ಹೊರ ಬೇಕಾಗುತ್ತದೆ ಎಂದು ಹೇಳಿದರು. ದೂರಿನ ಪ್ರತಿಯನ್ನು ಎಸಿಪಿಗೆ ನೀಡಿದ್ದೇನೆ. ಅದನ್ನು ಎಫ್‌ಐಆರ್ ಆಗಿ ಪರಿವರ್ತಿಸಬೇಕು. ಇಲ್ಲದಿದ್ದರೆ, ನಾನು ನ್ಯಾಯಾಲಯಕ್ಕೆ ಹೋಗಿ ಪಿಸಿಆರ್ ದಾಖಲಿಸುತ್ತೇನೆ. ಪಾರದರ್ಶಕ ಕಾನೂನು ಪ್ರಕ್ರಿಯೆಗೆ ಒತ್ತಾಯಿಸುತ್ತೇನೆ ಎಂದವರು ತಿಳಿಸಿದ್ದಾರೆ.
ಆರ್‌ಸಿಬಿಯ ಐಪಿಎಲ್ ಗೆಲುವಿನಿಂದ ರಾಜಕೀಯ ಲಾಭ ಪಡೆಯುವ ಉದ್ದೇಶ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರಿಗಿತ್ತು. ಸರ್ಕಾರಕ್ಕೂ ಆರ್‌ಸಿಬಿಗೂ ಏನು ಸಂಬಂಧ? ಆರ್‌ಸಿಬಿಯ ವಿಜಯೋತ್ಸವಕ್ಕೆ ಸಾರ್ವಜನಿಕ ಹಣವನ್ನು ಏಕೆ ಖರ್ಚು ಮಾಡಲಾಯಿತು?" ಎಂದು ಪ್ರಶ್ನಿಸಿದರು.
BJP Files Police Complaint Against CM Siddaramaiah, DCM Shivakumar, and Home Minister Over RCB Victory Stampede Incident.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
15-10-25 12:09 pm
HK News Desk
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
15-10-25 12:12 pm
Udupi Correspondent
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
15-10-25 12:00 pm
HK News Desk
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm