ಬ್ರೇಕಿಂಗ್ ನ್ಯೂಸ್
08-06-25 06:03 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್.8: ಆರ್ ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತದಲ್ಲಿ ಮೃತಪಟ್ಟ ಸಂತ್ರಸ್ತರ ಕುಟುಂಬಗಳ ಪರವಾಗಿ ಒಂದು ತಿಂಗಳ ವೇತನ ಬಿಟ್ಟುಕೊಡಲು ಬಿಜೆಪಿ ಶಾಸಕರು ನಿರ್ಧರಿಸಿದ್ದಾಗಿ ವಿರೋಧ ಪಕ್ಷದ ನಾಯಕ ಅರ್. ಅಶೋಕ್ ಘೋಷಣೆ ಮಾಡಿದ್ದಾರೆ.
ಭಾನುವಾರ ವಿಧಾನಸೌಧದಲ್ಲಿ ಮಾತನಾಡಿದ ಅವರು, ಕಾಲ್ತುಳಿತದ ಘಟನೆಗೆ ಮುನ್ನ ಪೊಲೀಸರು ನೀಡಿದ ಸೂಚನೆಗಳನ್ನು ಕಾಂಗ್ರೆಸ್ ಸರ್ಕಾರ ಉಲ್ಲಂಘಿಸಿದೆ. ಈ ಮೂಲಕ ಸರ್ಕಾರವೇ ಕಾನೂನು ಮೀರಿದೆ. ಆದರೆ ಸರ್ಕಾರ ನಡೆಸುವವರು ಕಾಲ್ತುಳಿತ ಘಟನೆಗೆ ಪೊಲೀಸರು ಕಾರಣ ಎಂದು ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಶಕ್ತಿ ಬಣಗಳ ತಿಕ್ಕಾಟ ಇಲ್ಲದಿದ್ದರೆ ವಿದ್ಯಾರ್ಥಿಗಳು ವಿನಾಕಾರಣ ಸಾಯುತ್ತಿರಲಿಲ್ಲ. ಅವರ ಕುಟುಂಬದವರಿಗೆ ಸಾಂತ್ವನ ಹೇಳಬೇಕಿದ್ದವರು ಕಪ್ ಗೆ ಮುತ್ತಿಡುತ್ತಿದ್ದರು. ಮಧ್ಯಾಹ್ನವೇ ಮೊದಲ ಸಾವಾದಾಗ ಪೊಲೀಸರು ಮಾಹಿತಿ ನೀಡಿದ್ದರು. ಕಾರ್ಯಕ್ರಮ ಆರಂಭವಾದಾಗಲೇ 8 ಮಕ್ಕಳು ಸತ್ತಿದ್ದರು. ಆ ನಂತರವೂ ಕಾರ್ಯಕ್ರಮ ಮಾಡುತ್ತಾರೆಂದರೆ ಇವರೆಲ್ಲರೂ ಕಟುಕ, ಕಲ್ಲಿನ ಹೃದಯದವರು ಎಂದು ದೂರಿದರು.
ಕಾನೂನನ್ನು ಪೊಲೀಸ್ ಅಧಿಕಾರಿಗಳು ಜಾರಿ ಮಾಡುತ್ತಾರೆ. 4-6-2025 ರಂದು ವಿಧಾನಸೌಧ ಪೊಲೀಸರು ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಆತುರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಹಾಗೂ ಸಿಬ್ಬಂದಿ ಕೊರತೆ ಇರುವುದರಿಂದ ಬಂದೋಬಸ್ತ್ ಕರ್ತವ್ಯಕ್ಕೆ ತೊಂದರೆಯಾಗಲಿದೆ ಎಂದು ಪತ್ರದಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಇದನ್ನು ನಿಷೇಧಿಸಬೇಕು ಎಂದೂ ಹೇಳಲಾಗಿದೆ. ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಿದ ಸ್ಪೀಕರ್ ಆಗ ಕಾನೂನು ಪುಸ್ತಕ ತೋರಿಸಿದ್ದರು. ಈಗ ಸರ್ಕಾರವೇ ಕಾನೂನು ಉಲ್ಲಂಘಿಸಿದೆ ಎಂದು ಆಕ್ರೋಶ ಹೊರಹಾಕಿದರು.
ಇಲಾಖೆಯ ಸಿಬ್ಬಂದಿ ಹಾಗೂ ಕುಟುಂಬದವರು ಬರಬಾರದು ಎಂದು ಕೂಡ ಪೊಲೀಸರು ಸೂಚಿಸಿದ್ದರು. ಆದರೆ ಅಲ್ಲಿ ಎಲ್ಲರ ಕುಟುಂಬದವರು ಇದ್ದರು. ಸಿಸಿಟಿವಿ ಕ್ಯಾಮರಾ ಬೇಕೆಂದು ಹೇಳಿದ್ದರೂ ಅದನ್ನು ಪಾಲಿಸಿಲ್ಲ. ಡ್ರೋನ್ ಗೆ ಅವಕಾಶ ಇಲ್ಲ ಎಂದು ಸೂಚಿಸಲಾಗಿದೆ. ಈ ಎಲ್ಲ ಸೂಚನೆಗಳನ್ನು ಸರ್ಕಾರ ಹರಿದು ಬಿಸಾಡಿದೆ. ವೇದಿಕೆಯಲ್ಲಿ 20-30 ಜನರು ಮಾತ್ರ ಇರಬೇಕು ಎಂಬ ಸೂಚನೆಯನ್ನು ಸಂಪೂರ್ಣ ಉಲ್ಲಂಘಿಸಿದ್ದು, 11 ಆಟಗಾರರು ಸೇರಿದಂತೆ ಒಟ್ಟು 200 ಜನರು ವೇದಿಕೆಯಲ್ಲಿದ್ದರು. ಇದು ಸರ್ಕಾರಿ ಕಾರ್ಯಕ್ರಮ ಎಂದು ಆದೇಶ ಪತ್ರದಲ್ಲಿದ್ದರೂ, ಸಿಎಂ ಸಿದ್ದರಾಮಯ್ಯ ಸರ್ಕಾರಿ ಕಾರ್ಯಕ್ರಮ ಅಲ್ಲ ಎಂದಿದ್ದಾರೆ ಎಂದು ದೂರಿದರು.
ಇಷ್ಟೆಲ್ಲ ಕಾನೂನು ಉಲ್ಲಂಘನೆ ಮಾಡಿದ್ದರೂ, ಕೊನೆಗೆ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ರಸ್ತೆಯಲ್ಲಿ ನಿಂತು ಟ್ರಾಫಿಕ್ ನಿಯಂತ್ರಿಸುತ್ತಿದ್ದ ಪೊಲೀಸರ ವಿರುದ್ಧ ಕ್ರಮ ವಹಿಸಲಾಗಿದೆ. ಠಾಣೆ ಪೊಲೀಸರನ್ನು ಕೂಡ ಅಮಾನತು ಮಾಡಿದ್ದಾರೆ ಎಂದರು.
ಸರ್ಕಾರ ಮಾಡಿದ ತಪ್ಪುಗಳ ಬಗ್ಗೆ ಜನರು ಪ್ರಶ್ನೆ ಮಾಡುತ್ತಿದ್ದಾರೆ. ಇದಕ್ಕಾಗಿ ವಿಶೇಷ ಅಧಿವೇಶನ ಕರೆದು ಚರ್ಚೆ ನಡೆಸಬೇಕು. ಮೂರು ತನಿಖೆಗೆ ಆದೇಶಿಸಿದ್ದು, ಇದರಲ್ಲಿ ಯಾವ ತನಿಖೆ ನೈಜ ಎಂದು ಗೊತ್ತಾಗಿಲ್ಲ. ಹಾಲಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಬೇಕಿದೆ. ಈ ಕುರಿತು ನಾವೆಲ್ಲರೂ ಆಗ್ರಹಿಸುತ್ತಿದ್ದೇವೆ ಎಂದು ತಿಳಿಸಿದರು.
BJP MLAs Donate One Month's Salary to Stampede Victims Families, R Ashoka Slams Congress Government for Ignoring Warnings, Blames Leaders for Tragedy.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
15-10-25 12:09 pm
HK News Desk
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
15-10-25 12:12 pm
Udupi Correspondent
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
15-10-25 12:00 pm
HK News Desk
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm