Agumbe Ghat, Closed: ಜೂ.15ರಿಂದ - ಸೆ. 30ರವರೆಗೆ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ, ಜಿಲ್ಲಾಧಿಕಾರಿ ಆದೇಶ 

13-06-25 07:01 pm       HK News Desk   ಕರ್ನಾಟಕ

ಮುಂಗಾರು ಮಳೆ ಆರಂಭವಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಆಗುಂಬೆ ಘಾಟಿಯಲ್ಲಿ ಜೂ.15ರಿಂದ ಸೆಪ್ಟೆಂಬರ್ 30ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಭಾರೀ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಆದೇಶಿಸಲಾಗಿದೆ.

ಶಿವಮೊಗ್ಗ, ಜೂ.13: ಮುಂಗಾರು ಮಳೆ ಆರಂಭವಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಆಗುಂಬೆ ಘಾಟಿಯಲ್ಲಿ ಜೂ.15ರಿಂದ ಸೆಪ್ಟೆಂಬರ್ 30ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಭಾರೀ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಆದೇಶಿಸಲಾಗಿದೆ.

ಭಾರೀ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಓಡಾಟದಿಂದಾಗಿ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂ ಕುಸಿತ ಆಗುವ ಸಂಭವ ಇರುವುದರಿಂದ ಜೂ.15ರಿಂದ ಸೆ.30ರವರೆಗೆ ಭಾರಿ ವಾಹನಗಳ ಸಂಚಾರವನ್ನು (ಜಲ್ಲಿ ಮತ್ತು ಸರಕು ಸಾಗಾಣೆ ತುಂಬಿದ ವಾಹನಗಳು) ನಿಷೇಧಿಸಿ ಬದಲಿ ಮಾರ್ಗದಲ್ಲಿ ಸಂಚರಿಸಲು ಆದೇಶಿಸಿಲಾಗಿದೆ.

ಉಡುಪಿಯಿಂದ ತೀರ್ಥಹಳ್ಳಿಗೆ ಸಂಚರಿಸುವ ಭಾರಿ ವಾಹನಗಳು ಬದಲಿ ಮಾರ್ಗವಾಗಿ ಉಡುಪಿ-ಕುಂದಾಪುರ-ಸಿದ್ಧಾಪುರ-ಮಾಸ್ತಿಕಟ್ಟೆ-ತೀರ್ಥಹಳ್ಳಿ ಮಾರ್ಗವಾಗಿ ಸಂಚರಿಸುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶದಲ್ಲಿ ತಿಳಿಸಲಾಗಿದೆ.

Due to the onset of the monsoon, the Shivamogga District Administration has imposed a ban on the movement of heavy vehicles through the Agumbe Ghat from June 15 to September 30. The order, issued by Deputy Commissioner Dr. K. Vidyakumari, aims to prevent landslides and ensure safety, as continuous rain and heavy traffic pose a risk to the ghat roads.