ಬ್ರೇಕಿಂಗ್ ನ್ಯೂಸ್
16-06-25 10:44 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 16 : ನಾವು ಅಹಮದಾಬಾದ್ ವಿಮಾನ ದುರಂತದ ಬಗ್ಗೆ ರಾಜಕೀಯ ಮಾಡೋದಿಲ್ಲ. ಹೆಣದ ಮೇಲೆ ರಾಜಕೀಯ ಮಾಡುವುದು ಏನಿದ್ದರೂ ಬಿಜೆಪಿ ಹಾಗೂ ಜೆಡಿಎಸ್ ಕೆಲಸ. ನಾವು ಅವರಂತೆ ನೀಚ ರಾಜಕೀಯ ಮಾಡುವುದಿಲ್ಲ ಎಂದು ಡಿ.ಕೆ. ಶಿವಕುಮಾರ್ ಕಿಡಿಕಾರಿದರು.
ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಅಹಮದಾಬಾದ್ ವಿಮಾನ ದುರಂತ ದೇಶದಲ್ಲಿ ಮಾತ್ರವಲ್ಲ ಪ್ರಪಂಚದಲ್ಲಿ ಎಲ್ಲಿಯೂ ನಡೆಯಬಾರದು. ಈ ದುರಂತದಲ್ಲಿ ಅನೇಕರು ಸುಟ್ಟುಹೋಗಿದ್ದಾರೆ. ಆ ದುರಂತದ ಸ್ಥಳ ನೋಡಿದರೆ ಆಘಾತವಾಗುತ್ತದೆ. ಅಕಸ್ಮಾತ್ 500 ಮೀಟರ್ ಮುಂದಕ್ಕೆ ಹೋಗಿ ವಿಮಾನ ಅಪ್ಪಳಿಸಿದ್ದರೂ ಸಾವಿರಾರು ಮಂದಿಯ ಜೀವಹಾನಿಯಾಗುತ್ತಿತ್ತು. ಈಗ ವೈದ್ಯಕೀಯ ಹಾಸ್ಟೆಲ್ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕೆಲವು ವಿದ್ಯಾರ್ಥಿಗಳಿಗೆ ಮಾನಸಿಕ ಆಘಾತವಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನಾವು ಕೆಲವರನ್ನು ಭೇಟಿ ಮಾಡಿ ಮಾತನಾಡಿದೆವು. ಈ ಅಪಘಾತ ಕುರಿತು ಬ್ಲಾಕ್ ಬಾಕ್ಸ್ ತನಿಖೆ ವರದಿ ಬರಬೇಕಾಗಿದೆ. ಕಾಂಗ್ರೆಸ್ ಪಕ್ಷದ ವತಿಯಿಂದ ಅಲ್ಲಿ ಹೋಗಿ ಸಾಂತ್ವನ ಹೇಳಿದ್ದೇವೆ ಎಂದು ಮಾಹಿತಿ ನೀಡಿದರು.
ಈ ಘಟನೆ ನಂತರ ವಿಮಾನಯಾನ ಸಚಿವರ ಕಾರ್ಯವೈಖರಿ ಆರೋಪದ ಬಗ್ಗೆ ಪ್ರತಿಕ್ರಿಯಿಸುತ್ತಾ, ಬಿಜೆಪಿ ಹಾಗೂ ಜೆಡಿಎಸ್ನವರಿಗೆ ಹೆಣದ ಮೇಲೆ ರಾಜಕೀಯ ಮಾಡುವುದೇ ಕೆಲಸ. ನಾವು ಹಳೇ ಪ್ರಕರಣ ಹಾಗೂ ಈ ಪ್ರಕರಣವನ್ನು ಮುಂದಿಟ್ಟುಕೊಂಡು ಟೀಕೆ ಮಾಡಬಹುದು. ಆದರೆ ನಾವು ಅವರ ಮಟ್ಟಕ್ಕೆ ಇಳಿಯುವುದಿಲ್ಲ. ಈ ವಿಚಾರದಲ್ಲಿ ಅನೇಕ ತಾಂತ್ರಿಕ ಅಂಶಗಳಿವೆ. ನಾನು ಅವುಗಳ ತಜ್ಞನಲ್ಲ. ಈ ಎಲ್ಲಾ ವಿಚಾರವಾಗಿ ಚರ್ಚೆ ಆಗುತ್ತಿದೆ. ಆದರೆ ಈ ವಿಚಾರವನ್ನು ರಾಜಕೀಯಗೊಳಿಸುವ ವ್ಯಕ್ತಿ ನಾನಲ್ಲ. ಈ ಸಮಯದಲ್ಲಿ ಕೇಂದ್ರ ಸಚಿವರ ಬಗ್ಗೆ ಟೀಕೆ ಮಾಡುವುದಿಲ್ಲ. ಇದು ದೇಶದ ಗಂಭೀರ ವಿಚಾರ ಎಂದು ತಿಳಿಸಿದರು.
ರಾಜ್ಯ ಸರ್ಕಾರ ವಸೂಲಿ ಮಾಡುತ್ತಿರುವ ತೆರಿಗೆ ನೋಡಿದರೆ ನನ್ನ ಸರ್ಕಾರ ಇದ್ದಿದ್ದರೆ ಗೃಹಲಕ್ಷ್ಮಿಗೆ 5 ಸಾವಿರ ಕೊಡುತ್ತಿದ್ದೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಬಹಳ ಸಂತೋಷ. ಅವರು ಚೆನ್ನಾಗಿ ಆರೋಗ್ಯಕರವಾಗಿರಲಿ ಎಂದು ತಿಳಿಸಿದರು.
ಏಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ವಿಮಾನ ದುರಂತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಹಮದಾಬಾದ್ನಿಂದ ಲಂಡನ್ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಜೂನ್ 12 ರಂದು ಟೇಕ್ ಅಪ್ ಆದ ಕೆಲವೇ ನಿಮಿಷಗಳಲ್ಲಿ ಪತನವಾಗಿ ದುರಂತ ಸಂಭವಿಸಿದೆ.
Karnataka Deputy Chief Minister and Congress leader D.K. Shivakumar lashed out at the BJP and JD(S), accusing them of indulging in "cheap politics over dead bodies" in the wake of the recent Ahmedabad plane crash.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
15-10-25 12:09 pm
HK News Desk
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
15-10-25 12:12 pm
Udupi Correspondent
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
15-10-25 12:00 pm
HK News Desk
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm