ಬ್ರೇಕಿಂಗ್ ನ್ಯೂಸ್
17-06-25 05:35 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 17 : ಕರ್ನಾಟಕದಲ್ಲಿ ಕಮಲ್ ಹಾಸನ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರ ಮಾಡುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಯಾವ ಸಿನಿಮಾ ಪ್ರದರ್ಶಿಸಬೇಕು, ಯಾವುದನ್ನು ಪ್ರದರ್ಶಿಸಬಾರದು ಎಂಬುದನ್ನು ಗೂಂಡಾಗಳ ಗುಂಪು ನಿರ್ಧರಿಸಬಾರದು’ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು ಸೆನ್ಸಾರ್ ಮಂಡಳಿಯಿಂದ ಪ್ರಮಾಣಪತ್ರ ಪಡೆದ ಚಿತ್ರಗಳನ್ನು ತಡೆಯುವ ಹಕ್ಕು ಯಾವುದೇ ಗುಂಪುಗಳಿಗೆ ಇಲ್ಲ ಎಂದು ಕೋರ್ಟ್ ಹೇಳಿದೆ.
ಕಮಲ್ ಹಾಸನ್ ನಟಿಸಿದ ಚಿತ್ರ 'ಥಗ್ ಲೈಫ್' ಪ್ರದರ್ಶನಕ್ಕೆ ಅಡ್ಡಿಪಡಿಸುವ ಗುಂಪುಗಳಿಂದ ರಕ್ಷಣೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ರಿಲೀಸ್ ಗೆ ಒಪ್ಪಿಗೆ ನೀಡಿದೆ. ಅಲ್ಲದೆ, ಚಿತ್ರವನ್ನು ಬಿಡುಗಡೆ ಮಾಡಬಾರದು ಅಂತ ಹೇಳುವಂತಿಲ್ಲ. ಇಷ್ಟ ಇಲ್ಲದಿದ್ದರೆ ನೋಡದೇ ಇರಬಹುದು. ಭಾಷೆಯ ವಿಚಾರದ ಕುರಿತು ಚರ್ಚೆ ಜನರ ನಡುವೆ ಇರಬಹುದು, ಹಾಗಂತ ಆತ ನಟಿಸಿದ ಚಿತ್ರ ಪ್ರದರ್ಶನ ಮಾಡುವಂತಿಲ್ಲ ಎಂದು ಹೇಳುವ ಹಾಗಿಲ್ಲ ಎಂಬುದಾಗಿ ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಕಮಲ್ ಹಾಸನ್ ಅವರ 'ಥಗ್ ಲೈಫ್' ಚಿತ್ರ ಬಿಡುಗಡೆಗೆ ಸಂಬಂಧಿಸಿ ಚಿತ್ರ ಮಂದಿರಗಳಿಗೆ ರಕ್ಷಣೆ ನೀಡುವ ಕುರಿತಾಗಿ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಪ್ರತಿಕ್ರಿಯೆ ಸಲ್ಲಿಸುವಂತೆ ನಿರ್ದೇಶಿಸಿದೆ. ನ್ಯಾಯಮೂರ್ತಿಗಳಾದ ಉಜ್ಜಲ್ ಭುಯಾನ್ ಮತ್ತು ಮನಮೋಹನ್ ಅವರಿದ್ದ ಪೀಠವು, ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC) ಅನುಮೋದಿಸಿದ ಪ್ರತಿ ಚಿತ್ರವನ್ನು ಬಿಡುಗಡೆ ಮಾಡಲು ಅನುಮತಿಸಬೇಕು ಮತ್ತು ಈ ಬಗ್ಗೆ ಯಾವುದೇ ಗುಂಪು ತಡೆಯುವುದಕ್ಕೆ ಅವಕಾಶ ನೀಡಬಾರದು ಎಂದು ಕಾನೂನು ಹೇಳುತ್ತದೆ ಎಂದು ಹೇಳಿದೆ.
ಚಿತ್ರದ ಕುರಿತಾಗಿ ಕರ್ನಾಟಕ ಹೈಕೋರ್ಟ್ನಲ್ಲಿ ಬಾಕಿ ಇರುವ ಪ್ರಕರಣವನ್ನು ಸುಪ್ರೀಂ ಕೋರ್ಟಿಗೆ ವರ್ಗಾಯಿಸುವಂತೆ ದ್ವಿಸದಸ್ಯ ಪೀಠ ಆದೇಶಿಸಿದೆ. ಇತ್ತೀಚೆಗೆ ಥಗ್ ಲೈಫ್ ಸಿನಿಮಾ ಈವೆಂಟ್ನಲ್ಲಿ ಭಾಗವಹಿಸಿದ್ದ ನಟ ಕಮಲ್ ಹಾಸನ್ ಕನ್ನಡ ಭಾಷೆ ತಮಿಳು ಭಾಷೆಯಿಂದ ಹುಟ್ಟಿದೆ ಎಂದು ಹೇಳುವ ಮೂಲಕ ವಿವಾದ ಮೈಗೆಳೆದುಕೊಂಡಿದ್ದರು. ಇದರ ಬೆನ್ನಲ್ಲೇ ಕನ್ನಡ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ಮಾಡಿದ್ದಲ್ಲದೆ ಭಾರೀ ವಿವಾದ ಸೃಷ್ಟಿಸಿದ್ದವು.
ಸಿನಿಮಾ ರಿಲೀಸ್ ನಿರಾಕರಿಸಿದ ಹಂಚಿಕೆದಾರ !
ಆದರೆ ಕರ್ನಾಟಕದಲ್ಲಿ ಸಿನಿಮಾ ರಿಲೀಸ್ ಮಾಡಲು ಕಂಟ್ರಾಕ್ಟ್ ಪಡೆದಿದ್ದ ಹಂಚಿಕೆದಾರ ವೆಂಕಟೇಶ್ , ಸಿನಿಮಾ ರಿಲೀಸ್ ಮಾಡದಿರಲು ನಿರ್ಧರಿಸಿದ್ದಾರೆ. 8 ಕೋಟಿ ರೂ.ಗೆ ಹಂಚಿಕೆ ಮಾಡಲು ಒಪ್ಪಿಕೊಂಡಿದ್ದರು. ‘ನಾನು ಈಗ ಸಿನಿಮಾ ರಿಲೀಸ್ ಮಾಡುವುದಿಲ್ಲ. ಈಗಾಗಲೇ ಅಡ್ವಾನ್ಸ್ ಕೊಟ್ಟು ಸಿನಿಮಾ ಖರೀದಿ ಮಾಡಿದ್ದೆ. ಆ ಹಣ ಇನ್ನೂ ನನಗೆ ವಾಪಾಸ್ ಬಂದಿಲ್ಲ. ಅದರ ಓಡಾಟದಲ್ಲಿ ಇದ್ದೇನೆ’ ಎಂದು ಹೇಳಿದ್ದಾರೆ.
The Supreme Court on Tuesday slammed the Karnataka government and asked it to allow the release of Tamil superstar Kamal Haasan's film 'Thug Life', stating that it cannot allow mobs and vigilantes to take over the streets.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
15-10-25 12:09 pm
HK News Desk
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
15-10-25 12:12 pm
Udupi Correspondent
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
15-10-25 12:00 pm
HK News Desk
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm