ಬ್ರೇಕಿಂಗ್ ನ್ಯೂಸ್
20-06-25 10:36 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 20 : ರಾಜ್ಯ ಸರ್ಕಾರದ ಗುತ್ತಿಗೆಯಲ್ಲಿ ಮೀಸಲು ಹೆಚ್ಚಿಸಿದ ಬೆನ್ನಲ್ಲೇ ಅಲ್ಪಸಂಖ್ಯಾತರಿಗೆ ವಸತಿ ಯೋಜನೆಯಲ್ಲೂ ಮೀಸಲಾತಿ ಹೆಚ್ಚಳ ಮಾಡಲಾಗಿದೆ. ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿಯನ್ನು ಶೇಕಡಾ 10 ರಿಂದ 15 ಕ್ಕೆ ಹೆಚ್ಚಿಸಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಸಿದ ಸಂಪುಟ ಸಭೆಯಲ್ಲಿ, ರಾಜ್ಯದ ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಹೆಚ್ಚಿಸುವ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್, ರಾಜ್ಯಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಸತಿ ಇಲಾಖೆಯು ಜಾರಿಗೆ ತರುತ್ತಿರುವ ವಿವಿಧ ವಸತಿ ಯೋಜನೆಯಲ್ಲಿ, ಅಲ್ಪಸಂಖ್ಯಾತರ ಮೀಸಲಾತಿಯನ್ನು ಶೇಕಡಾ 10 ರಿಂದ 15 ಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದೆ" ಎಂದು ತಿಳಿಸಿದರು.
ರಾಜ್ಯದ ಅಲ್ಪಸಂಖ್ಯಾತರಲ್ಲಿ ಹೆಚ್ಚಿನ ಸಂಖ್ಯೆಯ ಜನ ವಸತಿ ರಹಿತರಾಗಿದ್ದು, ಇದನ್ನು ಗಮನಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಘಟನೆಯಲ್ಲಿ 11 ಜನರು ಸಾವನ್ನಪ್ಪಿದ ನಂತರ ಜನಸಂದಣಿ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿ ಮಸೂದೆ ತರಲು ಮುಂದಾಗಿದ್ದು ಮುಂದಿನ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಸಚಿವ ಎಚ್.ಕೆ. ಪಾಟೀಲ್ ಇದೇ ವೇಳೆ ತಿಳಿಸಿದ್ದಾರೆ.
ಅಲ್ಲದೆ, ತಪ್ಪು ಮಾಹಿತಿ ಅಥವಾ ನಕಲಿ ಸುದ್ದಿಗಳ ವಿರುದ್ಧದ ಮಸೂದೆಗಳು ಮತ್ತು ದ್ವೇಷ ಭಾಷಣಗಳು ಮತ್ತು ಅಪರಾಧಗಳ ಮಸೂದೆ ಕೂಡ ಚರ್ಚೆಗೆ ಬರುವ ಸಾಧ್ಯತೆಯಿದೆ. ಇಂದು ನಾಲ್ಕು ಮಸೂದೆಗಳನ್ನು ಪ್ರಸ್ತಾಪಿಸಿದ್ದು ಕರ್ನಾಟಕ ಜನಸಂದಣಿ ನಿಯಂತ್ರಣ ಮತ್ತು ಸಾಮೂಹಿಕ ಸಭೆ ನಡೆಯುವ ಸ್ಥಳ ಮಸೂದೆ, 2025; ಕರ್ನಾಟಕ ರೋಹಿತ್ ವೇಮುಲಾ ಮಸೂದೆ, 2025; ಕರ್ನಾಟಕ ತಪ್ಪು ಮಾಹಿತಿ, ನಕಲಿ ಸುದ್ದಿ ನಿಷೇಧ ಮಸೂದೆ, 2025; ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ತಡೆಗಟ್ಟುವಿಕೆ ಮಸೂದೆ, 2025," ಎಂದು ಪಾಟೀಲ್ ತಿಳಿಸಿದ್ದಾರೆ.
Minority Housing Quota Increased from 10 to 15 percent in Karnataka, Cabinet Led by CM Siddaramaiah Approves Key Decision
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
15-10-25 12:09 pm
HK News Desk
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
15-10-25 12:12 pm
Udupi Correspondent
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
15-10-25 12:00 pm
HK News Desk
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm