ಬ್ರೇಕಿಂಗ್ ನ್ಯೂಸ್
24-06-25 08:16 pm HK News Desk ಕರ್ನಾಟಕ
ತುಮಕೂರು, ಜೂ 24 : ಬಾಯ್ ಫ್ರೆಂಡ್ ಜೊತೆಗೆ ಗಲಾಟೆ ಮಾಡಿಕೊಂಡು ಯುವತಿಯೊಬ್ಬಳು ಸಾವಿಗೆ ಶರಣಾಗಿರೋ ಘಟನೆ ಹೊಸಹಳ್ಳಿಯಲ್ಲಿ ನಡೆದಿದೆ.
ಚೈತನ್ಯ (22) ಮೃತ ಯುವತಿ.
22 ವರ್ಷದ ಯುವತಿ ಚೈತನ್ಯ ಫೈನಲ್ ಇಯರ್ ಡಿಗ್ರಿ ವ್ಯಾಸಂಗ ಮಾಡುತ್ತಿದ್ದಳು. ಅಲ್ಲದೇ ಮೇಕಪ್ ಆರ್ಟಿಸ್ಟ್ ಸಹ ಆಗಿದ್ದ ಚೈತನ್ಯ ತಾಯಿ ಜೊತೆಗೆ ವಾಸವಾಗಿದ್ದಳು. ತುಮಕೂರು ಗ್ರಾಮಾಂತರದ ಹೊಸಹಳ್ಳಿ ನಿವಾಸಿಯಾದ ಚೈತನ್ಯ ಪಕ್ಕದ ಊರಿನ ವಿಜಯ್ ಕುಮಾರ್ ಎಂಬಾತನ ಜೊತೆಗೆ ಪ್ರೀತಿ ಮಾಡುತ್ತಿದ್ದಳಂತೆ. ಚೈತನ್ಯಳನ್ನು ಪ್ರೀತಿಸುತ್ತಿದ್ದ ಯುವಕ ವಿಜಯ್ ಕುಮಾರ್ ಕಾರು ಚಾಲಕನಾಗಿದ್ದ.


ಇತ್ತೀಚೆಗೆ ಸ್ಟ್ರೀಟ್ ಫೋಟೋಗ್ರಾಫರ್ ಒಬ್ಬ ಚೈತನ್ಯ ಫೋಟೋ ತೆಗೆದಿದ್ದ. ಹೀಗೆ ತೆಗೆದಿದ್ದ ಫೋಟೋಗಳ ರೀಲ್ಸ್ ಅನ್ನು ಚೈತನ್ಯ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸ್ಟೇಟಸ್ ಹಾಕಿಕೊಂಡಿದ್ದಳಂತೆ. ಈ ರೀಲ್ಸ್ ಸ್ಟೇಟಸ್ ಹಾಕಿದ್ದಕ್ಕೆ ಲವರ್ ವಿಜಯ್ ಕೋಪಗೊಂಡಿದ್ದಾನೆ. ಇದೇ ವಿಚಾರ ಪ್ರಶ್ನಿಸಲು ನಿನ್ನೆ ರಾತ್ರಿ ಚೈತನ್ಯ ಮನೆ ಬಳಿ ವಿಜಯ್ ಬಂದಿದ್ದನಂತೆ. ಆಗ ರೂಂನಲ್ಲಿದ್ದರೂ ಬಾಗಿಲು ಚಿಲಕ ಹಾಕಿ, ಕಿಟಕಿ ಬಳಿ ಇಬ್ಬರು ಗಲಾಟೆ ಮಾಡಿಕೊಂಡಿದ್ದಾರೆ. ಅಲ್ಲದೇ ವಿಜಯ್ ಈ ವಿಚಾರ ಚೈತನ್ಯ ಸಂಬಂಧಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾನೆ.
ಇದಾದ ಕೆಲವು ಗಂಟೆಗಳ ಬಳಿಕ ಚೇತನ್ಯ ನೇಣಿ ಹಾಕಿಕೊಂಡು ಜೀವಬಿಟ್ಟಿದ್ದಾಳೆ. ಸದ್ಯ ಈ ಘಟನೆ ಸಂಬಂಧ ತುಮಕೂರು ಗ್ರಾ.ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಚೈತನ್ಯ ಸಾವಿಗೆ ವಿಜಯ್ ಕುಮಾರ್ ಕಾರಣ ಎಂದು ದೂರು ದಾಖಲಾಗಿದೆ. ಸದ್ಯ ವಿಜಯ್ನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
A 22-year-old student from Hosanahalli village in Tumakuru district died in a tragic incident following a personal dispute reportedly linked to a social media post. The young woman, identified as Chaitanya, was a final-year degree student and also worked as a makeup artist. She was living with her mother.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm