ಬ್ರೇಕಿಂಗ್ ನ್ಯೂಸ್
26-06-25 02:15 pm HK News Desk ಕರ್ನಾಟಕ
ಹಾಸನ, ಜೂನ್ 26 : ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಯುವಕ ಹೃದಯಾಘಾತಕ್ಕೆ ಬಲಿಯಾಗಿದ್ದು ಕಳೆದೊಂದು ತಿಂಗಳಲ್ಲಿ 12 ಮಂದಿ ಹೃದಯ ಸ್ತಂಭನದಿಂದ ಜೀವ ಕಳಕೊಂಡಿದ್ದಾರೆ. ಬೆಂಗಳೂರಿನಲ್ಲಿ ಆಟೋ ಚಾಲಕನಾಗಿದ್ದ ಚನ್ನರಾಯಪಟ್ಟಣ ಮೂಲದ ಯೋಗೇಶ್ ಎಂ.ಕೆ. (32) ಸಾವನ್ನಪ್ಪಿದ ಯುವಕ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ, ಎಂ.ಹೊನ್ನೇನಹಳ್ಳಿ ಗ್ರಾಮದ ಯುವಕ, ಬೆಂಗಳೂರಿನ ಲಗ್ಗೆರೆಯಲ್ಲಿ ಆಟೋ ಚಾಲಕನಾಗಿದ್ದ ಯೋಗೇಶ್ ಮೃತರು. ನಾಲ್ಕು ವರ್ಷಗಳ ಹಿಂದೆ ವಿವಾಹವಾಗಿದ್ದು ಪತ್ನಿಯೊಂದಿಗೆ ಬೆಂಗಳೂರಿನ ಲಗ್ಗೆರೆಯಲ್ಲಿ ನೆಲೆಸಿದ್ದ. ಬುಧವಾರ ಮುಂಜಾನೆ ವರೆಗೂ ಆಟೋ ಓಡಿಸಿ ಮನೆಗೆ ಬಂದು ಮಲಗಿದ್ದು, ಕೊಠಡಿಯಲ್ಲಿ ಮಲಗಿದ್ದಲ್ಲಿಯೇ ಸಾವನ್ನಪ್ಪಿದ್ದಾನೆ. ಹೃದಯಾಘಾತದಿಂದಲೇ ಸಾವನ್ನಪ್ಪಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಹಾಸನ ಜಿಲ್ಲೆಯ ಮೂಲದ ಯುವಕರು ಕಳೆದೊಂದು ತಿಂಗಳಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ್ದು ಜನಸಾಮಾನ್ಯರಲ್ಲಿ ಆತಂಕ ಮೂಡಿಸಿದೆ.
ಮೇ, ಜೂನ್ ತಿಂಗಳಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಳ
ಕಳೆದೊಂದು ತಿಂಗಳ ಹೃದಯಾಘಾತ ಮಾಹಿತಿ ನೋಡಿದರೆ, ಈಗಿನದ್ದು 12ನೇ ಸಾವು. ಮೇ 20 ರಂದು ಅರಕಲಗೂಡು ತಾಲೂಕಿನ ಅಭಿಷೇಕ್, ಹೊಳೆನರಸೀಪುರದ 20 ವರ್ಷದ ವಿದ್ಯಾರ್ಥಿನಿ ಸಂಧ್ಯಾ ಸಾವನ್ನಪ್ಪಿದ್ದರು. ಮೇ 28ರಂದು ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಕವನ ಮೃತಪಟ್ಟಿದ್ದರು. ಆನಂತರ,
ಜೂ.11ರಂದು ಹೊಳೆನರಸೀಪುರದ ಯುವಕ ನಿಶಾಂತ್ ಸಾವು, ಜೂ.12ರಂದು ಕೆಎಸ್ಸಾರ್ಟಿಸಿ ಬಸ್ ನಲ್ಲಿ ಸಾರಿಗೆ ಸಿಬ್ಬಂದಿ ನಾಗಪ್ಪ ಸಾವನ್ನಪ್ಪಿದ್ದರು. ಅದೇ ದಿನ ಹಾಸನ ನಗರಸಭೆ ಮಾಜಿ ಸದಸ್ಯ ನೀಲಕಂಠಪ್ಪ ಉಸಿರು ಚೆಲ್ಲಿದ್ದರು.
ಜೂ.13ರಂದು ಚನ್ನರಾಯಪಟ್ಟಣದ ಗ್ರಾಮ ಲೆಕ್ಕಿಗ ದೇವರಾಜ್ ಎಂಬವರು ಕಾರಲ್ಲೇ ಮೃತಪಟ್ಟಿದ್ದರು. ಅದೇ ದಿನ ಸತೀಶ್ ಎಂಬುವರು ಹಠಾತ್ ಸಾವಿಗೀಡಾಗಿದ್ದರು. 14 ರಂದು ಕಾಂತರಾಜು, 18ರಂದು ಅರಸೀಕೆರೆ ಮೂಲದ ಶಿರಾದಲ್ಲಿ ಕೆಲಸ ಮಾಡುತ್ತಿದ್ದ ಅರಣ್ಯ ಇಲಾಖೆ ನೌಕರ ನವೀನ್ ಸಾವನ್ನಪ್ಪಿದ್ದರು. ಜೂ.21ರಂದು ಬೇಲೂರಿನ ನಿಶಾದ್ ಅಹ್ಮದ್, ಹಾಗೂ ಹಾಸನದ ಮೂಲದ ಚೇತನ್ ತೀವ್ರ ಹೃದಯಾಘಾತದಿಂದ ಸಾವು ಕಂಡಿದ್ದರು.
ಎರಡು ವರ್ಷದಲ್ಲಿ 508 ಹೃದಯಾಘಾತ !
ಹಾಸನ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳ ಅವಧಿಯಲ್ಲಿ 500ಕ್ಕೂ ಅಧಿಕ ಮಂದಿಗೆ ಹೃದಯಾಘಾತವಾಗಿದ್ದು, 100ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ ಎಂಬುದು ಆರೋಗ್ಯ ಇಲಾಖೆ ಮಾಹಿತಿ. 20-30 ವರ್ಷ ವಯೋಮಾನದ 14 ಮಂದಿ, 30ರಿಂದ 40 ವರ್ಷದೊಳಗಿನ 40 ಮಂದಿ, 70 ವರ್ಷದ ಮೇಲ್ಪಟ್ಟ 140 ಮಂದಿಗೆ ಹೃದಯ ಸ್ತಂಭನವಾಗಿದೆ. ಒಟ್ಟಾರೆ 140 ಮಂದಿ ಸಾವಿಗೀಡಾಗಿದ್ದು, ಉಳಿದವರು ಚಿಕಿತ್ಸೆಯಲ್ಲಿದ್ದಾರೆ. ಒತ್ತಡದ ಜೀವನ ಶೈಲಿ, ಮಾನಸಿಕ ಒತ್ತಡ, ಖಿನ್ನತೆಗೆ ಒಳಗಾಗುವುದು, ಕೆಲಸದ ಒತ್ತಡ ಹೃದಯಾಘಾತಕ್ಕೆ ಕಾರಣ ಎಂದು ಹಾಸನ ಜಿಲ್ಲಾ ವೈಧ್ಯಾಧಿಕಾರಿ ಡಾ. ಅನಿಲ್ ಹೇಳುತ್ತಾರೆ
A 32-year-old youth from Hassan district has died due to a heart attack, marking the 12th such death in the district within a month. The alarming rise in heart-related fatalities has sparked concern among residents and health officials.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 10:33 pm
HK News Desk
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
14-10-25 10:36 pm
Mangalore Correspondent
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
ಬಿ.ಸಿ ರೋಡ್ ; ಹೆದ್ದಾರಿ ಬದಿ ಕಾರು ರಿಪೇರಿ ಮಾಡುತ್...
14-10-25 05:46 pm
14-10-25 04:44 pm
HK News Desk
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm