ಬ್ರೇಕಿಂಗ್ ನ್ಯೂಸ್
29-06-25 10:48 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 29 : ಕರ್ಣಾಟಕ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಆಗಿದ್ದ ಶ್ರೀಕೃಷ್ಣನ್ ಹರಿಹರ ಶರ್ಮಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ರಾಜಿನಾಮೆಯನ್ನು ಆಡಳಿತ ಮಂಡಳಿ ಅಂಗೀಕರಿಸಿದೆ. ನಿರ್ದಿಷ್ಟ ವೆಚ್ಚಕ್ಕೆ ಸಂಬಂಧಿಸಿ ಆಡಳಿತ ಮಂಡಳಿಯ ಜೊತೆಗೆ ತಲೆದೋರಿದ್ದ ಬಿಕ್ಕಟ್ಟು ತೀವ್ರತೆ ಪಡೆದುಕೊಂಡ ನಂತರ ಸಿಇಓ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಕಾರ್ಯ ನಿರ್ವಾಹಕ ನಿರ್ದೇಶಕ ಶೇಖರ್ ರಾವ್ ಕೂಡ ಜುಲೈ 30ರೊಳಗೆ ಕೆಳಗಿಳಿಯುವ ಸಾಧ್ಯತೆ ಇದೆ.
ಕರ್ಣಾಟಕ ಬ್ಯಾಂಕ್ ಮಾಡಿದ ಒಂದು ನಿರ್ದಿಷ್ಟ ವೆಚ್ಚದ ಕುರಿತು ಶ್ರೀಕೃಷ್ಣನ್ ಹರಿಹರ ಶರ್ಮಾ ಮತ್ತು ಶೇಖರ್ ರಾವ್ ಹಾಗೂ ಬ್ಯಾಂಕಿನ ಆಡಳಿತ ಮಂಡಳಿಯ ನಡುವೆ ತಿಕ್ಕಾಟ ಏರ್ಪಟ್ಟಿತ್ತು. ಈ ಹೊಯ್ದಾಟವೀಗ ಬ್ಯಾಂಕಿನ ಅತ್ಯುನ್ನತ ಹುದ್ದೆಯಲ್ಲಿದ್ದವರು ರಾಜೀನಾಮೆ ನೀಡುವ ಹಂತಕ್ಕೆ ಬಂದಿದೆ.
ಕಳೆದ ಮೇ ತಿಂಗಳಲ್ಲಿ ಅಡಿಟ್ ರಿಪೋರ್ಟ್ ಸಂದರ್ಭದಲ್ಲಿ, ಬ್ಯಾಂಕಿನ ಪೂರ್ಣಾವಧಿ ನಿರ್ದೇಶಕರ ಅಧಿಕಾರವನ್ನು ಮೀರಿ ಇತರ ಉದ್ದೇಶಗಳಿಗಾಗಿ ಮಾಡಿದ 1.53 ಕೋಟಿ ರೂ. ವೆಚ್ಚದ ಬಗ್ಗೆ ಉಲ್ಲೇಖಿಸಲಾಗಿತ್ತು. ಇದಕ್ಕೆ ಆಡಳಿತ ಮಂಡಳಿಯ ಅನುಮೋದನೆ ಪಡೆದುಕೊಂಡಿರಲಿಲ್ಲ. ಈ ಸಂಬಂಧ ಸಿಇಒ, ಕಾರ್ಯ ನಿರ್ವಾಹಕ ನಿರ್ದೇಶಕರು ಮತ್ತು ಆಡಳಿತ ನಡುವೆ ವ್ಯತ್ಯಾಸಗಳು ಹುಟ್ಟಿಕೊಂಡಿದ್ದವು. 'ಈ ಮೊತ್ತವನ್ನು ಸಂಬಂಧಪಟ್ಟ ನಿರ್ದೇಶಕರಿಂದ ವಸೂಲಿ ಮಾಡಬಹುದು' ಎಂದು ಲೆಕ್ಕಪರಿಶೋಧಕರು ಹೇಳಿದ್ದರಿಂದ ಬಿಸಿ ತಾರಕಕ್ಕೇರಿತ್ತು.
ವೆಚ್ಚದ ಬಗ್ಗೆ ಸಿಇಓ ಹರಿಹರ ಶರ್ಮಾ ಸೂಕ್ತ ಸ್ಪಷ್ಟನೆ ನೀಡಲು ಸಾಧ್ಯವಾಗದೆ, ಅದು ಸಿಲ್ಲಿ ಮ್ಯಾಟರ್ ಎಂದಿದ್ದರು. ಇದೇ ವಿಚಾರದಲ್ಲಿ ಹುಟ್ಟಿಕೊಂಡಿದ್ದ ವಿವಾದ ಇದೀಗ ಇಬ್ಬರ ಹುದ್ದೆಯನ್ನು ಬಲಿ ಪಡೆಯುವ ಹಂತಕ್ಕೆ ತಲುಪಿದೆ. ಕಳೆದ ತ್ರೈಮಾಸಿಕ ಅವಧಿಯಲ್ಲಿ ಬ್ಯಾಂಕಿನ ಲಾಭದಲ್ಲಿಯೂ ಕಡಿಮೆಯಾಗಿರುವುದು ಸಿಇಓ ಮತ್ತು ಕಾರ್ಯ ನಿರ್ವಾಹಕ ನಿರ್ದೇಶಕರ ತಲೆಗೆ ಬಂದಿತ್ತು. ಇದರ ನಡುವೆ ಅನಗತ್ಯ ವೆಚ್ಚ ಎಂದು ಅಡಿಟರ್ಸ್ ಪಟ್ಟಿ ಮಾಡಿರುವುದು ಬ್ಯಾಂಕಿನ ಆಡಳಿತದಲ್ಲಿ ಸಂಚಲನ ಮೂಡಿಸಿತ್ತು.
Srikrishnan Hari Hara Sarma, the Managing Director and Chief Executive Officer of Karnataka Bank, has resigned from his position following internal disagreements with the bank’s board over financial decisions. The board has accepted his resignation.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 10:33 pm
HK News Desk
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
14-10-25 10:36 pm
Mangalore Correspondent
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
ಬಿ.ಸಿ ರೋಡ್ ; ಹೆದ್ದಾರಿ ಬದಿ ಕಾರು ರಿಪೇರಿ ಮಾಡುತ್...
14-10-25 05:46 pm
14-10-25 04:44 pm
HK News Desk
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm