ಬ್ರೇಕಿಂಗ್ ನ್ಯೂಸ್
30-06-25 12:05 pm HK News Desk ಕರ್ನಾಟಕ
ಹಾಸನ, ಜೂ 30: ಜಿಲ್ಲೆಯಲ್ಲಿ ಸಾವಿನ ಸೂತಕದ ಛಾಯೆ ಮುಂದುವರೆದಿದ್ದು, ಹೃದಯಾಘಾತಕ್ಕೆ ಸೈನಿಕನೋರ್ವ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ 19ಕ್ಕೆ ಏರಿಕೆಯಾಗಿದ್ದು, ಒಂದೇ ವಾರದಲ್ಲಿ 6 ಮಂದಿ ಮೃತಪಟ್ಟಿದ್ದಾರೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳು ಗ್ರಾಮದ ಲೋಹಿತ್ ಅಲಿಯಾಸ್ ಪುಚ್ಚಿ (38) ಮೃತಪಟ್ಟ ಸೈನಿಕ. ಕಳೆದ 18 ವರ್ಷಗಳಿಂದ ಸೈನಿಕರಾಗಿ ದೇಶಸೇವೆ ಮಾಡಿದ್ದರು. ಕಳೆದ 7 ವರ್ಷದ ಹಿಂದೆ ಮದುವೆಯಾಗಿದ್ದು, 3 ವರ್ಷದ ಹೆಣ್ಣು ಮಗಳಿದ್ದಾಳೆ.
ರಜೆಗೆ ಬಂದಿದ್ದ ಸೈನಿಕ ;
18 ವರ್ಷ ದೇಶಸೇವೆ ಮೂಲಕ ಸೈನಿಕ ವೃತ್ತಿ ಮಾಡಿದ್ದ ಲೋಹಿತ್ ಮುಂದಿನ ವರ್ಷ ನಿವೃತ್ತಿಯಾಗಿ ಊರಿಗೆ ಬಂದು ಮಡದಿ ಮಕ್ಕಳೊಂದಿಗೆ ವಾಸವಿರಬೇಕು ಎಂದುಕೊಂಡಿದ್ದರು. ಆದರೆ, ವಿಧಿಯಾಟವೇ ಬೇರೆಯಾಗಿದೆ. ಹೆಂಡತಿ ಮತ್ತು ಮಗಳನ್ನು ನೋಡಲು ರಜೆ ಮೇಲೆ ಬಂದಿದ್ದ ಯೋಧ ವಿಧಿಯಾಟಕ್ಕೆ ಬಲಿಯಾಗಿದ್ದಾರೆ. ಯೋಧ ಲೋಹಿತ್ ಅವರು ಜುಲೈ 03ರಂದು ವಾಪಸ್ ಕರ್ತವ್ಯಕ್ಕೆ ಹಾಜರಾಗಬೇಕಿತ್ತು. ಹಾಗಾಗಿ ಜು.3ರಂದು ರೈಲಿನಲ್ಲಿ ಹೊರಡಲು ಟಿಕೆಟ್ ಕೂಡಾ ಬುಕ್ ಮಾಡಿದ್ದರು.
ಉಳುಮೆ ಮಾಡುವ ವೇಳೆ ಹೃದಯಾಘಾತ;
ಜೂ.28ರಂದು ತಮ್ಮ ಜಮೀನಿನಲ್ಲಿ ಟ್ರ್ಯಾಕ್ಟರ್ ಮೂಲಕ ಜಮೀನನ್ನು ಉಳುಮೆ ಮಾಡುವ ವೇಳೆ ಹೃದಯಾಘಾತವಾಗಿತ್ತು. ಆಗ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿ ಹೊಡೆದ ಹಿನ್ನೆಲೆ ಲೋಹಿತ್ ಅವರಿಗೆ ಸಣ್ಣಪುಟ್ಟ ಗಾಯಗಳೂ ಆಗಿದ್ದವು. ತಕ್ಷಣ ಸ್ಥಳೀಯರು ಲೋಹಿತ್ ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದ್ರೆ ದುರಾದೃಷ್ಟವಶಾತ್ ಚಿಕಿತ್ಸೆಗೆ ಸ್ಪಂದಿಸದೆ ಲೋಹಿತ್ ಭಾನುವಾರ (ಜೂ.29) ಮಧ್ಯಾಹ್ನ ಮೃತಪಟ್ಟಿದ್ದಾರೆ.
ಮೃತ ಲೋಹಿತ್ ಹಾಸನ ಜಿಲ್ಲೆಯ ಕೆಂಬಾಳು ಗ್ರಾಮದ ಜಿಲ್ಲಾ ಸಹಕಾರಿ ಬ್ಯಾಂಕ್ ನ ಕಾರ್ಯದರ್ಶಿಯಾಗಿದ್ದ ಪುನೀತ್ ಸಹೋದರರಾಗಿದ್ದು, ಕುಟುಂಬದಲ್ಲಿ ಸಾವಿನಿಂದ ದುಃಖ ಮಡುಗಟ್ಟಿದೆ.
ಇದೀಗ ಬೆಂಗಳೂರು ಗ್ರಾಮಾಂತರ ಸಂಸದ ಮತ್ತು ಹೃದ್ರೋಗ ತಜ್ಞ ಡಾ. ಸಿ.ಎನ್. ಮಂಜುನಾಥ್ ಸ್ಪೋಟಕ ಕಾರಣ ಬಿಚ್ಚಿಟ್ಟಿದ್ದಾರೆ. ಹೃದಯಾಘಾತದಿಂದ ಆಗುವ ಸಾವಿನ ಪ್ರಮಾಣವನ್ನು ಕಡಿಮೆ ಮಾಡಲು ರಾಜ್ಯದ ತಾಲ್ಲೂಕು ಆಸ್ಪತ್ರೆಗಳಲ್ಲಿ ಜಾರಿಯಲ್ಲಿರುವ 'ಸ್ಟೆಮಿ' ಯೋಜನೆಯನ್ನು ಜಾರಿಮಾಡಲಾಗಿದೆ. ಆದರೆ ಅದು ಹಾಸನದಲ್ಲಿ ಇಲ್ಲ ಎಂದು ಹೇಳಿದ್ದಾರೆ.
ಹೃದಯಾಘಾತಕ್ಕೆ 19 ಮಂದಿ ಬಲಿ;
ಕಳೆದ ಒಂದು ತಿಂಗಳಿಂದ ಜಿಲ್ಲೆಯಲ್ಲಿ ಸರಣಿ ಸಾವು ಸಂಭವಿಸುತ್ತಿದ್ದು, ಹೃದಯಾಘಾತಕ್ಕೆ 20, 30, 40 ಹಾಗೂ 60 ವರ್ಷ ಆಸುಪಾಸಿನವರು ಸಾವಿಗೀಡಾಗುತ್ತಿದ್ದು, ಸಾವಿಗೆ ನಿಖರ ಕಾರಣ ಗೊತ್ತಾಗಬೇಕಿದೆ. ಇನ್ನು ಕೆಲಸದ ಒತ್ತಡ ಮತ್ತು ಮಾನಸಿಕ ಖಿನ್ನತೆ ಕಾರಣ ಎಂದು ಇತ್ತೀಚಿಗೆ ಜಿಲ್ಲಾಸ್ಪತ್ರೆಯ ಹಾಸನ ಜಿಲ್ಲಾ ವೈಧ್ಯಾಧಿಕಾರಿ ಡಾ. ಅನಿಲ್ ಅವರು ಈಟಿವಿ ಭಾರತಕ್ಕೆ ಮಾಹಿತಿ ನೀಡಿದ್ದರು. ಹಾಸನ ಜಿಲ್ಲೆಯಲ್ಲಿ ಹರೆಯದ ವಯಸ್ಸಿನವರೇ ದಿಢೀರ್ ಮರೆಯಾಗುತ್ತಿರುವುದು ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ.
ಹಾಸನದಲ್ಲಿ ಸ್ಟೆಮಿ' ಯೋಜನೆ ಇಲ್ಲದ್ದೇ ಕಾರಣವಾಯ್ತಾ?
ಹಾಸನ ಜಿಲ್ಲೆಯಲ್ಲಿ 'ಸ್ಟೆಮಿ' ಯೋಜನೆ ಇಲ್ಲದಿರುವುದೇ ಹೃದಯಾಘಾತದಿಂದ ಸಾವನಪ್ಪುತ್ತಿರುವವರ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗುತ್ತಿರಬಹುದು ಎಂದು ಹೃದ್ರೋಗ ತಜ್ಞ ಡಾ. ಸಿ.ಎನ್. ಮಂಜುನಾಥ್ ಹೇಳಿದ್ದಾರೆ. ಜೊತೆಗೆ ಸ್ಟೆಮಿ ಯೋಜನೆಯನ್ನು ಹಾಸನ ಜಿಲ್ಲೆಯಲ್ಲಿ ತಕ್ಷಣ ಜಾರಿಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.
ಸ್ಟೆಮಿ ಯೋಜನೆ ಎಂದರೇನು?
ಸ್ಟೆಮಿ (ST-Elevation Myocardial Infarction) ಯೋಜನೆಯು ಹೃದಯಾಘಾತದಿಂದ ಆಗುವ ಸಾವಿನ ಪ್ರಮಾಣವನ್ನು ಕಡಿಮೆ ಮಾಡಲು ರೂಪಿಸಲಾದ ಒಂದು ನವೀನ ಚಿಕಿತ್ಸಾ ಕಾರ್ಯಕ್ರಮವಾಗಿದೆ. ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಶ್ರೀ ಜಯದೇವ ಹೃದಯರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ಈ ಯೋಜನೆಯನ್ನು ರಾಜ್ಯದ 86 ತಾಲ್ಲೂಕು ಆಸ್ಪತ್ರೆಗಳಲ್ಲಿ ಜಾರಿಗೊಳಿಸಿದೆ.
ಈ ಯೋಜನೆಯು 'ಹಬ್ ಅಂಡ್ ಸ್ಪೋಕ್' ಮಾದರಿಯಡಿ ಕಾರ್ಯನಿರ್ವಹಿಸುತ್ತದೆ. ಈ ಮಾದರಿಯಲ್ಲಿ, ತಾಲ್ಲೂಕು ಆಸ್ಪತ್ರೆಗಳು 'ಸ್ಪೋಕ್' ಆಗಿ ಕಾರ್ಯನಿರ್ವಹಿಸಿದರೆ, ಜಯದೇವ ಆಸ್ಪತ್ರೆಯು 'ಹಬ್' ಆಗಿ ಕಾರ್ಯನಿರ್ವಹಿಸುತ್ತದೆ.
The district of Hassan is reeling from a disturbing rise in heart attack-related deaths, with 19 people losing their lives in just the last 40 days. The most recent victims include a 38-year-old woman from JP Nagar in Belur town and a 50-year-old soldier from Kembalu village near Channarayapatna.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 10:33 pm
HK News Desk
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
14-10-25 10:36 pm
Mangalore Correspondent
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
ಬಿ.ಸಿ ರೋಡ್ ; ಹೆದ್ದಾರಿ ಬದಿ ಕಾರು ರಿಪೇರಿ ಮಾಡುತ್...
14-10-25 05:46 pm
14-10-25 04:44 pm
HK News Desk
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm