ಬ್ರೇಕಿಂಗ್ ನ್ಯೂಸ್
30-06-25 02:55 pm HK News Desk ಕರ್ನಾಟಕ
ಮೈಸೂರು, ಜೂ 30 : ನಾನು ಡಿ ಕೆ ಶಿವಕುಮಾರ್ ಚೆನ್ನಾಗಿಯೇ ಇದ್ದೇವೆ, ನಮ್ಮ ಸರ್ಕಾರ 5 ವರ್ಷ ಬಂಡೆಯ ರೀತಿ ಭದ್ರವಾಗಿ ಇರುತ್ತದೆ ಎಂದು ಡಿಕೆಶಿ ಕೈಹಿಡಿದು ಘೋಷಿಸಿದ ಸಿಎಂ ಸಿದ್ದರಾಮಯ್ಯ, ನಮ್ಮಬ್ಬರ ನಡುವೆ ತಂದಾಕುವ ಪ್ರಯತ್ನ ಮಾಡಿದರೂ ಅದು ಆಗುವುದಿಲ್ಲ ಎಂದು ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದರು.
ಕೆಲವು ದಿನಗಳಿಂದ ಪವರ್ ಸೆಂಟರ್ ಬದಲಾವಣೆ, ಕ್ರಾಂತಿ, 3 ತಿಂಗಳಲ್ಲಿ ಅಧಿಕಾರ ಕಳೆದುಕೊಳ್ಳಲಿರುವ ಸಿದ್ದರಾಮಯ್ಯ ಹೀಗೆ ವಿವಿಧ ವಿಚಾರಗಳು ಚರ್ಚೆಯಾಗುತ್ತಿದ್ದು, ಇದಕ್ಕೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸೂಕ್ತ ಉತ್ತರ ಕೊಟ್ಟು, ಟೀಕಿಸುವವರು ಬಾಯಿ ಮುಚ್ಚಿಸಲು ಯತ್ನಿಸಿದರು.
ಕೆಆರ್ ಎಸ್ ಗೆ ಬಾಗೀನ ಅರ್ಪಿಸುವ ಹಿನ್ನೆಲೆಯಲ್ಲಿ ಸೋಮವಾರ ಮೈಸೂರು ವಿಮಾನ ನಿಲ್ದಾಣಕ್ಕರ ಆಗಮಿಸಿದ ಸಿಎಂ ಸಿದ್ದರಾಮಯ್ಯ ಮಾಧ್ಯಮದವರೊಂದಿಗೆ ಮಾತನಾಡಿದರು. ನಾವಿಬ್ಬರು ಒಟ್ಟಾಗಿಯೇ ಇದ್ದೇವೆ. ಡಿ ಕೆ ಶಿವಕುಮಾರ್ ಕೈ ಹಿಡಿದು ಮೇಲೆತ್ತಿ ನಾವು ಚೆನ್ನಾಗಿದ್ದೇವೆ ಎಂದು ಮಾಧ್ಯಮಗಳ ಕ್ಯಾಮರಾಗಳತ್ತವೂ ತೋರಿಸಿದರು. ಇನ್ನು ನಮ್ಮ ಬಗ್ಗೆ ಮಾತನಾಡುವ ಶ್ರೀರಾಮಲು ಎಷ್ಟು ಚುನಾವಣೆ ಸೋತಿದ್ದಾನೆ ಹೇಳಿ ಎಂದು ಪ್ರಶ್ನಿಸಿದರು. ಪಾರ್ಲಿಮೆಂಟ್ನಲ್ಲೂ ಸೋತ, ವಿಧಾನ ಸಭೆಯಲ್ಲೂ ಸೋತ, ಅವರೇನು ಭವಿಷ್ಯ ಹೇಳೋದು ಎಂದು ತಿರುಗೇಟು ಕೊಟ್ಟರು.
ದಸರಾ ಉದ್ಘಾಟನೆ ಮಾಡೋದು ನಾನೇ;
ದಸರಾ ಉದ್ಘಾಟನೆ ನೀವು ಮಾಡಲ್ಲ ಎಂದು ಬಿಜೆಪಿ ಹೇಳುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿ, ಬಿಜೆಪಿಯವರು ಬರೀ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು ಎಂದರು. ನಾನೂ ಇವನೂ ಚೆನ್ನಾಗೆ ಇದೀವಿ. ನಾನೇ ದಸರಾ ಉದ್ಘಾಟನೆ ಮಾಡುತ್ತೇನೆ ಎಂದು ಮಾಧ್ಯಮದವರಿಗೆ ಅನಿಸಿದೆ ಅಲ್ವಾ, ಅದೇ ಸತ್ಯ ಎಂದರು.
ಸುರ್ಜೇವಾಲಾ ಭೇಟಿ ವಿಚಾರವಾಗಿ ಮಾತನಾಡಿ, ಅವರು ಈ ರಾಜ್ಯದ ಕಾಂಗ್ರೆಸ್ ಉಸ್ತುವಾರಿ. ಕಾಂಗ್ರೆಸ್ ಶಾಸಕರ ಕಷ್ಟ ಸುಖ ಕೇಳುತ್ತಾರೆ. ಪಕ್ಷ ಸಂಘಟನೆಯ ಬಗ್ಗೆ ಸಲಹೆ ಕೊಡುತ್ತಾರೆ. ಅದು ಅವರ ಕೆಲಸ, ಇದರಲ್ಲಿ ಬೇರೆ ಏನು ವಿಶೇಷ ಇಲ್ಲ ಎಂದರು.
Karnataka Chief Minister Siddaramaiah firmly dismissed ongoing speculation about a rift within the state government and rumors of leadership change, stating that both he and Deputy CM D.K. Shivakumar are working in perfect coordination and the Congress government will complete its full five-year term “as solid as a rock.”
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 10:33 pm
HK News Desk
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
14-10-25 10:36 pm
Mangalore Correspondent
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
ಬಿ.ಸಿ ರೋಡ್ ; ಹೆದ್ದಾರಿ ಬದಿ ಕಾರು ರಿಪೇರಿ ಮಾಡುತ್...
14-10-25 05:46 pm
14-10-25 04:44 pm
HK News Desk
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm