ಬ್ರೇಕಿಂಗ್ ನ್ಯೂಸ್
01-07-25 04:19 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 1 : ಆರ್ ಸಿಬಿ ತಂಡದ ಐಪಿಎಲ್ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೂರ್ವ ವಿಭಾಗದ ಹೆಚ್ಚುವರಿ ಆಯುಕ್ತ ವಿಕಾಸ್ ಕುಮಾರ್ ವಿಕಾಸ್ ಅವರ ಅಮಾನತು ರದ್ದುಗೊಳಿಸುವಂತೆ ಕೇಂದ್ರ ಆಡಳಿತಾತ್ಮಕ ನ್ಯಾಯ ಮಂಡಳಿ (ಸಿಎಟಿ) ಆದೇಶ ಮಾಡಿದ್ದು ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ.
ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ದರು. 64 ಮಂದಿ ಗಾಯಗೊಂಡಿದ್ದರು. ಜನದಟ್ಟಣೆ ನಿಯಂತ್ರಿಸುವಲ್ಲಿ ವೈಫಲ್ಯದಿಂದಾಗಿ ಭಾರಿ ಟೀಕೆ ವ್ಯಕ್ತವಾಗಿತ್ತು. ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ತನಿಖೆಗೆ ವಹಿಸಿದ್ದ ರಾಜ್ಯ ಸರ್ಕಾರ, ವಿಕಾಸ್ ಕುಮಾರ್ ಜೊತೆಗೆ ಹಿಂದಿನ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ದಯಾನಂದ್ ಸೇರಿದಂತೆ ಆರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿತ್ತು.
ಅಮಾನತು ಆದೇಶ ಪ್ರಶ್ನಿಸಿ ವಿಕಾಸ್ ಕುಮಾರ್ ಕೇಂದ್ರ ಆಡಳಿತಾತ್ಮಕ ನ್ಯಾಯ ಮಂಡಳಿಯ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಕೆ. ಶ್ರೀವಾತ್ಸವ, ಸಂತೋಷ್ ಮೆಹ್ರಾ ನೇತೃತ್ವದ ಪೀಠ, ಜೂನ್ 24ರಂದು ಕಾಯ್ದಿರಿಸಿದ್ದ ಆದೇಶವನ್ನು ಇಂದು ಪ್ರಕಟಿಸಿದ್ದು, ವಿಕಾಸ್ ಕುಮಾರ್ ಅವರ ಅಮಾನತು ರದ್ದುಪಡಿಸಿ ಆದೇಶಿಸಿದೆ.
ವಿಕಾಸ್ ಕುಮಾರ್ ಪರ ವಾದಿಸಿದ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ, ಟ್ರಿಬ್ಯೂನಲ್ ವಿಕಾಸ್ ಕುಮಾರ್ ಅಮಾನತು ರದ್ದುಗೊಳಿಸಿದ್ದು, ಸೇವಾ ನಿಯಮಗಳ ಪ್ರಕಾರ ಅವರು ಪ್ರಯೋಜನಗಳಿಗೆ ಅರ್ಹರಾಗಿದ್ದಾರೆ ಎಂದು ದೃಢಪಡಿಸಿದರು. ದಯಾನಂದ್ ಮತ್ತು ತೆಕ್ಕಣ್ಣನವರ್ ಗೆ ಸಂಬಂಧಿಸಿದ ಪ್ರಕರಣಗಳನ್ನು ಸಿಎಟಿ ಪರಿಶೀಲಿಸುತ್ತಿದ್ದು, ಅವರ ಅಮಾನತು ರದ್ದುಗೊಳಿಸುವ ಸಾಧ್ಯತೆಯಿದೆ.
ಕಾಲ್ತುಳಿತ ಘಟನೆ ಹಿನ್ನೆಲೆಯಲ್ಲಿ ಹಿಂದಿನ ಪೊಲೀಸ್ ಕಮಿಷನರ್ ದಯಾನಂದ್, ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ವಿಕಾಸ್, ಕೇಂದ್ರ ವಿಭಾಗದ ಉಪ ಪೊಲೀಸ್ ಆಯುಕ್ತ ಶೇಖರ್ ಎಚ್ ತೆಕ್ಕಣ್ಣವರ್, ಸಹಾಯಕ ಪೊಲೀಸ್ ಆಯುಕ್ತ ಸಿ ಬಾಲಕೃಷ್ಣ, ಕಬ್ಬನ್ ಪಾರ್ಕ್ ಠಾಣೆಯ ಸರ್ಕಲ್ ಪೊಲೀಸ್ ಇನ್ಸ್ಪೆಕ್ಟರ್ ಎ. ಕೆ. ಗಿರೀಶ್ ಅವರನ್ನು ಅಮಾನತು ಮಾಡಲಾಗಿತ್ತು.
In a significant blow to the Karnataka government, the Central Administrative Tribunal (CAT) has revoked the suspension of Bengaluru East Zone Additional Commissioner of Police Vikas Kumar in connection with the tragic stampede incident near Chinnaswamy Stadium during the Royal Challengers Bangalore (RCB) IPL victory celebrations.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm