ಬ್ರೇಕಿಂಗ್ ನ್ಯೂಸ್
04-07-25 06:52 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 4 : ಕನ್ನಡದ ನಟಿ ಮತ್ತು ರಾಜಕಾರಣಿಯೂ ಆಗಿರುವ ಭಾವನಾ ರಾಮಣ್ಣ ಮದುವೆಯಾಗದೆ ತಾಯಿಯಾಗುತ್ತಿದ್ದಾರೆ. ಅವರೀಗ ಆರು ತಿಂಗಳ ಗರ್ಭಿಣಿಯಾಗಿದ್ದು ಅವಳಿ ಮಕ್ಕಳಿಗೆ ಜನ್ಮ ನೀಡಲು ಮುಂದಾಗಿದ್ದಾರೆ. ಐವಿಎಫ್ ಮೂಲಕ ಭಾವನಾ ಗರ್ಭ ಧರಿಸಿದ್ದು ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಇನ್ಸ್ಟಾ ಖಾತೆಯಲ್ಲಿ ಭಾವನಾ ತನ್ನ ಭಾವನೆಗಳನ್ನು ಹಂಚಿಕೊಂಡಿದ್ದು ಸೋಶಿಯಲ್ ಮೀಡಿಯಾದಲ್ಲಿ ಎದುರಾದ ನೆಟ್ಟಿಗರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. 40ರ ಆಸುಪಾಸಿನಲ್ಲಿ ತಾವು ಗರ್ಭಿಣಿಯಾಗಲು ನಿರ್ಧರಿಸಿದ್ದು ಯಾಕೆ..? ಆ ದಾರಿ ಹೇಗಿತ್ತು..? ತಂದೆ ಇಲ್ಲದೆ ಮಕ್ಕಳು ಹೇಗೆ ಬೆಳೆಯಬಹುದು..? ಯಾಕೆ ಸೂಕ್ತ ವಯಸ್ಸಿದ್ದಾಗಲೇ ತಾಯ್ತನದ ಬಗ್ಗೆ ಆಸಕ್ತಿ ಇರಲಿಲ್ಲ ಅನ್ನುವ ಕುರಿತಾಗಿ ಸೋಶಿಯಲ್ ಮೀಡಿಯಾದಲ್ಲಿ ಪ್ರಸ್ತಾಪಿಸಿದ್ದಾರೆ.

"ಇದು ನನ್ನ ಹೊಸ ಅಧ್ಯಾಯ, ಹೊಸ ಲಯ, ನಾನು ಇದನ್ನು ಹೇಳುತ್ತೇನೆಂದು ಎಂದಿಗೂ ಊಹಿಸಿರಲಿಲ್ಲ, ಆದರೆ ಇಲ್ಲಿ ನಾನು ಅವಳಿ ಮಕ್ಕಳೊಂದಿಗೆ ಆರು ತಿಂಗಳ ಗರ್ಭಿಣಿಯಾಗಿದ್ದೇನೆ. ನನಗೆ 20-30 ವರ್ಷ ಇದ್ದಾಗ ತಾಯ್ತನದ ಆಸೆ ನನ್ನ ಮನಸ್ಸಿನಲ್ಲಿ ಇರಲಿಲ್ಲ. 40 ವರ್ಷ ತುಂಬಿದಾಗ, ಆ ಆಸೆಯನ್ನು ನಿರಾಕರಿಸಲಾಗಲಿಲ್ಲ. ಒಂಟಿ ಮಹಿಳೆಯಾಗಿ, ದಾರಿ ಸುಲಭವಾಗಿರಲಿಲ್ಲ. ಅನೇಕ ಐವಿಎಫ್ ಸೆಂಟರ್ಗಳು ನನ್ನನ್ನು ತಿರಸ್ಕಾರ ಮಾಡಿದ್ದವು. ಬಳಿಕ ನಾನು ಡಾ. ಸುಷ್ಮಾರನ್ನು ಭೇಟಿಯಾದೆ. ಅವರು ನನ್ನ ಮೇಲೆ ಯಾವುದೇ ಯಾವುದೇ ಕೀಳು ಭಾವನೆ ಪಡದೇ ಸ್ವಾಗತಿಸಿದ್ರು. ಅವರ ಬೆಂಬಲದೊಂದಿಗೆ, ನಾನು ನನ್ನ ಮೊದಲ ಪ್ರಯತ್ನದಲ್ಲೇ ಗರ್ಭಿಣಿಯಾಗಿದ್ದೇನೆ.
ನನ್ನ ತಂದೆ, ಒಡಹುಟ್ಟಿದವರು ಮತ್ತು ಪ್ರೀತಿ ಪಾತ್ರರು ಹೆಮ್ಮೆ ಮತ್ತು ಪ್ರೀತಿಯಿಂದ ನನ್ನ ಪಕ್ಕದಲ್ಲಿ ನಿಂತರು. ಕೆಲವರು ನನ್ನ ಆಯ್ಕೆಯನ್ನು ಪ್ರಶ್ನಿಸಿದರು, ಆದರೆ ನನ್ನ ಮನಸ್ಸಿನಲ್ಲಿ ನಾನು ಎಲ್ಲದಕ್ಕೂ ಸಿದ್ಧಳಾಗಿದ್ದೆ. ನನ್ನ ಮಕ್ಕಳಿಗೆ ತಂದೆ ಇಲ್ಲದಿರಬಹುದು. ಆದರೆ ಅವರು ಕಲೆ, ಸಂಗೀತ, ಸಂಸ್ಕೃತಿ ಮತ್ತು ಬೇಷರತ್ತಾದ ಪ್ರೀತಿಯಿಂದ ತುಂಬಿದ ಮನೆಯಲ್ಲಿ ಬೆಳೆಯುತ್ತಾರೆ. ದಯೆ, ಆತ್ಮವಿಶ್ವಾಸ ಮತ್ತು ಹೆಮ್ಮೆಯಿಂದ ಬೆಳೆಯುತ್ತಾರೆ. ನಾನು ರೆಬೆಲ್ ಆಗಲು ಈ ಮಾರ್ಗವನ್ನು ಆರಿಸಿಕೊಂಡಿಲ್ಲ, ನನ್ನ ಸತ್ಯವನ್ನು ಗೌರವಿಸಲು ನಾನು ಈ ಮಾರ್ಗವನ್ನ ಆಯ್ಕೆ ಮಾಡಿಕೊಂಡೆ. ನನ್ನ ಕಥೆ, ಒಬ್ಬಳೇ ಒಬ್ಬಳು ಮಹಿಳೆಯಾದರೂ ತನ್ನನ್ನು ತಾನು ನಂಬುವಂತೆ ಪ್ರೇರೇಪಿಸಿದರೆ ಸಾಕು. ಶೀಘ್ರದಲ್ಲೇ, ಎರಡು ಪುಟ್ಟ ಆತ್ಮಗಳು ನನ್ನನ್ನು ಅಮ್ಮ ಎಂದು ಕರೆಯುತ್ತವೆ ಹಾಗೂ ಅದೇ ಎಲ್ಲವೂ ಆಗಿರುತ್ತದೆ" ಎಂದು ಬರೆದಿದ್ದಾರೆ.
Bhavana, who shared her joy about becoming a mother, said that she is legally becoming a mother through IVF without getting married. Bhavana, who is about to give birth to two children as a single parent, is expecting twins through IVF.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm