ಬ್ರೇಕಿಂಗ್ ನ್ಯೂಸ್
04-07-25 10:18 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 4 : ರಾಜ್ಯದಲ್ಲಿ ಹಾಸನ, ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಹೃದಯಘಾತದಿಂದ ಸರಣಿ ಸಾವು ಸಂಭವಿಸುತ್ತಿರುವುದು ಸರ್ಕಾರದ ನಿದ್ದೆಗೆಡಿಸಿದೆ. ಸರಣಿ ಹೃದಯಾಘಾತಕ್ಕೇನು ಕಾರಣ ಎಂಬ ಬಗ್ಗೆ ಅಧ್ಯಯನಕ್ಕೆ ರಾಜ್ಯ ಸರ್ಕಾರ ಎರಡು ಪ್ರತ್ಯೇಕ ತಾಂತ್ರಿಕ ಸಮಿತಿಗಳನ್ನು ರಚಿಸಿದ್ದು ತಜ್ಞರು ಅಧ್ಯಯನ ವರದಿ ತಯಾರಿಸುತ್ತಿದ್ದಾರೆ. ಶುಕ್ರವಾರ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಬೆಂಗಳೂರಿನಲ್ಲಿ ಸಭೆ ನಡೆಸಿದ್ದು, ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.
ತಾಂತ್ರಿಕ ಸಲಹಾ ಸಮಿತಿ ಅಧ್ಯಯನ ನಡೆಸಿ ಸಿದ್ಧಪಡಿಸಿರುವ ವರದಿಯಲ್ಲಿ ಹಲವು ಮಹತ್ವದ ವಿಚಾರಗಳಿದ್ದು ಕೊರೋನಾ ರೋಗದ ಬಳಿಕ ಹೃದಯಾಘಾತ ಹೆಚ್ಚಳವಾಗಿರುವುದನ್ನು ಎತ್ತಿ ತೋರಿಸಿದ್ದಾರೆ. ಕೊರೊನಾ ಸೋಂಕಿಗೊಳಗಾಗಿ ಗುಣಮುಖರಾದವರಿಗೆ ಹೃದಯ ಸಮಸ್ಯೆ ಹೆಚ್ಚು ಕಾಡುತ್ತಿದೆ. ಆದರೆ ಹೃದಯಘಾತಕ್ಕೆ ಕರೋನಾ ಲಸಿಕೆ ಕಾರಣವಲ್ಲ. ಕೊರೊನಾ ವೈರಸ್ ಸಮಸ್ಯೆ ಉಂಟು ಮಾಡುತ್ತಿದೆ ಎಂಬ ಮಾಹಿತಿಗಳು ವರದಿಯಲ್ಲಿವೆಯಂತೆ.
ವರದಿಯಲ್ಲಿ ಹೃದಯದ ಕಾರ್ಯಕ್ಷಮತೆ ಕಡಿಮೆಯಾಗಿರುವ ಬಗ್ಗೆಯೂ ಉಲ್ಲೇಖ ಮಾಡಿದ್ದಾರೆ. ಕೊರೋನಾ ಬಂದ ಮೂರು ವರ್ಷದ ಬಳಿಕ ಹೃದಯ ಸಮಸ್ಯೆ ಕಂಡುಬರುತ್ತಿರುವುದು ಯಾಕೆ ಎನ್ನುವ ಬಗ್ಗೆಯೂ ತಜ್ಞರು ವಿಶ್ಲೇಷಣೆ ನಡೆಸಿದ್ದಾರೆ. ಅಲ್ಲದೆ, ಕರೋನಾ ಸೋಂಕಿಗೆ ಒಳಗಾದವರಿಗೆ ನಿದ್ರಾಹೀನತೆ, ಸುಸ್ತು, ಉಸಿರಾಟದ ಸಮಸ್ಯೆ, ಅತಿಯಾದ ಬೊಜ್ಜು ಕಂಡುಬರುತ್ತಿರುವುದನ್ನು ಪತ್ತೆ ಮಾಡಿದ್ದಾರೆ.
ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ರವೀಂದ್ರನಾಥ್ ನೇತೃತ್ವದಲ್ಲಿ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆದಿದ್ದು ಸಭೆಯಲ್ಲಿ ವರದಿಯ ಬಗ್ಗೆ ಚರ್ಚೆ ನಡೆಸಲಾಯಿತು. ಸಾಧಕ-ಬಾಧಕಗಳ ಕುರಿತು ಚರ್ಚಿಸಿದ್ದು ಅಂತಿಮ ವರದಿ ತಯಾರಿಸಿ ಮುಖ್ಯಮಂತ್ರಿಗೆ ನೀಡಲಿದ್ದಾರೆ.
The Karnataka government has launched an in-depth technical study into the alarming rise in heart attack cases reported across several districts, including Bengaluru and Hassan, following a series of sudden deaths that have raised public concern.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 10:33 pm
HK News Desk
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
14-10-25 10:36 pm
Mangalore Correspondent
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
ಬಿ.ಸಿ ರೋಡ್ ; ಹೆದ್ದಾರಿ ಬದಿ ಕಾರು ರಿಪೇರಿ ಮಾಡುತ್...
14-10-25 05:46 pm
14-10-25 04:44 pm
HK News Desk
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm