ಬ್ರೇಕಿಂಗ್ ನ್ಯೂಸ್
06-07-25 04:50 pm HK News Desk ಕರ್ನಾಟಕ
ಶಿವಮೊಗ್ಗ, ಜುಲೈ 6 : ಶಿವಮೊಗ್ಗ ಜಿಲ್ಲೆಯ ರಾಗಿಗುಡ್ಡದಲ್ಲಿ ನಾಗರ ಕಟ್ಟೆಯ ಮೇಲಿದ್ದ ಗಣಪತಿ ಹಾಗೂ ಶೇಷನಾಗ ವಿಗ್ರಹಗಳನ್ನು ವಿರೂಪಗೊಳಿಸಿ ಕಾಲಿನಿಂದ ಒದ್ದು ಚರಂಡಿಗೆ ಎಸೆದು ದಾರ್ಷ್ಟ್ಯತನ ಮೆರೆದ ಘಟನೆ ನಡೆದಿದ್ದು ಹಿಂದುಗಳಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.
ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯ ಮುಖ್ಯರಸ್ತೆಯಲ್ಲಿ ಇತ್ತೀಚೆಗೆ ಪ್ರತಿಷ್ಠಾಪನೆ ಮಾಡಿದ್ದ ಗಣಪತಿ, ಶೇಷ ನಾಗ ವಿಗ್ರಹಕ್ಕೆ ಒದ್ದು, ನಾಗರ ಕಲ್ಲನ್ನು ಚರಂಡಿಗೆ ಎಸೆದಿರುವ ಆರೋಪ ಕೇಳಿಬಂದಿದೆ. ಅನ್ಯಕೋಮಿನ ಯುವಕರಿಂದ ದುಷ್ಕೃತ್ಯ ನಡೆದಿದೆ ಎನ್ನಲಾಗಿದ್ದು, ಘಟನೆ ಬೆನ್ನಲ್ಲೇ ಹಿಂದೂ ಮುಖಂಡರು ಕೆರಳಿದ್ದಾರೆ. ಇದರಿಂದಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಹಿಂದೂ ದೇವರುಗಳಿಗೆ ಅವಮಾನ ಮಾಡಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಸ್ಪಿ ಜಿ.ಕೆ ಮಿಥುನ್ ಕುಮಾರ್, ಶಿವಮೊಗ್ಗ ಸಬ್ ಡಿವಿಜನ್-2 ಡಿವೈಎಸ್ಪಿ ಸಂಜೀವ್ ಕುಮಾರ್ ದೌಡಾಯಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ.
ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಅರೋಪಿಗಳನ್ನು ಸದ್ದಾಂ ಹಾಗ ರೆಹಮತ್ ಉಲ್ಲಾ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಹಾಗೂ ಎಂಎಲ್ಸಿ ಧನಂಜಯ್ ಸರ್ಜಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರಿಂದ ಮಾಹಿತಿ ಪಡೆದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದ್ದಾರೆ. ನಾಲ್ಕು ವರ್ಷಗಳ ಹಿಂದೆ ಇದೇ ರಾಗಿಗುಡ್ಡದಲ್ಲಿ ಟಿಪ್ಪು ಪ್ರತಿಮೆ ವಿಚಾರದಲ್ಲಿ ಭುಗಿಲೆದ್ದ ಗಲಾಟೆ ಕೋಮು ಗಲಭೆಗೆ ತಿರುಗಿತ್ತು. ತಿಳಿದುಬಂದಿದೆ.ಈ ಬಗ್ಗೆ ಅಧಿಕೃತ ಮಾಹಿತಿ ಪೊಲೀಸರು ನೀಡಿಲ್ಲ. ನಾಲ್ಕು ವರ್ಷಗಳ ಹಿಂದೆ ಇದೇ ರಾಗಿಗುಡ್ಡದಲ್ಲಿ ಟಿಪ್ಪು ಪ್ರತಿಮೆ ವಿಚಾರದಲ್ಲಿ ಭುಗಿಲೆದ್ದ ಗಲಾಟೆ ಕೋಮು ಗಲಭೆಗೆ ತಿರುಗಿತ್ತು.
Tension prevailed in Raghigudda area of Shivamogga district after miscreants desecrated Hindu idols, sparking outrage among Hindu groups. The incident occurred in the Bangarappa Layout, where newly installed idols of Lord Ganesha and Shesha Nag atop a sacred naga platform (nagar katte) were reportedly desecrated and thrown into a nearby drain.
25-08-25 10:55 pm
Bangalore Correspondent
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 10:59 pm
Mangalore Correspondent
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
Dharmasthala, Mask Man, Fake Skull, SIT: ಎಸ್ಐ...
25-08-25 12:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am