ಸಿಎಂ ಬದಲಾವಣೆ ಎಲ್ಲ ಮುಗಿದ ಕಥೆ, ಸೆಪ್ಟೆಂಬರ್‌ನಲ್ಲಿ ಯಾವ ಕ್ರಾಂತಿಯೂ ಇಲ್ಲ, ಕೇವಲ ಶಾಂತಿ ಅಷ್ಟೇ.‌. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ 

11-07-25 05:41 pm       HK News Desk   ಕರ್ನಾಟಕ

ಸಿಎಂ ಬದಲಾವಣೆ ವಿಚಾರ ಮುಗಿದ ಕಥೆ. ಮುಗಿದ ಕಥೆ ಬಗ್ಗೆ ನಾವು ಯಾರು ಮಾತನಾಡಬಾರದು. 5 ವರ್ಷ ನಾನೇ ಸಿಎಂ ಎಂದು ಸಿದ್ದರಾಮಯ್ಯ ಹೇಳಿದ ಮೇಲೆ ಅಲ್ಲಿಗೆ ಎಲ್ಲ ಮುಗಿಯಿತು ಎಂದು ಅರ್ಥ. ಈಗ ಮುಗಿದ ಕಥೆ ಬಗ್ಗೆ ನಮ್ಮ ಪ್ರತಿಕ್ರಿಯೆ ನೀಡಿದರೆ ಅದು ತಪ್ಪಾಗುತ್ತದೆ ಎಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ ನೀಡಿದ್ದಾರೆ. 

ಮೈಸೂರು, ಜುಲೈ 11 : ಸಿಎಂ ಬದಲಾವಣೆ ವಿಚಾರ ಮುಗಿದ ಕಥೆ. ಮುಗಿದ ಕಥೆ ಬಗ್ಗೆ ನಾವು ಯಾರು ಮಾತನಾಡಬಾರದು. 5 ವರ್ಷ ನಾನೇ ಸಿಎಂ ಎಂದು ಸಿದ್ದರಾಮಯ್ಯ ಹೇಳಿದ ಮೇಲೆ ಅಲ್ಲಿಗೆ ಎಲ್ಲ ಮುಗಿಯಿತು ಎಂದು ಅರ್ಥ. ಈಗ ಮುಗಿದ ಕಥೆ ಬಗ್ಗೆ ನಮ್ಮ ಪ್ರತಿಕ್ರಿಯೆ ನೀಡಿದರೆ ಅದು ತಪ್ಪಾಗುತ್ತದೆ ಎಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ ನೀಡಿದ್ದಾರೆ. 

ಸೆಪ್ಟೆಂಬರ್‌ನಲ್ಲಿ ಯಾವ ಕ್ರಾಂತಿಯೂ ಇಲ್ಲ, ಕೇವಲ ಶಾಂತಿ ಅಷ್ಟೇ. ಸಿಎಂ ಎಲ್ಲಾ ಪ್ರಶ್ನೆಗೆ ಉತ್ತರ ಕೊಟ್ಟಿದ್ದಾರೆ. ಅಲ್ಲಿಗೆ ಎಲ್ಲವೂ ಮುಗಿದಿದೆ. ನೀವು ಮತ್ತೆ ಮತ್ತೆ ಅದನ್ನ ಕೇಳಬೇಡಿ ಎಂದು ಸಚಿವೆ ಹೆಬ್ಬಾಳ್ಕರ್ ಹೇಳಿದರು. 

ಮೂರು ತಿಂಗಳಿಗೊಮ್ಮೆ ಗೃಹ ಲಕ್ಷ್ಮಿ ಹಣ ಕೊಡುತ್ತೇವೆ ಎಂಬ ಎಚ್.ಎಂ ರೇವಣ್ಣ ಹೇಳಿಕೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು ನೀಡಿದ್ದಾರೆ. ನಾವು ಪ್ರತಿ ತಿಂಗಳು ಹಣ ಹಾಕುತ್ತಿದ್ದೇವೆ. ಮೇ ವರೆಗೂ ಸಂಪೂರ್ಣವಾಗಿ ಹಣ ಹಾಕಿದ್ದೇವೆ. ನಮಗೆ ಹಣ ಹಾಕಲು ಯಾವ ತೊಡಕುಗಳು ಇಲ್ಲ. ಎಚ್.ಎಂ ರೇವಣ್ಣ ಯಾಕೆ ಆ ರೀತಿ ಹೇಳಿದ್ದಾರೆ ಗೊತ್ತಿಲ್ಲ. ಸ್ಪಷ್ಟೀಕರಣ ಕೇಳಲು ಅವರಿಗೆ ನಾನು ಫೋನ್ ಮಾಡದೆ. ಅವರು ಸಂಪರ್ಕಕ್ಕೆ ಸಿಕ್ಕಿಲ್ಲ. ಅವರು ಸಂಪರ್ಕಕ್ಕೆ ಸಿಕ್ಕಾಗ ಯಾಕೆ ಆ ರೀತಿ ಹೇಳಿದ್ರಿ ಎಂದು ಕೇಳುತ್ತೇನೆ. ನಾವು ಜನರಿಗೆ ಮಾತು ಕೊಟ್ಟಂತೆ ಪ್ರತಿ ತಿಂಗಳು ಹಣ ಹಾಕುತ್ತಿದ್ದೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

Karnataka Minister Lakshmi Hebbalkar has firmly stated that the ongoing speculation about a change in Chief Ministership is now a “closed chapter.” Speaking to reporters at Chamundi Hills in Mysuru, she said, “Once CM Siddaramaiah has clearly declared that he will remain in office for five years, there is nothing more to discuss. Talking about a closed chapter again is inappropriate.”