ಬ್ರೇಕಿಂಗ್ ನ್ಯೂಸ್
12-07-25 10:47 pm HK News Desk ಕರ್ನಾಟಕ
ಶಿವಮೊಗ್ಗ, ಜುಲೈ 12 : ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಸೋಗಾನೆಯ ಕೇಂದ್ರ ಕಾರಾಗೃಹದ ಕೈದಿಯೊಬ್ಬನ ಹೊಟ್ಟೆಯಿಂದ ಮೊಬೈಲ್ ಫೋನ್ ಹೊರಗೆ ತೆಗೆದಿದ್ದಾರೆ.
ಕೈದಿ ದೌಲತ್ ಖಾನ್ ಅಲಿಯಾಸ್ ಗೂಂಡಾ (30) ಎಂಬಾತನ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆ. ಪ್ರಕರಣವೊಂದರಲ್ಲಿ 10 ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿರುವ ದೌಲತ್ ಖಾನ್ ಗೆ, ಕಳೆದ ಜೂನ್ 24 ರಂದು ಹೊಟ್ಟೆ ನೋವು ತೀವ್ರವಾಗಿದ್ದು, ಜೈಲಿನ ಆಸ್ಪತ್ರೆಗೆ ಬಂದು, ತಾನು ಕಲ್ಲು ನುಂಗಿದ್ದೇನೆ ಎಂದು ವೈದ್ಯರಿಗೆ ತಿಳಿಸಿದ್ದ.
ಔಷಧಿ ಕೊಟ್ಟಿದ್ದರೂ ಹೊಟ್ಟೆನೋವು ಹೆಚ್ಚಾದಾಗ ಪರೀಕ್ಷಿಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದರು. ನಂತರ ಎಕ್ಸ್ ರೇ ಮಾಡಿದ್ದ ವೈದ್ಯರಿಗೆ ಅಚ್ಚರಿ ಕಾದಿತ್ತು. ಕೈದಿ ದೌಲತ್ ನ ಹೊಟ್ಟೆಯಲ್ಲಿ ಒಂದು ಇಂಚು ಅಗಲ, ಮೂರು ಇಂಚು ಉದ್ದದ ಮೊಬೈಲ್ ಫೋನ್ ಪತ್ತೆಯಾಗಿದೆ. ಅದನ್ನು ಯಶಸ್ವಿಯಾಗಿ ಈಗ ಹೊರಗೆ ತಂದಿದ್ದಾರೆ.
ಆ ಪೋನ್ ಈಗ ಜೈಲು ಅಧಿಕಾರಿಗಳ ವಶಕ್ಕೆ ನೀಡಲಾಗಿದೆ. ಮೊಬೈಲ್ ಬಳಕೆಗೆ ಜೈಲಿನಲ್ಲಿ ನಿರ್ಬಂಧವಿದ್ದರೂ ಹೇಗೆ ಮೊಬೈಲ್ ಜೈಲಿಗೆ ತಲುಪಿತು ಎಂಬುದರ ಕುರಿತು ತನಿಖೆಗೆ ಅಧಿಕಾರಿಗಳು ಆದೇಶಿಸಿದ್ದಾರೆ. ಕೈದಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಇದರಲ್ಲಿ ಜೈಲು ಸಿಬ್ಬಂದಿ ತೊಡಗಿಸಿಕೊಡಿರುವ ಆರೋಪವೂ ಕೇಳಿಬಂದಿದೆ. ಭದ್ರತಾ ಲೋಪದ ಕುರಿತಾಗಿಯೂ ತನಿಖೆಗೆ ಮುಂದಾಗಿದ್ದಾರೆ.
In a shocking incident at the Shivamogga Central Prison, doctors at the Government McGann Hospital surgically removed a mobile phone from the stomach of an inmate, leaving medical staff stunned.
27-08-25 12:33 pm
Bangalore Correspondent
Dk Shivakumar, Chamundi Hill: ಚಾಮುಂಡಿ ಬೆಟ್ಟ ಹ...
27-08-25 11:48 am
R Ashok, Dharmasthala: ಬುರುಡೆ ಕಥೆ ಹೊರಗಡೆ ಬಂದ...
26-08-25 10:47 pm
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm