ಬ್ರೇಕಿಂಗ್ ನ್ಯೂಸ್
18-07-25 07:11 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 18 : ಸಿಎಂ ಸಿದ್ದರಾಮಯ್ಯ ಅವರ ಫೇಸ್ಬುಕ್ ಪೋಸ್ಟ್ನಲ್ಲಿ ಕನ್ನಡ ಅನುವಾದ ಸಮಸ್ಯೆಯಾಗಿ ಎಡವಟ್ಟಾಗಿತ್ತು. ಆ ತಪ್ಪಾದ ಪೋಸ್ಟ್ ಅನ್ನೇ ಹಲವರು ಹಂಚಿಕೊಂಡಿದ್ದು, ಈ ಬಗ್ಗೆ ಸ್ವತಃ ಸಿಎಂ ಸ್ಪಷ್ಟನೆ ನೀಡಿದ್ದಾರೆ. ಯಾರೂ ಗೊಂದಲಕ್ಕೆ ಒಳಗಾಗಬೇಡಿ ಎಂದು ಮನವಿ ಸಹ ಮಾಡಿದ್ದಾರೆ.
" ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ನಿಧನರಾದ ಬಹುಭಾಷಾ ತಾರೆ, ಹಿರಿಯ ನಟಿ ಬಿ.ಸರೋಜಾದೇವಿ ಅವರ ಪಾರ್ಥಿವ ಶರೀರದ ದರ್ಶನ ಪಡೆದು, ಅಂತಿಮ ನಮನ ಸಲ್ಲಿಸಿದರು " ಎಂದು ಸಿಎಂ ಅಧಿಕೃತ ಫೇಸ್ಬುಕ್ ಖಾತೆಯಿಂದ ಪೋಸ್ಟ್ ಹಾಕಲಾಗಿತ್ತು. ಅದು ಇಂಗ್ಲಿಷ್ಗೆ ಸ್ವಯಂ ಭಾಷಾಂತರವಾಗಿ " Chief Minister Siddaramaiah passed away yesterday " ಎಂದು ಅಪಾರ್ಥ ನೀಡಿತ್ತು. ಅದನ್ನು ಸ್ಕ್ರೀನ್ಶಾಟ್ ತೆಗೆದುಕೊಂಡು ಹಲವರು ಹಂಚಿಕೊಂಡು ವಿಕೃತಿ ಮೆರೆದಿದ್ದರು.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. " ಜುಲೈ 15ರಂದು ಮೃತರಾದ ನಟಿ ಸರೋಜಾದೇವಿ ಅವರಿಗೆ ಅವರ ಮನೆಗೆ ತೆರಳಿ ನನ್ನ ಶ್ರದ್ಧಾಂಜಲಿ ಸಲ್ಲಿಸಿದ್ದೆ. ಈ ಸುದ್ದಿಯನ್ನು ಮುಖ್ಯಮಂತ್ರಿಗಳ ಕಚೇರಿಯ ಅಧಿಕೃತ ಫೇಸ್ಬುಕ್ ಖಾತೆಯಿಂದ ಕನ್ನಡ ಭಾಷೆಯಲ್ಲಿ ಪೋಸ್ಟ್ ಮಾಡಲಾಗಿತ್ತು. ಆದರೆ ಕೆಲವು ಫೇಸ್ಬುಕ್ ಬಳಕೆದಾರರ ವಾಲ್ನಲ್ಲಿ ನನ್ನ ಕನ್ನಡದ ಪೋಸ್ಟ್ನ ಇಂಗ್ಲಿಷ್ ಭಾಷಾಂತರ ಕಾಣಿಸಿಕೊಂಡಿದೆ. ಅಪಾರ್ಥ ಕಲ್ಪಿಸುವ, ಗಂಭೀರವಾದ ದೋಷದಿಂದ ಕೂಡಿದ ಈ ಪೋಸ್ಟ್ ಓದಿದ ಅನೇಕ ಮಂದಿ ನಮ್ಮ ಕಚೇರಿಯಿಂದಲೇ ಇಂಗ್ಲೀಷ್ ಪೋಸ್ಟ್ ಹಾಕಿರಬಹುದೆಂದು ತಿಳಿದು ಟೀಕೆ-ಟಿಪ್ಪಣಿ ಮಾಡಿರುವುದನ್ನು ನಾನು ಗಮನಿಸಿದ್ದೇನೆ. ಈ ಕಾರಣಕ್ಕಾಗಿ ಸ್ಪಷ್ಟೀಕರಣವನ್ನು ನೀಡಬೇಕಾಗಿ ಬಂದಿದೆ " ಎಂದು ಸಿಎಂ ತಿಳಿಸಿದ್ದಾರೆ.
"ಫೇಸ್ಬುಕ್ನಲ್ಲಿ ಆಟೋ ಟ್ರಾನ್ಸ್ಲೇಷನ್ (ಸ್ವಯಂ ಅನುವಾದ) ಎಂಬ ಆಯ್ಕೆಯಿರುವುದೇ ಈ ಅವಾಂತರಕ್ಕೆ ಕಾರಣವಾಗಿದೆ. ಈ ಆಯ್ಕೆ ಮುಕ್ತವಾಗಿದ್ದು, ಇದನ್ನು ರದ್ದುಪಡಿಸುವ ಅವಕಾಶ ಪೋಸ್ಟ್ ಮಾಡುವ ಖಾತೆದಾರನಿಗೆ ಇರುವುದಿಲ್ಲ. ಇದರಿಂದಾಗಿ ಜಗತ್ತಿನ ಯಾವುದೇ ಭಾಷಿಕರು ಇದನ್ನು ತಮ್ಮ ಭಾಷೆಗೆ ಭಾಷಾಂತರಿಸಿಕೊಂಡು ಓದಬಹುದಾಗಿದೆ. ಈ ಸ್ವಯಂ ಅನುವಾದದ ಪ್ರಕ್ರಿಯೆಯೇ ದೋಷಪೂರ್ಣವಾಗಿದೆ. ನಮ್ಮ ಕಚೇರಿ ಕನ್ನಡದಲ್ಲಿ ಮಾಡಿದ್ದ ಮೂಲ ಪೋಸ್ಟ್ ಕೆಲವರ ನ್ಯೂಸ್ ಫೀಡ್ನಲ್ಲಿ ಇಂಗ್ಲಿಷ್ಗೆ ಭಾಷಾಂತರಗೊಂಡು ಕಾಣಿಸಿಕೊಂಡಿದೆ. ಈ ಭಾಷಾಂತರವೇ ದೋಷಪೂರ್ಣವಾಗಿದೆ. ಅಪಾರ್ಥ ಕಲ್ಪಿಸುವ ಇಂಗ್ಲೀಷ್ ಪೋಸ್ಟ್ ನೋಡಿದ ಕೆಲವರು ಕೂಡಲೇ ಅದರ ಕೆಳಭಾಗದಲ್ಲಿರುವ ಮೂಲ ಬರಹವನ್ನು ನೋಡಿ ಎಂಬ ಆಯ್ಕೆಯ ಮೂಲಕ ಮೂಲ ಕನ್ನಡ ಪೋಸ್ಟ್ ನೋಡಿ ಸರಿಯಾದ ಸುದ್ದಿಯನ್ನು ಗ್ರಹಿಸಿ ಕೊಂಡಿದ್ದು ಮಾತ್ರವಲ್ಲ, ಫೇಸ್ಬುಕ್ನ ಸ್ವಯಂ ಭಾಷಾಂತರದಲ್ಲಿ ಕಂಡುಬಂದಿರುವ ದೋಷದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು " ಎಂದಿದ್ದಾರೆ.
ಮೆಟಾದಿಂದ ಸಿಎಂ ಸಿದ್ದರಾಮಯ್ಯನವರ ಕ್ಷಮೆ;
ಈ ವಿಚಾರ ನಮ್ಮ ಗಮನಕ್ಕೆ ಬಂದ ಕೂಡಲೇ ನನ್ನ ಮಾಧ್ಯಮ ಸಲಹೆಗಾರರು ಮೆಟಾದವರನ್ನು ಸಂಪರ್ಕಿಸಿ ದೋಷವನ್ನು ಸರಿಪಡಿಸುವಂತೆ ಮನವಿ ಮಾಡಿದ್ದರು. ಮೆಟಾದವರು ತಮ್ಮ ತಪ್ಪಿಗೆ ಕ್ಷಮೆ ಕೇಳಿ, ದೋಷವನ್ನು ಸರಿಪಡಿಸುವುದಾಗಿ ಇ - ಮೈಲ್ ಮೂಲಕ ತಿಳಿಸಿದ್ದಾರೆ.
A major confusion erupted on social media after an incorrect auto-translation on Facebook led people to mistakenly believe that Karnataka Chief Minister Siddaramaiah had passed away. The error stemmed from a post originally written in Kannada by the CM's official page, paying tribute to late veteran actress B. Saroja Devi, who passed away recently.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 11:22 am
HK News Desk
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
14-10-25 10:13 pm
Mangalore Correspondent
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
ಬಿ.ಸಿ ರೋಡ್ ; ಹೆದ್ದಾರಿ ಬದಿ ಕಾರು ರಿಪೇರಿ ಮಾಡುತ್...
14-10-25 05:46 pm
ಗಾಲ -2025 ಈಜು ಸ್ಪರ್ಧೆ ; ವೀ ಒನ್ ಆಕ್ವಾ ಈಜು ತಂಡಕ...
14-10-25 03:40 pm
14-10-25 04:44 pm
HK News Desk
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm