GST Notice, Union Minister Pralhad Joshi: ರಾಜ್ಯದಲ್ಲಿ ಸಣ್ಣಪುಟ್ಟ ವ್ಯಾಪಾರಿಗಳಿಗೆ ನೋಟಿಸ್ ನೀಡ್ತಿರೋದು ರಾಜ್ಯವೇ ಹೊರತು ಕೇಂದ್ರ ಸರ್ಕಾರ ಅಲ್ಲ ; ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟನೆ 

22-07-25 10:30 pm       Bangalore Correspondent   ಕರ್ನಾಟಕ

ರಾಜ್ಯದಲ್ಲಿ ಸಣ್ಣಪುಟ್ಟ ವ್ಯಾಪಾರಿಗಳಿಗೆ ತೆರಿಗೆ ಬಾಕಿ ನೋಟಿಸ್‌ ನೀಡುತ್ತಿರುವುದು ರಾಜ್ಯ ಸರ್ಕಾರವೇ ಹೊರತು ಕೇಂದ್ರ ಸರ್ಕಾರವಲ್ಲ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟನೆ ನೀಡಿದ್ದಾರೆ. ತೆರಿಗೆ ನೋಟಿಸ್‌ ನೀಡುವಲ್ಲಿ ರಾಜ್ಯ ಸಾರ್ಕಾರದ ಪಾತ್ರವಿಲ್ಲ ಎಂದಿರುವ ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಚಿವ ಜೋಶಿ, ರಾಜ್ಯ ಸರ್ಕಾರ ಮಾಡುವುದೆಲ್ಲ ಮಾಡಿ ಈಗ ತನಗೆ ಸಂಬಂಧವಿಲ್ಲ ಎನ್ನುತ್ತಿರುವುದು ಹಾಸ್ಯಾಸ್ಪದ ಎಂದು ಹೇಳಿದ್ದಾರೆ. 

ಬೆಂಗಳೂರು, ಜುಲೈ 22 : ರಾಜ್ಯದಲ್ಲಿ ಸಣ್ಣಪುಟ್ಟ ವ್ಯಾಪಾರಿಗಳಿಗೆ ತೆರಿಗೆ ಬಾಕಿ ನೋಟಿಸ್‌ ನೀಡುತ್ತಿರುವುದು ರಾಜ್ಯ ಸರ್ಕಾರವೇ ಹೊರತು ಕೇಂದ್ರ ಸರ್ಕಾರವಲ್ಲ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟನೆ ನೀಡಿದ್ದಾರೆ. ತೆರಿಗೆ ನೋಟಿಸ್‌ ನೀಡುವಲ್ಲಿ ರಾಜ್ಯ ಸಾರ್ಕಾರದ ಪಾತ್ರವಿಲ್ಲ ಎಂದಿರುವ ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಚಿವ ಜೋಶಿ, ರಾಜ್ಯ ಸರ್ಕಾರ ಮಾಡುವುದೆಲ್ಲ ಮಾಡಿ ಈಗ ತನಗೆ ಸಂಬಂಧವಿಲ್ಲ ಎನ್ನುತ್ತಿರುವುದು ಹಾಸ್ಯಾಸ್ಪದ ಎಂದು ಹೇಳಿದ್ದಾರೆ. 

ಕರ್ನಾಟಕದಲ್ಲಿ ಸಣ್ಣ ಪುಟ್ಟ ವ್ಯಾಪಾರಿಗಳಿಗೆ ತೆರಿಗೆ ಬಾಕಿ ನೋಟಿಸ್ ಕೊಟ್ಟಿರುವುದು ರಾಜ್ಯದ ತೆರಿಗೆ ಇಲಾಖೆ ಅಧಿಕಾರಿಗಳು. ಹಾಗಿದ್ದರೂ ರಾಜ್ಯ ಸರ್ಕಾರಕ್ಕೂ, ಜಿಎಸ್‌ಟಿ ನೋಟಿಸ್‌ಗೂ ಸಂಬಂಧವಿಲ್ಲ ಎನ್ನುತ್ತ ಜನರ ಕಣ್ಣಿಗೆ ಮಣ್ಣೆರೆಚುವ ಕೆಲಸ ಮಾಡುತ್ತಿದ್ದಾರೆ ಎಂದು ಜೋಶಿ ಟೀಕಿಸಿದ್ದಾರೆ. 

ಬೇರೆಲ್ಲೂ ಇಲ್ಲದ ನೋಟಿಸ್‌ ಇಲ್ಲೇಕೆ? ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದರೆ ಬಹುತೇಕ ಎಲ್ಲ ರಾಜ್ಯಗಳಿಗೂ ಅನ್ವಯಿಸುತ್ತಿತ್ತು. ಆದರೆ, ಬೇರೆ ಯಾವುದೇ ರಾಜ್ಯಗಳಲ್ಲೂ ತೆರಿಗೆ ಇಲಾಖೆ ಅಧಿಕಾರಿಗಳಿಂದ ಸಣ್ಣಪುಟ್ಟ ವ್ಯಾಪಾರಾಸ್ಥರಿಗೆ ಜಿಎಸ್‌ಟಿ ನೋಟಿಸ್ ನೀಡಲಾಗಿಲ್ಲ. ಕರ್ನಾಟಕದಲ್ಲಿ ಮಾತ್ರ ಇದಾಗಿದೆ ಎಂದಿದ್ದಾರೆ. GSTಯಲ್ಲಿ ಕೇಂದ್ರ ಸರ್ಕಾರದ ಅಡಿಯಲ್ಲಿ ʼCGSTʼ ಮತ್ತು ರಾಜ್ಯ ಸರ್ಕಾರಗಳ‌ ಅಡಿಯಲ್ಲಿ ʼSGSTʼ ಎಂದು ಎರಡು ವಿಭಾಗವಿದೆ. ಆದರಂತೆ ಕರ್ನಾಟಕದಲ್ಲಿ ಸಣ್ಣಪುಟ್ಟ ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದು ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆ. ಇದರಲ್ಲಿ ಕೇಂದ್ರ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ಪ್ರಲ್ಹಾದ ಜೋಶಿ ಸ್ಪಷ್ಟಪಡಿಸಿದ್ದಾರೆ.

ಜಿಎಸ್ಟಿ ಕೌನ್ಸಿಲ್‌ನಲ್ಲಿ ಯಾವುದೇ ತೀರ್ಮಾನ‌ ತೆಗೆದುಕೊಳ್ಳಲು ಮಹತ್ವದ ಪಾತ್ರ ವಹಿಸಿರುವುದು ರಾಜ್ಯ ಸರ್ಕಾರಗಳು. ಕೇಂದ್ರ ಸರ್ಕಾರಕ್ಕೆ ಕೇವಲ 3ನೇ ಒಂದು ಭಾಗ ಮಾತ್ರ ಅಧಿಕಾರವಿದೆ. ಉಳಿದ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲಿದೆ. 3ನೇ ಎರಡು ಭಾಗದಷ್ಟು ಅಧಿಕಾರ ಹೊಂದಿರುವ ರಾಜ್ಯ ‌ಸರ್ಕಾರಗಳ ನಿರ್ಣಯವೇ ಇದರಲ್ಲಿ ಅಂತಿಮವಾಗಿರಲಿದೆ ಎಂದೂ ಹೇಳಿದ್ದಾರೆ.‌

Union Minister for Consumer Affairs, Pralhad Joshi, has clarified that the notices issued to small traders regarding pending taxes in Karnataka are the responsibility of the state government and not the central government. His remarks come in response to Deputy Chief Minister D.K. Shivakumar's earlier statement claiming the state had no role in issuing such notices.