ಬ್ರೇಕಿಂಗ್ ನ್ಯೂಸ್
22-07-25 11:10 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 22 : ಧರ್ಮಸ್ಥಳ ಯಾವುದೇ ಒಂದು ಕುಟುಂಬದ ಆಸ್ತಿಯಲ್ಲ. ಇದನ್ನು ಒಂದು ಕುಟುಂಬ ನೋಡಿಕೊಳ್ಳುತ್ತಿದ್ದರೂ ಎಲ್ಲಾ ಭಕ್ತರಿಗೂ ಸೇರಿದ ಸ್ವತ್ತು. ಮಂಜುನಾಥ ಸ್ವಾಮಿಗೆ ಅಪಮಾನವಾದರೆ ನಮಗೂ ಅಪಮಾನವಾದಂತೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ.
ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಪ್ರತಿಕ್ರಿಯೆ ನೀಡಿದರು.
ಎಸ್‌ಐಟಿ ರಚನೆ ಹಿಂದೂ ಪರ ನೀತಿ
“ಧರ್ಮಸ್ಥಳ ಶ್ರೀಕ್ಷೇತ್ರವನ್ನು ರಾಜ್ಯದ ಬಹುತೇಕ ಮಂದಿ ನಂಬಿ ಪೂಜೆ, ಹರಕೆ ಮಾಡಿಕೊಂಡು ಬಂದಿದ್ದಾರೆ. ಕೆಲವು ವಿಚಾರಗಳು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಮಾಡುತ್ತಲೇ ಬಂದಿದೆ. ಈ ವಿಚಾರದಲ್ಲಿ ಜನರ ಅನುಮಾನಗಳನ್ನು ನಿವಾರಣೆ ಮಾಡುವುದು ಸರ್ಕಾರದ ಕರ್ತವ್ಯ. ಇದರಿಂದ ಶ್ರೀಕ್ಷೇತ್ರಕ್ಕೂ ಒಳ್ಳೆಯದು. ಕೆಲವರು ಇದನ್ನು ಹಿಂದೂ ವಿರೋಧಿ ನೀತಿ ಎಂಬ ರೀತಿ ಬಿಂಬಿಸುತ್ತಿದ್ದಾರೆ. ಇದು ಹಿಂದೂ ವಿರೋಧಿ ನೀತಿ ಅಲ್ಲ. ಇದು ಹಿಂದೂಗಳ ಪರವಾದ ನೀತಿ. ಹಿಂದೂಗಳಿಗೆ ಅನ್ಯಾಯ ಆಗಿದ್ದರೆ ಅದನ್ನು ಸರಿಪಡಿಸಬೇಕಾಗಿದೆ. ಈ ಜವಾಬ್ದಾರಿ ಮಾತನಾಡುತ್ತಿರುವವರು ಸೇರಿದಂತೆ ಎಲ್ಲರ ಮೇಲಿದೆ ಎಂದರು
ಯಾರನ್ನೂ ರಕ್ಷಿಸುವ ಅವಮಾನಿಸುವ ಪ್ರಶ್ನೆ ಇಲ್ಲ:
ಇದು ಶ್ರೀಕ್ಷೇತ್ರದ ಪಾವಿತ್ರ್ಯತೆ ನಂಬಿಕೆ ಉಳಿಸಿಕೊಳ್ಳುವ ಕೆಲಸವಾಗಿದೆ. ಇದು ರಾಜಕೀಯ ಕೆಸರೆರೆಚಾಟದಿಂದ ಹೊರಗೆ ಬರಬೇಕು. 40 ವರ್ಷಗಳಿಂದ ಪ್ರತಿ ವರ್ಷ ನಾನು ಶ್ರೀಕ್ಷೇತ್ರಕ್ಕೆ ಹೋಗಿ ಮಂಜುನಾಥನ ದರ್ಶನ ಪಡೆಯುತ್ತೇನೆ. ಇಲ್ಲಿ ನಂಬಿಕೆ ಎಂಬುದು ಬಹಳ ಮುಖ್ಯ. ಇಲ್ಲಿ ಯಾರು ತಪ್ಪು ಮಾಡಿದ್ದಾರೆ, ಯಾರಿಂದ ತಪ್ಪಾಗಿದೆ ಎಂದು ಯಾರಿಗೂ ಗೊತ್ತಿಲ್ಲ. ಶ್ರೀಕ್ಷೇತ್ರದ ಹೆಸರಿನಲ್ಲಿ ಏನಾದರೂ ಅಪಮಾನ ಆಗಿದ್ದರೆ ಇದನ್ನು ಸರಿಪಡಿಸುವ ಜವಾಬ್ದಾರಿ ಇದರ ಉಸ್ತುವಾರಿಗಳ ಮೇಲೆ ಇದೆ. ಇದರಲ್ಲಿ ಯಾರನ್ನೂ ರಕ್ಷಣೆ ಮಾಡುವ ಅಥವಾ ಅಪಮಾನ ಮಾಡುವ ಪ್ರಶ್ನೆಯಲ್ಲ” ಎಂದು ತಿಳಿಸಿದರು.
Senior Congress leader and former MP D.K. Suresh has stated that the Dharmasthala temple is not the private property of any one family, but a sacred place that belongs to all devotees. He emphasized that if Lord Manjunatha is disrespected, it is an insult to all devotees.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 11:22 am
HK News Desk
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
14-10-25 06:39 pm
Mangalore Correspondent
ಬಿ.ಸಿ ರೋಡ್ ; ಹೆದ್ದಾರಿ ಬದಿ ಕಾರು ರಿಪೇರಿ ಮಾಡುತ್...
14-10-25 05:46 pm
ಗಾಲ -2025 ಈಜು ಸ್ಪರ್ಧೆ ; ವೀ ಒನ್ ಆಕ್ವಾ ಈಜು ತಂಡಕ...
14-10-25 03:40 pm
Raju Talikote Death: ಹಿರಿಯ ರಂಗಭೂಮಿ ಕಲಾವಿದ, ಹಾ...
13-10-25 07:47 pm
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
14-10-25 04:44 pm
HK News Desk
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm