ಬ್ರೇಕಿಂಗ್ ನ್ಯೂಸ್
25-07-25 12:25 pm HK News Desk ಕರ್ನಾಟಕ
ಬೆಂಗಳೂರು, ಜುಲೈ 25 : 10 ಲಕ್ಷ ನೀಡುವಂತೆ ಲಂಚ ಕೇಳಿದ ಆರೋಪದಡಿ ಸುಬ್ರಮಣ್ಯಪುರ ಠಾಣೆಯ ಪಿಎಸ್ಐ ಭೈರಪ್ಪ ಹಾಗೂ ಕೆಂಗೇರಿ ಪೊಲೀಸ್ ಠಾಣೆಯ ಪಿಎಸ್ಐ ಮುರುಳಿ ಮೋಹನ್ ವಿರುದ್ಧ ನಗರದ ಲೋಕಾಯುಕ್ತ ಅಧಿಕಾರಿಗಳು ಎಫ್ಐಆರ್ ದಾಖಲಿಸಿಕೊಂಡಿದ್ಧಾರೆ.
ಪ್ರಶಾಂತ್ ನಗರದ ನಿವಾಸಿ ಶಿವಕುಮಾರ್ ಎಂಬವರು ನೀಡಿದ ದೂರು ಆಧರಿಸಿ, ಇಬ್ಬರು ಸಬ್ ಇನ್ಸ್ಪೆಕ್ಟರ್ಗಳ ವಿರುದ್ಧ ಭ್ರಷ್ಟಾಚಾರ ಪ್ರತಿಬಂಧ ಕಾಯ್ದೆಯಡಿ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವುದಾಗಿ ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.
ದೂರುದಾರ ಶಿವಕುಮಾರ್ 10 ಕಳೆದ ವರ್ಷಗಳಿಂದ ರಿಯಲ್ ಎಸ್ಟೇಟ್ ಕೆಲಸ ಮಾಡಿಕೊಂಡಿದ್ದಾರೆ. ಇವರ ಸಂಬಂಧಿ ಪುಟ್ಟಸ್ವಾಮಿ ಅವರಿಗೆ ಸೇರಿದ ನಿವೇಶನದ ಸುತ್ತ ನಿರ್ಮಾಣವಾಗಿದ್ದ ಗೋಡೆ ಒಡೆದು ಕೆಲ ವ್ಯಕ್ತಿಗಳು ನಿವೇಶನ ತನ್ನದೆಂದು ಅತಿಕ್ರಮಕ್ಕೆ ಮುಂದಾಗಿದ್ದರು. ಈ ಬಗ್ಗೆ ಅಸಮಾಧಾನಗೊಂಡ ಪುಟ್ಟಸ್ವಾಮಿ, ಮೋಸದಿಂದ ನಿವೇಶನ ಮಾರಾಟ ಮಾಡಿಸಿರುವುದಾಗಿ ಶಿವಕುಮಾರ್ ವಿರುದ್ಧ ಸುಬ್ರಮಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಬಳಿಕ ತಪ್ಪು ತಿಳುವಳಿಕೆಯಿಂದ ದೂರು ನೀಡಿದ್ದು, ಪ್ರಕರಣವನ್ನು ಹಿಂಪಡೆಯುವುದಾಗಿ ಪುಟ್ಟಸ್ವಾಮಿ ಒಪ್ಪಿಕೊಂಡಿದ್ದರು ಎಂದು ದೂರಿನಲ್ಲಿ ಶಿವಕುಮಾರ್ ತಿಳಿಸಿದ್ದಾರೆ.
ನಿವೇಶನದ ಸುತ್ತ ಗೋಡೆ ಒಡೆದು ಹಾಕಿರುವವರ ವಿರುದ್ದ ಕ್ರಮ ಕೈಗೊಳ್ಳುವಂತೆ ತನಿಖಾಧಿಕಾರಿಯಾಗಿದ್ದ ಪಿಎಸ್ಐ ಬೈರಪ್ಪ ಅವರಿಗೆ ಮನವಿ ಮಾಡಿದ್ದೆ. ಈ ಕುರಿತು ಪಿಎಸ್ಐ ಮುರುಳಿ ಮೋಹನ್ ಅವರ ನಂಬರ್ ನೀಡಿ ಸಂಪರ್ಕಿಸುವಂತೆ ತಿಳಿಸಿದ್ದರು. ಕೆಂಗೇರಿ ಬಳಿಯ ಹೊಟೇಲ್ ವೊಂದರಲ್ಲಿ ಮುರುಳಿ ಅವರನ್ನ ಭೇಟಿ ಮಾಡಿದ್ದರು. ನಿವೇಶನ ವಿಚಾರವಾಗಿ ಭೈರಪ್ಪ ಎಲ್ಲವನ್ನು ಹೇಳಿದ್ದಾರೆ. ನಿವೇಶನವನ್ನು ನಿಮ್ಮ ಸುಪರ್ದಿಗೆ ಕೊಡಿಸಲು ಸಹಾಯ ಮಾಡುತ್ತೇನೆ. ಇದಕ್ಕಾಗಿ 10 ಲಕ್ಷ ನೀಡುವಂತೆ ಡಿಮ್ಯಾಂಡ್ ಮಾಡಿದ್ದು, ಅಡ್ವಾನ್ಸ್ 5 ಲಕ್ಷ ನೀಡುವಂತೆ ಒತ್ತಾಯಿಸಿದ್ದರು'' ಎಂದು ದೂರಿನಲ್ಲಿ ಶಿವಕುಮಾರ್ ಉಲ್ಲೇಖಿಸಿದ್ದಾರೆ. ಸದ್ಯ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವುದಾಗಿ ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.
In a shocking case of alleged corruption, the Lokayukta officials in Bengaluru have registered an FIR against two police sub-inspectors — Bhairappa from Subramanyapura Police Station and Muruli Mohan from Kengeri Police Station — for allegedly demanding a bribe of ₹10 lakh in connection with a land dispute.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm