ಬ್ರೇಕಿಂಗ್ ನ್ಯೂಸ್
30-07-25 10:33 am HK News Desk ಕರ್ನಾಟಕ
ಶಿವಮೊಗ್ಗ, ಜುಲೈ 30 : ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಖಾಸಗಿ ದುರ್ಗಾಂಬ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, 15 ಮಂದಿ ಗಂಭೀರ ಗಾಯಗೊಂಡ ಘಟನೆ ಬುಧವಾರ ಬೆಳಗಿನ ಜಾವ ಸುಮಾರು 3 ಗಂಟೆ ಸುಮಾರಿಗೆ ತಾಲೂಕಿನ ಗಾಜನೂರು ಡ್ಯಾಂ ಬಳಿ ಸಂಭವಿಸಿದೆ.
ಮಂಗಳೂರಿನಿಂದ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಕಡೆ ಹೊರಟಿದ್ದ KA 51 C0146 ದುರ್ಗಾಂಬ ಬಸ್ ಗಾಜನೂರು ಬಳಿ ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಆಂಧ್ರ ಪ್ರದೇಶದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ತೀವ್ರ ಗಾಯಗೊಂಡ ಬಸ್ ಕಂಡಕ್ಟರ್ ಅಣ್ಣಪ್ಪ (40) ಹಾಗೂ ಚಳ್ಳಕೆರೆ ನಿವಾಸಿ ಹರ್ಷಿತ್ (35) ಎಂಬವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದಿಂದ ಶಿವಮೊಗ್ಗ ಮಂಗಳೂರು ರಾಷ್ಟ್ರೀಯ ಹೆದ್ದಾರಿ 169(A) ರಲ್ಲಿ ಕೆಲಕಾಲ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳಕ್ಕೆ ತುಂಗಾ ನಗರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಗುರುರಾಜ್ ಹಾಗೂ ತಂಡ ಭೇಟಿ ನೀಡಿ, ಗಾಯಾಳುಗಳನ್ನು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
ಲಾರಿ ಕತ್ತಲಲ್ಲಿ ನಿಂತಿರುವುದು ಹಾಗೂ ಬಸ್ ವೇಗವಾಗಿ ಚಲಿಸುತ್ತಿರುವುದೇ ಘಟನೆಗೆ ಕಾರಣ ಎಂದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ. ಗಾಯಾಳುಗಳ ಗುರುತು ಪತ್ತೆ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic road accident early Wednesday morning around 3:00 AM, a private Durgaamba bus collided with a stationary lorry near Gajanur Dam in shivamogga, resulting in the death of two passengers and serious injuries to at least 15 others.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm