ಬ್ರೇಕಿಂಗ್ ನ್ಯೂಸ್
30-07-25 05:42 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 30 : ಧರ್ಮಸ್ಥಳ ಪ್ರಕರಣದಲ್ಲಿ ದೂರುದಾರ ಗುರುತಿಸಿದ ಸ್ಥಳಗಳ ಪೈಕಿ ಮೊದಲನೇ ಗುರುತಿನ ಸ್ಥಳವನ್ನು ಅಗೆಯುವ ವೇಳೆ ವಿಶೇಷ ತನಿಖಾ ತಂಡ(ಎಸ್ಐಟಿ)ವು ಮಹತ್ವದ ಸಾಕ್ಷ್ಯಗಳನ್ನು ಪತ್ತೆಹಚ್ಚಿದೆ ಎಂದು ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾರೆ ಎನ್ನಲಾದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ಅವರ ತಾಯಿ ಸುಜಾತಾ ಭಟ್ ಪರ ವಕೀಲ ಮಂಜುನಾಥ್ ಎನ್. ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟನೆ ನೀಡಿರುವ ಅವರು, ಎಸ್ಐಟಿ ಕಾರ್ಯಾಚರಣೆಯು ಪ್ರಕರಣದಲ್ಲಿ ಹೊಸ ಬೆಳವಣಿಗೆಗೆ ದಾರಿ ತೆರೆದಿದೆ. ನಿನ್ನೆ ಮಂಗಳವಾರದ ಕಾರ್ಯಾಚರಣೆ ವೇಳೆ ಸುಮಾರು 2.5 ಅಡಿ ಆಳದಲ್ಲಿ ಕೆಂಪು ಬಣ್ಣದ ರವಿಕೆ, PAN ಕಾರ್ಡ್ ಹಾಗೂ ATM ಕಾರ್ಡ್ ಪತ್ತೆಯಾಗಿದೆ ಎಂದು ಮೂಲಗಳು ದೃಢಪಡಿಸಿವೆ. ಈ ಬೆಳವಣಿಗೆ ತನಿಖೆಗೆ ಹೊಸ ಆಯಾಮ ನೀಡಿದೆ ಎಂದವರು ಹೇಳಿದ್ದಾರೆ.
ಎಸ್ಐಟಿಯು ಈ ಬೆಳವಣಿಗೆ ನಂತರ ತಕ್ಷಣ ಸ್ಥಳದ 10 ಅಡಿ ಆಳದ ವರೆಗೆ ಅಗೆಯುವ ನಿರ್ಧಾರ ತೆಗೆದುಕೊಂಡಿದ್ದು, ಇದು ಅವರ ವೃತ್ತಿಪರ ಬದ್ಧತೆಯನ್ನು ತೋರಿಸುತ್ತದೆ. ಈ ಕಾರ್ಯವು ಶ್ರಮದಾಯಕವಾದರೂ, ಯಾವುದೇ ಸಾಕ್ಷ್ಯವನ್ನು ಕಡೆಗಣಿಸದೆ ಸಮಗ್ರವಾಗಿ ಪರಿಶೀಲಿಸುವ ದೃಢ ಸಂಕಲ್ಪ ಮಾಡಿರುವ ಎಸ್ಐಟಿಯ ಕಾರ್ಯವೈಖರಿಯು ಶ್ಲಾಘನೀಯ ಎಂದು ವಕೀಲ ಮಂಜುನಾಥ್ ಎನ್ ಹೇಳಿದ್ದಾರೆ.
ಪತ್ತೆಯಾಗಿರುವ PAN ಕಾರ್ಡ್ ಮತ್ತು ATM ಕಾರ್ಡ್ ಗಳಲ್ಲಿ ಒಂದರ ಮೇಲೆ ಪುರುಷನ ಹೆಸರು ಮತ್ತು ಇನ್ನೊಂದರಲ್ಲಿ 'ಲಕ್ಷ್ಮಿ' ಎಂಬ ಹೆಸರಿರುವುದು ಕಂಡುಬಂದಿದೆ. ಈ ಸುಳಿವುಗಳು ವಿಚಾರಣೆಗೆ ಹೊಸ ದಿಕ್ಕು ನೀಡಬಹುದು. ಎಸ್ಐಟಿ ಅಧಿಕಾರಿಗಳು ಈ ಪ್ರಮುಖ ಸುಳಿವಿನ ಬೆನ್ನತ್ತಿ ಹೋಗುತ್ತಾರೆ ಎಂಬ ಭರವಸೆಯಿದೆ ಎಂದು ಅವರು ಹೇಳಿದ್ದಾರೆ.
ಇದುವರೆಗೆ ಎಸ್ಐಟಿ ಪ್ರದರ್ಶಿಸಿರುವ ಗಂಭೀರತೆ, ಶಿಸ್ತು ಮತ್ತು ಕಾರ್ಯದಕ್ಷತೆ ನಮಗೆ ಭರವಸೆಯನ್ನು ಹುಟ್ಟುಹಾಕಿದೆ. ಮುಂದಿನ ಸ್ಥಳಗಳ ಪರಿಶೀಲನೆಯ ವೇಳೆ ನಾವು ಅವರ ಕೆಲಸಗಳಲ್ಲಿ ಸಂಪೂರ್ಣ ನಂಬಿಕೆಯನ್ನು ಇಡುತ್ತೇವೆ ಎಂದು ವಕೀಲ ಮಂಜುನಾಥ್ ಎನ್. ಪ್ರಕಟನೆಯಲ್ಲಿ ತಿಳಿಸಿದ್ದಾರೆ.
In a major development in the Dharmasthala case, significant evidence has reportedly been recovered from the first marked site identified by the complainant. The Special Investigation Team (SIT) unearthed an ATM card, a PAN card, and a piece of red cloth while digging at a depth of approximately 2.5 feet, according to a statement released by advocate Manjunath N., representing Sujata Bhatt, the mother of Ananya Bhatt, a medical student who was allegedly missing from Dharmasthala.
25-08-25 03:02 pm
Bangalore Correspondent
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 12:24 pm
Mangalore Correspondent
Fake Human Right, Rowdy Sheeter Madan Bugadi,...
24-08-25 10:49 pm
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
25-08-25 02:29 am
Mangaluru Correspondent
ಮುಸ್ಲಿಂ ಗಂಡನನ್ನು ರಾಡ್ ನಲ್ಲಿ ಹೊಡೆದು ಕೊಲೆಗೈದು ಶ...
24-08-25 10:33 pm
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm