ಬ್ರೇಕಿಂಗ್ ನ್ಯೂಸ್
30-07-25 06:28 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 30 : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ನೂರಾರು ಶವ ಹೂತ ಪ್ರಕರಣಕ್ಕೆ ಸಂಬಂಧಿಸಿ ತನಿಖೆಗೆ ರಚಿಸಲಾಗಿರುವ ಎಸ್ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ಅವರನ್ನು ಬದಲಾಯಿಸುವ ಕುರಿತಾಗಿ ರಾಜ್ಯ ಸರ್ಕಾರ ನಿರ್ಧರಿಸುತ್ತದೆ. ಕೇಂದ್ರ ಸೇವೆಗೆ ಹೋದಲ್ಲಿ ಬೇರೊಬ್ಬರನ್ನು ಆ ಹುದ್ದೆಗೆ ನಿಯೋಜಿಸಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ರಾಜ್ಯದ ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರಣಬ್ ಮೊಹಾಂತಿ ಅವರು ಕೇಂದ್ರ ಸೇವೆಗೆ ಅರ್ಹತೆ ಪಡೆದ ಡಿಜಿಪಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ ಎಂದು ವರದಿಯಾಗಿದ್ದು, ಅವರನ್ನು ಬದಲಿಸುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಪ್ರಣಬ್ ಮೊಹಂತಿ ಕೇಂದ್ರ ಸೇವೆಗೆ ಹೋದರೆ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲಾಗುತ್ತದೆ. ಕಾನೂನು ಪ್ರಕಾರ, ಏನು ಮಾಡಬಹುದು ಎಂಬುದನ್ನು ಪರಿಶೀಲಿಸಲಾಗುತ್ತದೆ. ಪ್ರಣಬ್ ಮೊಹಾಂತಿ ಕೇಂದ್ರ ಸೇವೆಗೆ ನಿಯೋಜನೆಗೊಂಡರೆ ನಮ್ಮಲ್ಲಿ ಹಲವರು ಹಿರಿಯ ಅಧಿಕಾರಿಗಳಿದ್ದಾರೆ. ಎಸ್ಐಟಿ ತನಿಖೆಗೆ ಬೇರೊಬ್ಬ ಅಧಿಕಾರಿಯನ್ನು ನೇಮಕ ಮಾಡುತ್ತೇವೆ ಎಂದರು.

'ಕೇಂದ್ರದಲ್ಲಿ ಸೇವೆ ಸಲ್ಲಿಸುವ ಸಂದರ್ಭದಲ್ಲಿ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿ ಮುಂದುವರಿಯಬಹುದೇ ಅಥವಾ ಬದಲಿಸಬೇಕೇ ಎಂಬ ಬಗ್ಗೆ ನಾವು ಚರ್ಚಿಸುತ್ತೇವೆ. ಕಾನೂನು ಅನುಮತಿಸಿದರೆ ಎಸ್ಐಟಿ ಮುಖ್ಯಸ್ಥರಾಗಿ ಮುಂದುವರಿಯಬಹುದು. ಒಂದು ವೇಳೆ ಅವರನ್ನು ಬದಲಿಸಬೇಕಾಗಿ ಬಂದರೆ, ಸರ್ಕಾರ ಅದೇ ಶ್ರೇಣಿಯ ಅಧಿಕಾರಿಯನ್ನು ನೇಮಿಸುತ್ತದೆ ಎಂದು ಪರಮೇಶ್ವರ್ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಎಸ್ಐಟಿ ತನಿಖೆ ಕುರಿತು ಕೇಳಿದಾಗ, ಧರ್ಮಸ್ಥಳ ಪ್ರಕರಣದ ಎಸ್ಐಟಿ ತನಿಖೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ತನಿಖೆ ಮುಗಿದು ವರದಿ ಬಂದ ನಂತರ ಮಾತನಾಡಬಹುದು. ಅಲ್ಲಿಯವರೆಗೆ ನಾನು ಮಾತನಾಡುವುದಿಲ್ಲ ಎಂದು ಹೇಳಿದರು.
The Karnataka government will decide whether to replace ADGP Pranab Mohanty as the head of the Special Investigation Team (SIT) probing the alleged mass grave case in Dharmasthala, depending on his central service appointment, said Home Minister Dr. G. Parameshwara on Tuesday.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm