ಬ್ರೇಕಿಂಗ್ ನ್ಯೂಸ್
03-08-25 10:52 am HK News Desk ಕರ್ನಾಟಕ
ಕೋಲಾರ, ಆ 03 : ದೇಶಾದ್ಯಂತ ಸುಮಾರು 14 ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿದ್ದ ಭೂಗತ ಪಾತಕಿ ಕವಿರಾಜ್ ಅಲಿಯಾಸ್ ರಾಜ್ನನ್ನು ಕೋಲಾರ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಭೂಗತ ಪಾತಕಿಗಳಾದ ರವಿ ಪೂಜಾರಿ, ಮುತ್ತಪ್ಪ ರೈ ಸಹವರ್ತಿಯಾಗಿರುವ ಆರೋಪಿ ಕವಿರಾಜ್ 2022ರಲ್ಲಿ ನಡೆದಿದ್ದ ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣ ಸೇರಿದಂತೆ ದೇಶಾದ್ಯಂತ 14ಕ್ಕೂ ಹೆಚ್ಚು ವಿವಿಧ ಅಪರಾಧ ಪ್ರಕರಣಗಳಲ್ಲಿನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
14ಕ್ಕೂ ಹೆಚ್ಚು ಕೇಸ್ ;
ಈ ಪೊಲೀಸ್ ಠಾಣೆಗಳಲ್ಲಿದಾಖಲಾಗಿದ್ದ ಕೊಲೆ, ದರೋಡೆ, ವಂಚನೆ, ಬೆದರಿಕೆ, ಕಳ್ಳತನ ಹಾಗೂ ಇತರೆ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಉತ್ತರಾಖಂಡ-ನೇಪಾಳ ಗಡಿಭಾಗ ಮೂಲದ ಆರೋಪಿ ಕವಿರಾಜ್ ಅಲಿಯಾಸ್ ರಾಜ್ ಪತ್ತೆಗಾಗಿ ಕೋಲಾರ ಎಸ್ಪಿ ಬಿ.ನಿಖಿಲ್, ಎಎಸ್ಪಿಗಳಾದ ರವಿಶಂಕರ್, ಜಗದೀಶ್, ಸಿಇಎನ್ ಪೊಲೀಸ್ ಠಾಣೆಯ ಡಿವೈಎಸ್ಪಿ ಆರ್.ರಾಜೇಶ್ ಮಾರ್ಗದರ್ಶನದಲ್ಲಿ, ಆರಕ್ಷಕ ನಿರೀಕ್ಷಕ ಎಸ್.ಆರ್.ಜಗದೀಶ್ ಮತ್ತು ತಂಡದ ಅಂಬರೀಶ್, ಬಾಲಾಜಿ, ಸಂತೋಷ್, ಜಿಲ್ಲಾತಾಂತ್ರಿಕ ತಂಡದ ಮುರಳಿ ಮತ್ತು ಶ್ರೀನಾಥ್ ಆಧುನಿಕ ತಂತ್ರಜ್ಞಾನ ಬಳಸಿ ಆರೋಪಿಯ ಇರುವಿಕೆ ಬಗ್ಗೆ ಖಚಿತ ಮಾಹಿತಿ ಕಲೆ ಹಾಕಿದ್ದರು.
ತಲೆ ಮರೆಸಿಕೊಂಡು ಓಡಾಡುತ್ತಿದ್ದ ಕವಿರಾಜ್ನನ್ನು ದೆಹಲಿ, ಉತ್ತರಪ್ರದೇಶ, ಉತ್ತರಾಖಂಡ ರಾಜ್ಯಗಳಲ್ಲಿಹುಡುಕಾಡಿದ ಬಳಿಕ ಜು.31ರಂದು ಉತ್ತರಪ್ರದೇಶದ ನೋಯ್ಡಾದಲ್ಲಿಬಲೆಗೆ ಬೀಳಿಸಲಾಯಿತು. ಆರೋಪಿಯನ್ನು ಕೋಲಾರದ ಸತ್ರ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದೆ ಎಂದು ಕೋಲಾರ ಎಸ್ಪಿ ಬಿ.ನಿಖಿಲ್ ತಿಳಿಸಿದ್ದಾರೆ.
ಆರೋಪಿ ಮೊಬೈಲ್ ಬಳಸುತ್ತಿರಲಿಲ್ಲ ;
ಕವಿರಾಜ್ ಮೋಸ್ಟ್ ವಾಂಟೆಂಡ್ ಕ್ರಿಮಿನಲ್ ಆಗಿದ್ದ. ಕೊಲೆ ದರೋಡೆ ಅಪಹರಣ ಸೇರಿದಂತೆ ಹಲವಾರು ಕ್ರಿಮಿನಲ್ ಅಪರಾಧಗಳಲ್ಲಿ ಭಾಗಿಯಾಗಿದ್ದ. ಆದರೆ ಆತ ಮೊಬೈಲ್ ಬಳಸುತ್ತಿರಲಿಲ್ಲ. ಹೀಗಾಗಿ ಆತನ ಪತ್ತೆ ದೊಡ್ಡ ಸವಾಲಾಗಿತ್ತು. ಹಲವು ನಗರಗಳ ಪೊಲೀಸರು ಆತನ ಪತ್ತೆಗೆ ಬಲೆ ಬೀಸಿದ್ದರು. ನಮ್ಮ ಕೋಲಾರ ಪೊಲೀಸರು ಸವಾಲಾಗಿ ಸ್ವೀಕರಿಸಿ ಹೆಡೆಮುರಿ ಕಟ್ಟಿ ತಂದಿದ್ದಾರೆ. ಸಿಬ್ಬಂದಿಗೆ ಎಲ್ಲಾ ಶ್ರೇಯಸ್ಸು ಸಲ್ಲಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಪ್ರತಿಕ್ರಿಯಿಸಿದರು.
'ಆರೋಪಿಯ ಪತ್ತೆಯಾಗಿ ಹಲವು ದಿನಗಳಿಂದ ಶೋಧ ಕಾರ್ಯಾಚರಣೆ ನಡೆಸುತ್ತಿದ್ದೆವು. ನಮ್ಮ ಪೊಲೀಸರು ನೋಯಿಡಾದಲ್ಲಿ 10 ದಿನ ಇದ್ದು ತಂತ್ರಜ್ಞಾನ ನೆರವು ಪಡೆದು ಆರೋಪಿಯನ್ನು ಬಂಧಿಸಿದ್ದಾರೆ’ ಎಂದರು. ‘ನೇಪಾಳ ಗಡಿ ಭಾಗದಿಂದ ಬೆಂಗಳೂರಿಗೆ ಬಂದು ನೆಲೆಸಿದ್ದ ಆರೋಪಿಯು ಮಲೇಷ್ಯಾ ಥಾಯ್ಲೆಂಡ್ ಸೇರಿದಂತೆ ವಿವಿಧೆಡೆ ಸಂಪರ್ಕ ಹೊಂದಿದ್ದ. ಬಿಲ್ಡರ್ ಕೊಲೆ ಪ್ರಕರಣದಲ್ಲೂ ಭಾಗಿಯಾಗಿದ್ದ' ಎಂದು ಹೇಳಿದರು.
In a significant breakthrough, the Kolar CEN Police have arrested Kaviraj alias Raj, a most-wanted fugitive and close associate of underworld dons Ravi Poojary and the late Muthappa Rai. The arrest marks a major success in a nationwide manhunt for the criminal, who was absconding in over 14 serious cases, including the high-profile 2022 abduction of former minister Varthur Prakash.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 11:22 am
HK News Desk
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
14-10-25 11:19 am
Mangalore Correspondent
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm