ಬ್ರೇಕಿಂಗ್ ನ್ಯೂಸ್
09-08-25 08:00 pm HK Staff ಕರ್ನಾಟಕ
ಬೆಂಗಳೂರು, ಆ.9 : ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತದಿಂದ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ನಿರ್ಮಾಣಕ್ಕೆ ಮುಂದಾಗಿದೆ. ಬೆಂಗಳೂರಿನ ಬೊಮ್ಮಸಂದ್ರದ ಸೂರ್ಯ ನಗರದಲ್ಲಿ 80,000 ಆಸನ ಸಾಮರ್ಥ್ಯದ ಕ್ರಿಕೆಟ್ ಕ್ರೀಡಾಂಗಣ ಹೊಂದಿರುವ ವಿಶ್ವ ದರ್ಜೆಯ ಕ್ರೀಡಾ ಸಂಕೀರ್ಣವನ್ನು ನಿರ್ಮಿಸುವ ಕರ್ನಾಟಕ ವಸತಿ ಮಂಡಳಿ(ಕೆಎಚ್ಬಿ)ಯ ಪ್ರಸ್ತಾವನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ.
ಬೊಮ್ಮಸಂದ್ರದಲ್ಲಿ ತಲೆ ಎತ್ತಲಿರುವ ಈ ಸ್ಟೇಡಿಯಂ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದ ನಂತರ ಭಾರತದ ಎರಡನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾಗಲಿದೆ. ನರೇಂದ್ರ ಮೋದಿ ಸ್ಟೇಡಿಯಂ 1,32,000 ಪ್ರೇಕ್ಷಕರಿಗೆ ಸ್ಥಳಾವಕಾಶ ಕಲ್ಪಿಸುತ್ತದೆ. ಒಟ್ಟು 1,650 ಕೋಟಿ ರೂಪಾಯಿ ಯೋಜನೆಗೆ ರಾಜ್ಯ ಸರ್ಕಾರದ ಆರ್ಥಿಕ ಬೆಂಬಲವಿಲ್ಲದೆ ಕೆಎಚ್ಬಿ ಸಂಪೂರ್ಣವಾಗಿ ಹಣವನ್ನು ನೀಡುತ್ತದೆ. ಪ್ರಸ್ತಾವಿತ ಕ್ರೀಡಾ ಸಂಕೀರ್ಣ 100 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಲಿದ್ದು, ಇದು ಒಳಾಂಗಣ ಮತ್ತು ಹೊರಾಂಗಣ ಕ್ರೀಡೆಗಳಿಗೆ ಅವಕಾಶ ಕಲ್ಪಿಸುತ್ತದೆ.
ಕ್ರಿಕೆಟ್ ಕ್ರೀಡಾಂಗಣದ ಜೊತೆಗೆ, ಇದು ಎಂಟು ಒಳಾಂಗಣ ಮತ್ತು ಎಂಟು ಹೊರಾಂಗಣ ಕ್ರೀಡೆಗಳು, ಅತ್ಯಾಧುನಿಕ ಜಿಮ್, ತರಬೇತಿ ಕೇಂದ್ರ, ಈಜುಕೊಳ, ಅತಿಥಿ ಗೃಹಗಳು, ಹಾಸ್ಟೆಲ್ಗಳು, ತ್ರೀ ಸ್ಟಾರ್ ಮತ್ತು ಫೈವ್ ಸ್ಟಾರ್ ಹೋಟೆಲ್ಗಳು ಹಾಗೂ ಅಂತರಾಷ್ಟ್ರೀಯ ಕಾರ್ಯಕ್ರಮಗಳನ್ನು ಆಯೋಜಿಸುವ ಸಾಮರ್ಥ್ಯವಿರುವ ಸಮಾವೇಶ ಸಭಾಂಗಣ ಒಳಗೊಂಡಿರುತ್ತದೆ.
ಬೆಂಗಳೂರಿನ ಹೊಸ ಕ್ರೀಡಾಂಗಣವು ಭಾರತದ ಎರಡನೇ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ಆಗಲಿದೆ. ಈಡನ್ ಗಾರ್ಡನ್ಸ್ (68,000 ಸಾಮರ್ಥ್ಯ) ರೀತಿಯ ಸಾಂಪ್ರದಾಯಿಕ ಮೈದಾನಗಳನ್ನು ಇದು ಮೀರಿಸುತ್ತದೆ. ಭವಿಷ್ಯದಲ್ಲಿ ಐಸಿಸಿ ಫೈನಲ್ಗಳನ್ನು ಆಯೋಜಿಸಲು ಪ್ರಮುಖ ಸ್ಟೇಡಿಯಂ ಇದಾಗಲಿದೆ.
In a major boost for sports infrastructure, the Karnataka government has approved plans for a new world-class sports complex in the city, featuring an 80,000-seat cricket stadium. Chief Minister Siddaramaiah has cleared the Karnataka Housing Board’s (KHB) proposal to build the facility at Surya Nagar in Bommasandra, Bengaluru.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm