ಬ್ರೇಕಿಂಗ್ ನ್ಯೂಸ್
10-08-25 01:57 pm Bangalore Correspondent ಕರ್ನಾಟಕ
ಬೆಂಗಳೂರು, ಆ.10 : ಬೆಂಗಳೂರು ನಗರದ ಐಟಿ ಹಬ್ ಎನಿಸಿರುವ ಇಲೆಕ್ಟ್ರಾನಿಕ್ ಸಿಟಿ ಸಂಪರ್ಕಿಸುವ ಆರ್.ವಿ. ರಸ್ತೆ- ಬೊಮ್ಮಸಂದ್ರ ನಡುವಿನ (19.15 ಕಿ.ಮೀ) ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಿದರು. ರಾಗಿಗುಡ್ಡ ಮೆಟ್ರೋ ನಿಲ್ದಾಣದಲ್ಲಿ ಮಳೆಯ ನಡುವೆಯೇ ಪ್ರಧಾನಿ ಮೋದಿ ಹೊಸ ರೈಲು ಸೇವೆಗೆ ಚಾಲನೆ ನೀಡಿದರು. ಈ ಮಾರ್ಗದಲ್ಲಿ ಮೆಟ್ರೋ ರೈಲು ಸೋಮವಾರದಿಂದ ವಾಣಿಜ್ಯ ಸಂಚಾರ ಆರಂಭಿಸಲಿದೆ.
ಮೋದಿಯವರು ಮೆಟ್ರೋ ರೈಲಿನ ಟಿಕೆಟ್ ಪಡೆದು ಸ್ವತಃ ಸ್ಕ್ಯಾನ್ ಮಾಡುವ ಮೂಲಕ ನಿಲ್ದಾಣ ಪ್ರವೇಶಿಸಿದ್ದು ವಿಶೇಷವಾಗಿತ್ತು. ಮೆಟ್ರೋ ಸಂಚಾರದ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಾಥ್ ನೀಡಿದ್ದಾರೆ. ಮೆಟ್ರೋ ನಿಗಮದ ಎಂಟು ಮಂದಿ ನೌಕರರು, ಪ್ರೌಢಶಾಲಾ ವಿದ್ಯಾರ್ಥಿಗಳು ಹಾಗೂ ಸಾಮಾನ್ಯ ಜನರು ಕೂಡ ಪ್ರಧಾನಿ ಜೊತೆಗೆ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ. ಪ್ರಯಾಣದ ವೇಳೆ ಜೊತೆಗಿದ್ದ ಜನರ ಜೊತೆಗೆ ಹರಟುತ್ತಾ ರಾಗುಗುಡ್ಡದಿಂದ ಇಲೆಕ್ಟ್ರಾನಿಕ್ ಸಿಟಿಯ ಕಾರ್ಯಕ್ರಮಕ್ಕೆ ಮೋದಿ ತೆರಳಿದರು.
ಮೆಟ್ರೋ ಹಳದಿ ಮಾರ್ಗದ ಈ ಸೇವೆಯ ರೈಲುಗಳು ಚಾಲಕ ರಹಿತ ಸೇವೆಯಾಗಿರಲಿದೆ. ಪ್ರಧಾನಿ ಸಂಚಾರ ಸಂದರ್ಭದಲ್ಲಿ ಪೈಲಟ್ ವಿನುತಾ ಚಾಲಕನ ಸೀಟಿನಲ್ಲಿ ಇದ್ದರು. ಮೂರು ವರ್ಷದ ವಿಳಂಬದ ಬಳಿಕ ಹಳದಿ ಮಾರ್ಗಕ್ಕೆ ಚಾಲನೆ ನೀಡಲಾಗಿದೆ. ಸದ್ಯ ರೈಲುಗಳ ಕೊರತೆ ಇರುವುದರಿಂದ ಕೆಲವು ತಿಂಗಳ ಕಾಲ 20-25 ನಿಮಿಷಗಳ ಅಂತರದಲ್ಲಿ ರೈಲು ಸಂಚರಿಸುವ ಸಾಧ್ಯತೆಯಿದೆ. ನಿತ್ಯ ಸುಮಾರು 25 ರಿಂದ 30 ಸಾವಿರ ಪ್ರಯಾಣಿಕರು ಈ ಮಾರ್ಗದಲ್ಲಿ ಸಂಚರಿಸುವ ನಿರೀಕ್ಷೆಯಿದೆ.
2026ರ ಮಾರ್ಚ್ ವೇಳೆಗೆ 12 ರೈಲು ಸೇರ್ಪಡೆ ಆಗಲಿದ್ದು, ಒಟ್ಟು 15 ರೈಲುಗಳು ಈ ಮಾರ್ಗದಲ್ಲಿ ಕಾರ್ಯಾಚರಣೆ ಮಾಡಲಿವೆ. ಮುಂದಿನ ದಿಗಳಲ್ಲಿ ಟ್ರಿಪ್ಗಳ ಸಂಖ್ಯೆ ಕೂಡ ಹೆಚ್ಚಾಗಲಿದ್ದು, ನಿತ್ಯ 3.5 ಲಕ್ಷ ಮಂದಿ ಪ್ರಯಾಣಿಸಬಹುದು ಎಂದು ಬಿಎಂಆರ್ಸಿಎಲ್ ಅಂದಾಜಿಸಿದೆ.
ಸದ್ಯಕ್ಕೆ ಹೊಸ ಹಳದಿ ಮಾರ್ಗದ ಟಿಕೆಟ್ ದರ, ರೈಲುಗಳ ಸಂಚಾರದ ಅವಧಿಯನ್ನು ಬೆಂಗಳೂರು ಮೆಟ್ರೋ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಅಧಿಕೃತವಾಗಿ ಒದಗಿಸಿಲ್ಲ. ರಾಗಿಗುಡ್ಡದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ ವರೆಗೆ (ಸಿಎಸ್ಬಿ) ಡಬ್ಬಲ್ ಡೆಕ್ಕರ್ (3.3 ಕಿ.ಮೀ.) ನಿರ್ಮಿಸಲಾಗಿದೆ. ಡಬ್ಬಲ್ ಡೆಕ್ಕರ್ ಫ್ಲೈಓವರ್ನ ಮೇಲ್ಭಾಗದಲ್ಲಿ ನಮ್ಮ ಮೆಟ್ರೋ ರೈಲು ಓಡಾಡಲಿದೆ. ಕೆಳಭಾಗ ವಾಹನಗಳ ಓಡಾಟಕ್ಕೆ ಮೀಸಲಾಗಿದೆ. ಜತೆಗೆ ಈ ಮಾರ್ಗದ ಜಯದೇವ ಇಂಟರ್ ಚೇಂಜ್ ಮೆಟ್ರೋ ನಿಲ್ದಾಣ ಅತೀ ಎತ್ತರದ ಮೆಟ್ರೋ ನಿಲ್ದಾಣ ಎನ್ನಿಸಿದ್ದು ಐದು ಹಂತದ ಸಾರಿಗೆ ವ್ಯವಸ್ಥೆ ನಿರ್ಮಾಣವಾಗಿದೆ. 2026ರ ಡಿಸೆಂಬರ್ಗೆ ಈ ಮಾರ್ಗ ಉದ್ಘಾಟನೆ ಆಗಲಿದ್ದು, ಬಳಿಕವಷ್ಟೆ ಇದರ ಪೂರ್ಣ ಬಳಕೆ ಆಗಲಿದೆ.
Prime Minister Narendra Modi flagged off the much-delayed Yellow Line of Bengaluru’s Namma Metro, connecting R.V. Road Metro Station to Bommasandra. At Ragigudda Metro Station, he flagged off the train, tried the QR code-enabled ticket vending machines and also boarded the inaugural service to Electronic City.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 11:22 am
HK News Desk
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
14-10-25 11:19 am
Mangalore Correspondent
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm