ಬ್ರೇಕಿಂಗ್ ನ್ಯೂಸ್
11-08-25 10:26 pm Bangalore Correspondent ಕರ್ನಾಟಕ
ಬೆಂಗಳೂರು, ಆ.11 : ದೇಶದ ಸಮಗ್ರತೆಗೆ ಧಕ್ಕೆಯಾಗುವ ರೀತಿಯಲ್ಲಿ, ರಾಜ್ಯದ ರಾಜ್ಯಪಾಲರ ಕುರಿತು ಸಾರ್ವಜನಿಕವಾಗಿ ಸಂವಿಧಾನ ವಿರೋಧಿ ಹಾಗೂ ಪ್ರಚೋದನಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಅವರನ್ನು ವಜಾಗೊಳಿಸಬೇಕೆಂದು ಬಿಜೆಪಿ ಮತ್ತು ಜೆಡಿಎಸ್ ಶಾಸಕರು ವಿಧಾನ ಪರಿಷತ್ತಿನ ಸಭಾಪತಿಯವರಿಗೆ ಮನವಿ ಸಲ್ಲಿಸಿ ಒತ್ತಾಯ ಮಾಡಿದ್ದಾರೆ.
ಪರಿಷತ್ ಸದಸ್ಯ ಐವಾನ್ ಡಿಸೋಜಾರವರು 2024ರ ಸೆ.19ರಂದು ಮಂಗಳೂರಿನ ಮಹಾನಗರ ಪಾಲಿಕೆ ಮುಂಭಾಗದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಭೆಯಲ್ಲಿ ಮುಖ್ಯಮಂತ್ರಿಗಳ ವಿರುದ್ಧ ಕೇಳಿಬಂದ ಭ್ರಷ್ಟಾಚಾರದ ಆರೋಪಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರು ಅನುಮತಿ ನೀಡಿರುವುದನ್ನು ಖಂಡಿಸುವ ಸಂದರ್ಭದಲ್ಲಿ, ರಾಷ್ಟ್ರಪತಿಗಳು ರಾಜ್ಯಪಾಲರನ್ನು ವಾಪಸು ಕರೆಸಿಕೊಳ್ಳಬೇಕು, ಇಲ್ಲವಾದಲ್ಲಿ "ಬಾಂಗ್ಲಾ ಅಧ್ಯಕ್ಷರು ರಾತ್ರೋರಾತ್ರಿ ಓಡಿಹೋದಂತೆ ಇಲ್ಲಿಯೂ ಕೂಡಾ ರಾಜ್ಯಪಾಲರು ರಾತ್ರೋರಾತ್ರಿ ಓಡಿಹೋಗುವಂತೆ ಮಾಡುತ್ತೇವೆ" ಎಂದು ಉದ್ರೇಕಕಾರಿ ಭಾಷಣ ಮಾಡಿದ್ದರು.
ಈ ಹೇಳಿಕೆಯ ಪ್ರೇರಣೆಯಿಂದ ಮರುದಿನದ ಪ್ರತಿಭಟನೆಯಲ್ಲಿ ನೂರಾರು ಬೆಂಬಲಿಗರು ಸಾರ್ವಜನಿಕ ಆಸ್ತಿ-ಪಾಸ್ತಿಗಳನ್ನು ನಾಶಗೊಳಿಸಿ, ಬಸ್ಸಿಗೆ ಕಲ್ಲು ತೂರಾಟ ನಡೆಸಿ ದಾಂಧಲೆ ನಡೆಸಿ ಸಾರ್ವಜನಿಕರಲ್ಲಿ ಭೀತಿ ಉಂಟು ಮಾಡಿದ್ದರು. ದಲಿತ ಪಂಗಡಕ್ಕೆ ಸೇರಿದ ಘನತವೆತ್ತ ರಾಜ್ಯಪಾಲರ ವಿರುದ್ಧ ನಿಂದನಾತ್ಮಕ, ಸಂವಿಧಾನ ವಿರೋಧಿ ಹಾಗೂ ಪ್ರಚೋದನಾತ್ಮಕ ಹೇಳಿಕೆ ನೀಡಿರುವುದು ಅತ್ಯಂತ ಖಂಡನೀಯ.
ಈ ರೀತಿಯ ಹೇಳಿಕೆಗಳು ರಾಷ್ಟ್ರದ ಏಕತೆ, ಭದ್ರತೆ ಹಾಗೂ ಸಾಮಾಜಿಕ ಸೌಹಾರ್ದತೆಗೆ ಗಂಭೀರ ಅಪಾಯಕಾರಿಯಾಗಿದ್ದು, ಸಮಾಜಘಾತುಕ ಶಕ್ತಿಗಳಿಗೆ ಪ್ರೋತ್ಸಾಹ ನೀಡುವಂತಿವೆ. ಆದ್ದರಿಂದ, ದೇಶದ ಏಕತೆ ಮತ್ತು ಸಂವಿಧಾನದ ಗೌರವವನ್ನು ಕಾಪಾಡುವ ನಿಟ್ಟಿನಲ್ಲಿ ಐವಾನ್ ಡಿಸೋಜಾ ಅವರನ್ನು ವಿಧಾನ ಪರಿಷತ್ ಸದಸ್ಯತ್ವದಿಂದ ವಜಾ ಮಾಡುವಂತೆ ಈ ಸಂದರ್ಭದಲ್ಲಿ ಆಗ್ರಹಿಸಲಾಯಿತು.
ಈ ವಿಷಯವನ್ನು ಗಂಭೀರ ಪರಿಗಣಿಸಿ, ಪರಿಷತ್ ಗೌರವವನ್ನು ಕಾಪಾಡುವ ನಿಟ್ಟಿನಲ್ಲಿ ಸಭಾಪತಿಗಳು ತಕ್ಷಣ ಕ್ರಮ ಜರುಗಿಸಬೇಕೆಂದು ಶಾಸಕರು ಒತ್ತಾಯಿಸಿದರು. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್ ಮುಖ್ಯ ಸಚೇತಕ ಎನ್. ರವಿಕುಮಾರ್, ಶಾಸಕರಾದ ಟಿ.ಎ ಶರವಣ, ಎಸ್.ವಿ ಸಂಕನೂರ್, ಹನುಮಂತ ನಿರಾಣಿ, ಎಂ.ಜಿ ಮೂಳೆ, ಪ್ರತಾಪ್ ಸಿಂಹ ನಾಯಕ್ , ಗೋವಿಂದರಾಜು, ಶಾಂತರಾಮ್ ಸಿದ್ದಿ, ಡಿ.ಎಸ್ ಅರುಣ್, ಕೆ.ಎಸ್ ನವೀನ, ಡಾ. ಸಾಬಣ್ಣ ತಳವಾರ್, ಡಾ.ಧನಂಜಯ್ ಸರ್ಜಿ ಉಪಸ್ಥಿತರಿದ್ದರು.
BJP and JD(S) legislators have submitted a memorandum to the Chairman of the Karnataka Legislative Council demanding the disqualification of Congress MLC Ivan D’Souza, alleging that he made unconstitutional, derogatory, and provocative remarks against the Governor of Karnataka, Thawar Chand Gehlot.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 11:22 am
HK News Desk
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
14-10-25 11:19 am
Mangalore Correspondent
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm